ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ.
ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ಸಿದ್ದರಾಮಯ್ಯ ಅವರ 40 ವರ್ಷಗಳ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ವಿಚಾರಣೆ ಎದುರಿಸಲಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಬಾಗಲಕೋಟೆ | ಮುಡಾ ಪ್ರಕರಣ; ನ.6ರಂದು ಅರೆಬೆತ್ತಲೆ ಮೆರವಣಿಗೆಗೆ ದಸಂಸ ಕರೆ
ಇನ್ನು ಈಗಾಗಲೇ ಈ ಪ್ರಕರಣದಲ್ಲಿ ಉಳಿದೆಲ್ಲಾ ಆರೋಪಿಗಳ ವಿಚಾರಣೆಯನ್ನು ಲೋಕಾಯುಕ್ತ ನಡೆಸಿದ್ದು ಸಿಎಂ ವಿಚಾರಣೆ ಮಾತ್ರ ಬಾಕಿ ಉಳಿದಿದೆ ಎಂದು ಹೇಳಲಾಗಿದೆ. ಈಗಾಗಲೇ ಎ2 ಆರೋಪಿ ಪಾರ್ವತಿ ಸಿದ್ದರಾಮಯ್ಯ, ಎ3 ಆರೋಪಿ ಮಲ್ಲಿಕಾರ್ಜುನ ಹಾಗೂ ಎ4 ಆರೋಪಿ ದೇವರಾಜು ವಿಚಾರಣೆಯನ್ನು ಲೋಕಾಯುಕ್ತ ನಡೆಸಿದೆ.
ಇನ್ನು ಈ ನಡುವೆ ಸಿದ್ದರಾಮಯ್ಯ ಅವರ ವಿಚಾರಣೆ ನಡೆಯುತ್ತಿಲ್ಲ. ಲೋಕಾಯುಕ್ತ ಅಧಿಕಾರಿಗಳು ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಹಾಗೆಯೇ ಸಿದ್ದರಾಮಯ್ಯ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
