ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಚಿಕ್ಕಬಳ್ಳಾಪುರದ ಮುದಾಸೀರ್ ದಾವೂದ್ ಆಯ್ಕೆಯಾಗಿದ್ದಾರೆ.
ಕೆಪಿವೈಸಿ ಸಮಿತಿ ನೇತೃತ್ವದಲ್ಲಿ ಆನ್‌ಲೈನ್ ಮೂಲಕ ನಡೆದ ಆಂತರಿಕ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಹಾಗೂ ನಗರಸಭೆ ಮಾಜಿ ಸದಸ್ಯರಾದ ಮೊಹಮದ್ ದಾವೂದ್ ಪುತ್ರ ಮುದಾಸೀರ್ ದಾವೂದ್ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಇದನ್ನೂ ಓದಿ : ಅದಾನಿಗಾಗಿ ಗಡಿ ಭದ್ರತಾ ನಿಯಮಗಳನ್ನೇ ಸಡಿಲಿಕೆ ಮಾಡಿದ ಮೋದಿ ಸರ್ಕಾರ; ಸ್ಪಷ್ಟನೆಗೆ ಕಾಂಗ್ರೆಸ್ ಆಗ್ರಹ
ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವುದು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.