ಮುದ್ದೇಬಿಹಾಳ ಕಾಲುವೆ ದುರಂತ: ಸಂತ್ರಸ್ತ ಕುಟುಂಬಕ್ಕೆ ಕಾಂಗ್ರೆಸ್‌ ಮುಖಂಡನಿಂದ ಆರ್ಥಿಕ ನೆರವು

Date:

ಮುದ್ದೇಬಿಹಾಳ ತಾಲೂಕಿನ ಶಿರೋಳ್‌ ಬಳಿ ಚಿಮ್ಮಲಗಿ ಎಡದಂಡೆ ಕಾಲುವೆಯಲ್ಲಿ ನಡೆದ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬವನ್ನು ಭೇಟಿ ಮಾಡಿದ ಅಸ್ಕಿ ಫೌಂಡೋಶನ್‌ ಅಧ್ಯಕ್ಷ ಹಾಗೂ ಕಾಂಗ್ರೆಸ್‌ ಮುಖಂಡ ಸಿ ಬಿ ಅಸ್ಕಿ ಅವರು ಮೃತರ ತಂದೆ ಚಿನ್ನಪ್ಪ ಕೊಣ್ಣೂರಿಗೆ ಸಾಂತ್ವನ ಹೇಳಿ ₹50,000 ಗಳ ಆರ್ಥಿಕ ನೆರವು ನೀಡಿದ್ದಾರೆ.

- Advertisement -

ಅಲೆಮಾರಿ ಸಮುದಾಯಕ್ಕೆ ಸೇರಿದ ಈ ಕುಟುಂಬವು ಆಸ್ತಿಪಾಸ್ತಿ ಇಲ್ಲದೆ ದಿನನಿತ್ಯ ಊರು ತಿರುಗಾಡಿ ಬದುಕು ನಡೆಸುವ ಸ್ಥಿತಿಯಲ್ಲಿದೆ ಎಂದು ಅಸ್ಕಿ ವಿಷಾದ ವ್ಯಕ್ತಪಡಿಸಿದರು. ʼಇದು ಹೃದಯವಿದ್ರಾವಕ ದುರಂತ. ಸಮಾಜ ಕಲ್ಯಾಣ ಇಲಾಖೆಯು ಅಲೆಮಾರಿ ನಿಗಮದ ಮೂಲಕ ಕುಟುಂಬಕ್ಕೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳನ್ನು ತಕ್ಷಣ ವಹಿಸಿಕೊಡಬೇಕುʼ ಎಂದು ಅವರು ಬೇಡಿಕೆ ಇಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಾಲುವೆ ಮುದ್ದೇಬಿಹಾಳ ಪಟ್ಟಣದ ವರಹಲಯದಲ್ಲಿ ಬರುವುದರಿಂದ ಜನವಸತಿ ಪ್ರದೇಶಗಳ ಮೂಲಕ ಹಾದು ಹೋಗುತ್ತದೆ. ಈ ಹಿನ್ನೆಲೆಯಲ್ಲಿ ಪದೇಪದೇ ಅವಘಡಗಳು ಸಂಭವಿಸುತ್ತಿರುವುದನ್ನು ಉಲ್ಲೇಖಿಸಿದ ಅವರು, ತಂಗಡಗಿ ರಸ್ತೆಯಿಂದ ಪಟ್ಟಣದ ಉತ್ತರ ಭಾಗ ಸುತ್ತುವರೆಗೆ, ಸೀರೋಳ್ ರಸ್ತೆಯವರೆಗೆ ಕಾಲುವೆ ಬದಿಯಲ್ಲಿ ಕಬ್ಬಿಣದ ಫೆನ್ಸಿಂಗ್ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದು ಕಡಿಮೆ ವೆಚ್ಚದಾದರೂ ಪರಿಣಾಮಕಾರಿ ಕ್ರಮ. ಜೊತೆಗೆ ಅಪಾಯಕಾರಿ ಜೋನ್ ಎಂದು ಘೋಷಿಸಿ ಎಚ್ಚರಿಕೆಯ ಬೋರ್ಡ್‌ಗಳನ್ನು ಎಲ್ಲೆಲ್ಲಿ ಅಗತ್ಯವೋ ಅಲ್ಲಿ ಅಳವಡಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಮುದ್ದೇಬಿಹಾಳ | ಆಯತಪ್ಪಿ ಕಾಲುವೆಗೆ ಬಿದ್ದ ಯುವತಿ; ರಕ್ಷಿಸಲು ಹೋದ ಸಹೋದರರೂ ನೀರುಪಾಲು

ಈ ಸಂದರ್ಭದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಾಮರಾಜ ಬಿರಾದಾರ, ವೈ ಎಚ್ ವಿಜಯಕರ, ಬಸಲಿಂಗಪ್ಪ ರಕ್ಕಸಿಗಿ ಸೇರಿದಂತೆ ಹಲವುರು ಉಪಸ್ಥಿತರಿದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...