ಮುದ್ದೇಬಿಹಾಳ | ವಿದ್ಯುತ್ ಸಮಸ್ಯೆ: ಹೆಸ್ಕಾಂ ಕಚೇರಿ ಎದುರು ರೈತರ ಪ್ರತಿಭಟನೆ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಉಂಟಾಗುತ್ತಿರುವ ವಿದ್ಯುತ್ ಸರಬರಾಜು ಸಮಸ್ಯೆ, ರೈತರ ಟ್ರಾನ್ಸ್ಫಾರ್ಮರ್ ದುರಸ್ತಿ ಸಮಸ್ಯೆ ಸೇರಿದಂತೆ 19 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರ ಪಟ್ಟಣದಲ್ಲಿ ಹೆಸ್ಕಾಂ ಇಲಾಖೆಯ ಎದುರು ಪ್ರತಿಭಟನೆ ನಡೆಸಿದರು.

- Advertisement -

“ರೈತರ ಜಮೀನಿನಲ್ಲಿ ಟಿಸಿ ( Transformer) ಅಳವಡಿಸಲು ರೈತರಿಂದ ಒಂದು ಸಾವಿರರೂ ಲೈನ್ ಮ್ಯಾನ್ ಗಳು ಬೇಡಿಕೆ ಇಡುತ್ತಿದ್ದಾರೆ. ತಂಗಡಗಿ, ಢವಳಗಿ, ಅಗಸಬಾಳ, ಚೋಂಡಿ, ಜಲಪುರ ಗೋನಾಳ ಗುಡಿಹಾಳ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಲೈನ್ ಮೆನ್ ಗಳು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ರೈತರು, ತಳಕ್ಕೆ ಬಸವನ ಬಾಗೇವಾಡಿ ವಿಭಾಗದ ಎ ಇ ಇ ಆಗಮಿಸಬೇಕು” ಎಂದು ಪಟ್ಟು ಹಿಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ನಂತರ ಎ ಇ ಇ ಬಿರಾದರ ಸ್ಥಳಕ್ಕೆ ಆಗಮಿಸಿದಾಗ ಎಸ್ಕಾಂ ಸಿಬ್ಬಂದಿ ವಿರುದ್ಧ ಹಲವು ಆರೋಪಗಳು ಕೇಳಿ ಬಂದವು, “ಸೆಕ್ಷನ್ ಅಧಿಕಾರಿ ಎಲಗೋಡ ಅವರು 12 ವರ್ಷವಾದರೂ ಒಂದೇ ಸ್ಥಳದಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದು, ರೈತರು ವಿದ್ಯುತ್ ಸಮಸ್ಯೆ ಹೇಳಿಕೊಂಡರೆ ಹಣಕ್ಕೆ ಬೇಡಿಕೆ ಇಡುತ್ತಾರೆ. ಕೂಡಲೇ ಅವರನ್ನು ಜಿಲ್ಲೆಯಿಂದ ವರ್ಗಾಯಿಸಬೇಕು ಹಾಗೂ ಲೈನ್ ಮ್ಯಾನ್ ಮಂಜುನಾಥ್ ಅವರನ್ನು ಅಮಾನತುಗೊಳಿಸಬೇಕು” ಎಂದು ಆಗ್ರಹಿಸಿದರು.

ಬಸವನಬಾಗೇವಾಡಿ ವಿಭಾಗದ ಹೆಸ್ಕಾಂ ಎ ಇ ಸಿದ್ದರಾಮ ಬಿರಾದಾರ ಮಾತನಾಡಿ, “ರೈತರ ಟ್ರಾನ್ಸ್ಫಾರ್ಮರ್ ಸುಟ್ಟರೆ ಅದನ್ನು ದುರಸ್ತಿ ಮಾಡಿ, ಮರಳಿ ಅಳವಡಿಸುವವರೆಗೂ ಉಚಿತ ಸೇವೆ ಇರುತ್ತದೆ. ರೈತರು ಯಾವುದೇ ಸಿಬ್ಬಂದಿಗೆ ಹಣ ನೀಡುವ ಅವಶ್ಯಕತೆ ಇಲ್ಲ. ರೈತರು ಅಕ್ರಮವಾಗಿ ಪಂಪ್ಸೆಟ್ ಬಳಕೆಯನ್ನು ನಿಲ್ಲಿಸಿ ಇಲಾಖೆಯೊಂದಿಗೆ ಕೈಜೋಡಿಸಿದರೆ ಯಾವುದೇ ವಿದ್ಯುತ್ ಸಮಸ್ಯೆ ಎದುರಾಗುವುದಿಲ್ಲ” ಎಂದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ, ಕಲ್ಲೂ ಸೊನ್ನದ, ಪ್ರಧಾನ ಕಾರ್ಯದರ್ಶಿ ರಾಹುಲ ಕೋಪಕಡ್ಡಿ, ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಸೇರಿದಂತೆ ನೂರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ)...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...