ಮುದ್ದೇಬಿಹಾಳ | ಶಾಸಕ ನಾಡಗೌಡ ಅವರಿಗೆ ಸಚಿವ ಸ್ಥಾನ ನೀಡಲು ಮಲ್ಲು ತಳವಾರ ಆಗ್ರಹ

Date:

ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಸ್ತಿತ್ವ ಉಳಿಸಲು ಹಾಗೂ ಬಲಪಡಿಸಲು ದಶಕಗಳಿಂದ ಶ್ರಮಿಸುತ್ತಿದ್ದಾರೆ. ಪಕ್ಷದ ಕಷ್ಟದ ಕಾಲದಲ್ಲೂ ತ್ಯಾಗ ಮತ್ತು ಸತ್ಯನಿಷ್ಠೆಯಿಂದ ಕಾರ್ಯನಿರ್ವಹಿಸಿದ ಗೌರವ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ನಾಯಕ ಸಿ ಎಸ್ ನಾಡಗೌಡ ಅವರಿಗೆ ಸಲ್ಲುತ್ತದೆ. ಹಾಗಾಗಿ ಅವರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ದೌರ್ಜನ್ಯ ತಡೆ ಸಮಿತಿ ಸದಸ್ಯ ಮಲ್ಲು ತಳವಾರ ಆಗ್ರಹಿಸಿದ್ದಾರೆ.

- Advertisement -

ಮುದ್ದೇಬಿಹಾಳ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಜನರ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಇಂತಹ ನಾಯಕರಿಗೆ ಸಚಿವ ಸ್ಥಾನ ನೀಡಲೇಬೇಕು. ಸಿಎಸ್ ನಾಡಗೌಡರ ರಾಜಕೀಯ ಜೀವನ ಶುದ್ಧ ಮತ್ತು ಪ್ರಾಮಾಣಿಕತೆ ಮಾದರಿಯಾಗಿದೆ. ತಾಲೂಕಿನ ಅಭಿವೃದ್ಧಿಗೆ ಅವರು ಅನೇಕ ಯೋಜನೆಗಳನ್ನು ತರಿಸಿದ್ದು,ರಸ್ತೆ, ವಿದ್ಯುತ್, ನೀರು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶಾಶ್ವತ ಬದಲಾವಣೆ ತಂದಿದ್ದಾರೆ. ಇಂತಹ ಜನಪ್ರಿಯ ನಾಯಕರಿಗೆ ಸಚಿವ ಸ್ಥಾನ ದೊರೆತರೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತಷ್ಟು ವೇಗ ಪಡೆಯುತ್ತದೆ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿ: ಮುದ್ದೇಬಿಹಾಳ | ಆಯತಪ್ಪಿ ಕಾಲುವೆಗೆ ಬಿದ್ದ ಯುವತಿ; ರಕ್ಷಿಸಲು ಹೋದ ಸಹೋದರರೂ ನೀರುಪಾಲು

ನಾಡಗೌಡರ ಹೋರಾಟ ಮನೋಭಾವ ಮತ್ತು ಜನಪರ ನೆರವುಗಳಿಂದ ಯುವ ನಾಯಕರಿಗೆ ಪ್ರೇರಣೆ ದೊರೆಯುತ್ತದೆ. ಗ್ರಾಮ ಮಟ್ಟದಿಂದಲೂ ಜನರು ಅವರ ಹೆಸರಿನಲ್ಲಿ ವಿಶ್ವಾಸ ಹೊಂದಿದ್ದಾರೆ. ಪಕ್ಷದ ಉನ್ನತ ನಾಯಕತ್ವ ಈ ಭಾವನೆ ಗೌರವಿಸಿ ಸಚಿವ ಸ್ಥಾನ ನೀಡಬೇಕು. ಇದು ಕಾಂಗ್ರೆಸ್ ಪಕ್ಷದ ಬಲವರ್ದನೆಗೆ ಸಹಕಾರಣವಾಗುತ್ತದೆ. ತಾಲೂಕಿನ ಹಲವಾರು ಹಿರಿಯ ಕಾಂಗ್ರೆಸ್ ಮುಖಂಡರು, ಯುವ ನಾಯಕರು ಮತ್ತು ಕಾರ್ಯಕರ್ತರು ಸಹ ನಾಡಗೌಡರಿಗೆ ಸಚಿವ ಸ್ಥಾನ ನೀಡುವ ಒತ್ತಾಯ ವ್ಯಕ್ತಪಡಿಸಿದ್ದು, ಜಿಲ್ಲಾ ಮಟ್ಟದಲ್ಲಿ ಸಹ ಬೆಂಬಲ ಅಭಿಯಾನ ಆರಂಭವಾಗಿದೆ. ನಾಡಗೌಡರಿಗೆ ನ್ಯಾಯ ನ್ಯಾಯ ಸಿಗಲಿ ಎಂಬ ಘೋಷಣೆಯೊಂದಿಗೆ ಕಾರ್ಯಕರ್ತರು ಸಹಿ ಅಭಿಯಾನ, ಪೋಸ್ಟರ್ ಅಭಿಯಾನ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ಅಭಿಯಾನ ಶೀಘ್ರದಲ್ಲೇ ಆರಂಭಿಸಲಿದ್ದಾರೆ ಎಂದು ತಿಳಿಸಿದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...