ಮುದ್ದೇಬಿಹಾಳ | ಮುಸ್ಲಿಂ ಅಭ್ಯರ್ಥಿಗೆ ಪಪಂ ಅಧ್ಯಕ್ಷ ಸ್ಥಾನ ನೀಡಲು ಶಿವಾನಂದ ವಾಲಿ ಮನವಿ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯತಿಯ ಮೊದಲ ಅವಧಿಯ ಉಳಿದ 15 ತಿಂಗಳ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮಾಜದವರಿಗೆ ನೀಡಬೇಕು ಎಂದು ಯುವ ಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಆಗ್ರಹಿಸಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಳೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾಲತವಾಡ ಪಟ್ಟಣ ಪಂಚಾಯಿತಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಮುಸ್ಲಿಂ ಸಮುದಾಯ ನಿರ್ಣಾಯಕ ಪಾತ್ರ ವಹಿಸಿದೆ. ಕೇವಲ ಮತದಾನದಲ್ಲಷ್ಟೇ ಅಲ್ಲದೆ, ಚುನಾವಣೆಯ ಪ್ರತಿ ಹಂತದಲ್ಲೂ ಪಕ್ಷದ ಕಾರ್ಯಚಟುವಟಿಕೆಗಳಿಗೆ ಮುಸ್ಲಿಂ ಸಮಾಜ ಸಂಪೂರ್ಣ ಬೆಂಬಲ ನೀಡಿದೆ. ಇಂತಹ ಸಂದರ್ಭದಲ್ಲಿ ಅವರಿಗೆ ರಾಜಕೀಯ ಪ್ರತಿನಿಧಿತ್ವ ನೀಡುವುದು ಅವಶ್ಯಕತೆಯಷ್ಟೇ ಅಲ್ಲ, ಸಾಮಾಜಿಕ ನ್ಯಾಯದ ಪ್ರತಿಬಿಂಬವೂ ಆಗಿದೆ. ಮುಂದಿನ ದಿನಗಳಲ್ಲಿ ಪಟ್ಟಣ ಪಂಚಾಯಿತಿ ಅಭಿವೃದ್ಧಿಗೆ ಮುಸ್ಲಿಂ ಸಮಾಜದ ನಾಯಕತ್ವ ಸಕಾರಾತ್ಮಕ ಮತ್ತು ಪರಿಣಾಮಕಾರಿ ಪಾತ್ರ ವಹಿಸಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನೂ ಓದಿ: ವಿಜಯಪುರ | ಪಂಚ ಗ್ಯಾರಂಟಿಗಳ ಕುರಿತು ಜನಜಾಗೃತಿ; ಎಲ್‌ಇಡಿ ಪ್ರದರ್ಶನ ವಾಹನಕ್ಕೆ ಚಾಲನೆ

“ನಾಲತವಾಡದ ಸಮಗ್ರ ಅಭಿವೃದ್ಧಿ, ಶಾಂತಿ ಹಾಗೂ ಸಾಮಾಜಿಕ ಒಗ್ಗಟ್ಟಿಗೆ ಎಲ್ಲ ಸಮುದಾಯಗಳ ಸಹಕಾರ ಅಗತ್ಯವಾಗಿದ್ದು, ಮುಸ್ಲಿಂ ಸಮಾಜಕ್ಕೆ ಅವಕಾಶ ನೀಡುವುದರಿಂದ ರಾಜಕೀಯದಲ್ಲಿ ಸಮಾನತೆ ಮತ್ತು ವಿಶ್ವಾಸ ಮತ್ತಷ್ಟು ಬಲಗೊಳ್ಳಲಿದೆ. ರಾಜ್ಯ ಹಾಗೂ ತಾಲೂಕು ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಮುಸ್ಲಿಂ ಸಮಾಜ ಮಹತ್ವದ ಪಾತ್ರ ವಹಿಸಿದೆ. ನಾಲತವಾಡ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿಯೂ ಒಗ್ಗಟ್ಟಿನಿಂದ ಮತದಾನ ಮಾಡಿ ಪಕ್ಷದ ಗೆಲುವಿಗೆ ಕಾರಣವಾಗಿದ್ದಾರೆ. ಆದ್ದರಿಂದ ಅವರಿಗೆ ಸೂಕ್ತ ಸ್ಥಾನಮಾನ ನೀಡುವುದು ಪಕ್ಷದ ನೈತಿಕ ಕರ್ತವ್ಯವಾಗಿದೆ. ಹೀಗಾಗಿ, ನಾಲತವಾಡ ಪಂಚಾಯಿತಿಯ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮಾಜ ಕೈ ನೀಡುವಂತೆ ಸಂಬಂಧಿಸಿದ ಶಾಸಕರು ಹಾಗೂ ಪಕ್ಷದ ನಾಯಕರು ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಬರ ಘೋಷಣೆ ರೈತರಿಗೆ ಮಾಡಿದ ಅವಮಾನ: ಚನ್ನರಾಯಪ್ಪ ಟೀಕೆ

ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ರೈತರಿಗೆ ₹2,500 ಆರ್ಥಿಕ ನೆರವು ನೀಡಲು...

ಧಾರವಾಡ | ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ: ಡಾ. ರಾಘವೇಂದ್ರ ಪಾಟೀಲ

"ಭಾರತದ ಸಂವಿಧಾನ ಜನರ ಅಶೋತ್ತರಗಳನ್ನು ಪ್ರತಿ ಬಿಂಬಿಸುವ ಕೃತಿಯಾಗಿದೆ. ಭಾರತದ ಸಂವಿಧಾನ...

ಹಾವೇರಿ | ಬೆಟಗೇರಿ ಕೃಷ್ಣಶರ್ಮ, ವಿ.ಕೃ. ಗೋಕಾಕರು ಕನ್ನಡ ವಿವೇಕ ಕಟ್ಟಿದವರು: ಕವಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ

ಬೆಟಗೇರಿ ಕೃಷ್ಣಶರ್ಮ ಮತ್ತು ವಿ.ಕೃ. ಗೋಕಾಕರು ತಮ್ಮ ಬರವಣಿಗೆಯಲ್ಲಿ ನೆಲದ ಸಂವೇದನೆಗಳ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...