ಮುದ್ದೇಬಿಹಾಳ | ಖಾಸಗಿ ಶಾಲೆಗಳನ್ನು ಮೀರಿಸುವ ಶಿಕ್ಷಕರು ನಮ್ಮಲ್ಲಿದ್ದಾರೆ: ಖಾಜಿ

Date:

ಖಾಸಗಿ ಶಾಲೆಗಳನ್ನು ಮೀರಿಸಬಲ್ಲ ಶಿಕ್ಷಕ ಬಳಗ ನಮ್ಮಲ್ಲಿದೆ. ಮಕ್ಕಳ ಕಲಿಕೆಯಲ್ಲಿ ನವೀನ ಪ್ರಯೋಗಗಳನ್ನು ಮಾಡುತ್ತಿದ್ದು, ನಮ್ಮ ಶಿಕ್ಷಕರು ಹೆಚ್ಚಿನ ಶ್ರಮ ವಹಿಸಿ ಮಕ್ಕಳ ಭವಿಷ್ಯ ರೂಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಉರ್ದು ಸ್ಕೂಲ್ ಮುಖ್ಯ ಶಿಕ್ಷಕ ಎ ಎಚ್ ಖಾಜಿ ಹೇಳಿದರು.

- Advertisement -

ಮಕ್ಕಳ ದಿನಾಚರಣೆ ಹಾಗೂ ಪೋಷಕರ ಸಭೆಯಲ್ಲಿ ಮಾತನಾಡಿ ಅವರು, “ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಸಮರ್ಥವಾಗಿ ಬಳಸುತ್ತಿದ್ದೇವೆ. ಪಾಲಕರು ಶಾಲೆಯೊಂದಿಗೆ ಕೈಜೋಡಿಸಿ ಮಕ್ಕಳ ಜವಾಬ್ದಾರಿಯನ್ನು ಅರಿತುಕೊಂಡು ದಿನನಿತ್ಯ ಶಾಲೆಯಲ್ಲಿ ನಡೆಯುವ ಕಲಿಕೆಯ ಬಗ್ಗೆ ಮನೆಯಲ್ಲಿ ಮಾಹಿತಿ ಪಡೆದುಕೊಳ್ಳಬೇಕು. ಮಕ್ಕಳೊಂದಿಗೆ ಕುಳಿತು ಶಿಕ್ಷಕರು ಕಲಿಸಿದ ಪಾಠಗಳನ್ನು ಮರು ಓದಿಸಿದರೆ ಅವರ ಜ್ಞಾನ ಮತ್ತಷ್ಟು ವೃದ್ಧಿಯಾಗುತ್ತದೆ. ನಲಿಕಲಿ ವಿಧಾನ ಮಕ್ಕಳಿಗೆ ಬಹಳ ಉಪಯುಕ್ತವಾಗಿದ್ದು, ಇಂತಹ ಕಲಿಕೆ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವುದಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಬಹುಮಾನ ವಿತರಣೆ: ಮಕ್ಕಳ ದಿನಾಚರಣೆ ಪ್ರಯುಕ್ತ ಶಾಲೆಯಲ್ಲಿ ಹಮ್ಮಿಕೊಂಡ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಇದನ್ನೂ ಓದಿ: ಮುದ್ದೇಬಿಹಾಳ | ಸ್ಮಶಾನ ಜಾಗದ ಅತಿಕ್ರಮಣ ಕಟ್ಟಡಗಳ ತೆರವಿಗೆ ವಿಳಂಬ: ತಪ್ಪಿತಸ್ಥರ ವಿರುದ್ಧ ಶಿವಾನಂದ ವಾಲಿ ದೂರು

ಕಾರ್ಯಕ್ರಮದಲ್ಲಿ ಪತ್ರಕರ್ತ ಮಹ್ಮದ್ ಯೂನುಸ್ ಮೂಲಿಮನಿ,‌ ಶಿಕ್ಷಕಿ ಹಾಸಿಂಬಿ ನದಾಫ, ಶಿಕ್ಷಕಿ ಸಾಯಿಮಾ ತಹಸೀನ ಹ ವಾಲ್ದಾರ, ಶಿಕ್ಷಕಿ ಶಂಶಾದ್ ಬೇಗಂ ಸಿಕ್ಕಲಗಾರ, ಎಸ್ಡಿಎಂಸಿ ಅಧ್ಯಕ್ಷ ಅಲ್ತಾಫ ಕೊಣ್ಣೂರ, ಅಂಜುಮನ್ ಅಧ್ಯಕ್ಷ ಲಾಳೆಮಶಾಕ್ ಅವಟಿ, ಉಪಾಧ್ಯಕ್ಷ ಬಾಷೇಸಾಬ್ ತೆಗ್ಗಿನಮನಿ, ಅಬ್ದುಲ್ ಗನಿ ಖಾಜಿ, ಎಸ್ಡಿಎಂಸಿ ಸ್ವಾಲೇಹಾ ಬೇಗಂ ಮುಲ್ಲಾ, ಮಾನಬಿ ಖಾಜಿ, ರೇಷ್ಮಾ ಆರೇಶಂಕರ, ರುಬಿನಾ ಬೇಗಂ ಸೂಳಿಬಾಯಿ, ಲಾಳೆಮಶಾಕ್ ಅವ ಟಿ, ರಫೀಕ್ ಖಾಜಿ, ಮೈಬುಬ, ಪಕ್ರುದ್ದೀನ್ ಬಿದರಕೋಟಿ, ಪಾಲಕರಾದ ಮಹ್ಮದ ಖಾಜಿ, ಜಾಫರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...