ಬಾಗಲಕೋಟೆ | ಪ್ರವಾಹಕ್ಕೆ ಮುಳುಗಡೆಯಾದ ಬೆಳೆಗಳಿಗೆ ಸೂಕ್ತ ಪರಿಹಾರ ನೀಡದಿದ್ದರೆ ಆ.12ಕ್ಕೆ ಮುಧೋಳ ಬಂದ್: ರೈತ‌‌ ಮುಖಂಡರ ಎಚ್ಚರಿಕೆ

Date:

ಘಟಪ್ರಭಾ ನದಿಯ ಪ್ರವಾಹಕ್ಕೆ ಮುಳುಗಡೆಯಾದ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂಬ ಕೂಗು ಹೆಚ್ಚಾಗ ತೊಡಗಿದ್ದು, ಸರ್ಕಾರ ಹೋರಾಟಗಾರರಿಗೆ ಸ್ಪಂದಿಸದಿದ್ದರೆ ಆಗಸ್ಟ್‌  12ರಂದು ಮುಧೋಳ ಬಂದ್ ನಡೆಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರವಾಹಕ್ಕೊಳಗಾದ ಸಂತ್ರಸ್ತರು , ರೈತರು ಒಮ್ಮತದ‌ ನಿರ್ಧಾರ ಪ್ರಕಟಿಸಿದ್ದಾರೆ.

- Advertisement -

ಮುಧೋಳ ನಗರದ ಜಿಎಲ್‌ಬಿಸಿ ಪ್ರವಾಸಿ‌ ಮಂದಿರದಲ್ಲಿ ಶನಿವಾರ ನಡೆದ ಸಂತ್ರಸ್ತರು ಹಾಗೂ ರೈತರ ಸಭೆಯಲ್ಲಿ‌ ಅಭಿಪ್ರಾಯ ವ್ಯಕ್ತಪಡಿಸಿ ಪರಿಹಾರಕ್ಕಾಗಿ‌ ಒತ್ತಾಯಿಸಿ ಆ.7ರಂದು ಸುರಿವ ಮಳೆಯಲ್ಲಿಯೇ  ಹೋರಾಟ ಮಾಡಿದರೂ ಜನಪ್ರತಿನಿಧಿಗಳಾಗಲಿ, ಜಿಲ್ಲಾಡಳಿತವಾಗಲಿ ನಮ್ಮ ಹೋರಾಟಕ್ಕೆ‌ ಸ್ಪಂದಿಸುವ ಕಾರ್ಯ ಮಾಡಿಲ್ಲ. ಅದಾದ ಬಳಿಕ ಅ.10ರವೆಗೆ ನಾವು ಸರ್ಕಾರಕ್ಕೆ ಗಡುವು ನೀಡಿದ್ದೆವು. ಆದರೆ ರಾಜ್ಯ ಸರ್ಕಾರ ನಮ್ಮ ಸಮಸ್ಯೆಗೆ ಧ್ವನಿಯಾಗುತ್ತಿಲ್ಲ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಈ ಹಿನ್ನೆಲೆಯಲ್ಲಿ ಆ.11ರ ಮಧ್ಯಾಹ್ನದವರೆಗೂ ಸರ್ಕಾರಕ್ಕೆ ಗಡುವು ನೀಡುತ್ತೇವೆ. ಅಷ್ಟರೊಳಗೆ ನಮ್ಮ‌ ಸಮಸ್ಯೆಗೆ ಸ್ಪಂದಿಸದಿದ್ದರೆ  ಸೋಮವಾರ (ಆ.12) ಮುಧೋಳ ನಗರ ಬಂದ್ ಮಾಡಿ ಉಗ್ರ ಹೋರಾಟ ಕೈಗೊಳ್ಳಲಾಗುವುದು. ಸರ್ಕಾರ ಮುಂದಿನ ಅನಾಹುತಕ್ಕೆ ಅವಕಾಶ ಕೊಡದೆ ನಮ್ಮ ಬೇಡಿಕೆಗೆ ಸ್ಪಂದಿಸಿ‌ ಸಂತ್ರಸ್ತರ ಕಣ್ಣೀರು ಒರೆಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ದುಂಡಪ್ಪ‌ ಯರಗಟ್ಟಿ, ಬಸವಂತ ಕಾಂಬಳೆ, ಮುತ್ತಪ್ಪ ಕೊಮಾರ, ಸುಭಾಸ ಶಿರಬೂರ, ಬಂಡು ಘಾಟಗೆ, ಸದಪ್ಪ ತೇಲಿ, ಮಹೇಶಗೌಡ ಪಾಟೀಲ, ಸುಗರಪ್ಪ ಅಕ್ಕಿಮರಡಿ, ತಿಮ್ಮಣ್ಣ ಬಟಕುರ್ಕಿ, ಸದಾಶಿವ ಇಟಗನ್ನವರ ಸೇರಿದಂತೆ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕುಂದಾಪುರ ಕೋಡಿ ಹಿನ್ನೀರು ಪ್ರದೇಶದಲ್ಲಿ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಕಾಂಡ್ಲಾ ವನ ವೀಕ್ಷಣೆ

ಕುಂದಾಪುರ ನಗರದ ಕೋಡಿ-ಕುಂದಾಪುರ ಸೇತುವೆ ಬಳಿಯ ಕೋಡಿ ಹಿನ್ನೀರು ಪ್ರದೇಶಕ್ಕೆ ರವಿವಾರ...

ಉಡುಪಿ | ಬೆಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬೈಂದೂರಿನ ಯುವ ಇಂಜಿನಿಯರ್ ಅಪಘಾತದಲ್ಲಿ ಸಾವು

ಉದ್ಯೋಗದ ನಿಮಿತ್ತ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಬೈಂದೂರು ತಾಲೂಕಿನ ನಾಡ-ಪಡುಕೋಣೆ ಸಮೀಪದ...

ಹಾವೇರಿ ವಿವಿ ಹಾಸ್ಟೆಲ್‌, ಅಪರಿಚಿತನ ಅನುಚಿತ ವರ್ತನೆ: ವಿದ್ಯಾರ್ಥಿನಿಯರು ಪ್ರತಿಭಟನೆ

ಹಾವೇರಿ ವಿವಿ ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಪರಿಚಿತನ ಅನುಚಿತ ವರ್ತನೆಯಿಂದ ವಿದ್ಯಾರ್ಥಿನಿಯರು...

ವಿಜಯಪುರ | ನ.19ರಿಂದ ಲೋಕಾಯುಕ್ತ, ಉಪಲೋಕಾಯುಕ್ತರಿಂದ ಜಿಲ್ಲಾ ಪ್ರವಾಸ

ಕರ್ನಾಟಕ ಲೋಕಾಯುಕ್ತದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ನವೆಂಬರ್ 19ರಿಂದ...