ಹಿರಿಯ ರಾಜಕಾರಣಿ, ದಲಿತ ಸಮುದಾಯದ ನಾಯಕ ಆರ್ ಬಿ ತಿಮ್ಮಾಪುರ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಮುದಕಣ್ಣ ಅಂಬಿಗೇರ ಹಾಗೂ ಹಲವು ಮುಖಂಡರು ಪಕ್ಷದ ವರಿಷ್ಠರಿಗೆ ಒತ್ತಾಯ ಮಾಡಿದ್ದಾರೆ.
“ತಿಮ್ಮಾಪುರ ಅವರು ತಮ್ಮ ರಾಜಕೀಯ ಬದುಕಿನುದ್ದಕ್ಕೂ ಕಾಂಗ್ರೆಸ್‌ನ ತತ್ವ ಸಿದ್ದಾಂತಗಳನ್ನು ಅನುಸರಿಸಿಕೊಂಡು ಬಂದಿದ್ದಾರೆ. ಚುನಾವಣೆಯಲ್ಲಿ ಸೋತರೂ ಯಾರೊಂದಿಗೂ ರಾಜಿ ಮಾಡಿಕೊಳ್ಳದೆ ಪಕ್ಷ ಸಂಘಟನೆಗೆ ನಿರಂತರ ಶ್ರಮಿಸಿದ್ದಾರೆ. ಪಕ್ಷ ಇವರ ಶ್ರಮವನ್ನು ಪರಿಗಣಿಸಿ ಅವಕಾಶ ನೀಡಬೇಕು” ಎಂದು ಆಗ್ರಹಿಸಿದ್ದಾರೆ.
“ಡಿಸಿಎಂ ಹುದ್ದೆ ನೀಡುವುದರಿಂದ ಪಕ್ಷಕ್ಕಾಗಿ ಶ್ರಮಿಸಿದ ಉತ್ತರ ಕರ್ನಾಟಕದ ನಿಷ್ಠಾವಂತ ನಾಯಕನೊಬ್ಬನಿಗೆ ಗೌರವ ನೀಡಿದಂತಾಗುತ್ತದೆ. ಅಹಿಂದ ವರ್ಗದ ಹಿತ ಎತ್ತಿ ಹಿಡಿದಂತಾಗುತ್ತದೆ” ಎಂದು ಎಪಿಎಂಸಿ ಅಧ್ಯಕ್ಷ ಸಂಗಪ್ಪ ಇಮ್ಮನ್ನವರ, ಮಲ್ಲಪ್ಪ ಮಂಟೂರ, ಪರಮಾನಂದ ಕುಟ್ರಟ್ಟಿ ಚಿನ್ನು ಅಂಬಿ, ಪ್ರಭು ಸುಣಗಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





