ಮುಧೋಳ | ಘಟಪ್ರಭಾ ನದಿಯಿಂದಾಗಿ ಸಂತ್ರಸ್ತರಾದ ರೈತರ ಪರ ನಿಲ್ಲುತ್ತೇನೆ : ಸಚಿವ ಆರ್ ಬಿ ತಿಮ್ಮಾಪುರ ಭರವಸೆ

Date:

ಪ್ರತಿಭಟನೆಯಿಂದ ಮಾತ್ರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ. ಆಲಮಟ್ಟಿ ಹಿನ್ನೀರು ಹಾಗೂ ಘಟಪ್ರಭಾ ನದಿಯಿಂದ ರೈತರಿಗೆ ಉಂಟಾದ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸಂತ್ರಸ್ತರ ಪರ ನಿಲ್ಲುತ್ತೇನೆ ಎಂದು ಸಚಿವ ಆರ್ ಬಿ ತಿಮ್ಮಾಪುರ ಹೇಳಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಪಿಡಬ್ಲ್ಯುಡಿ ಪ್ರವಾಸಿ ಮಂದಿರದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ಆಲಮಟ್ಟಿ ಹಿನ್ನೀರು ಹಾಗೂ ಘಟಪ್ರಭಾ ನದಿಯಿಂದ ಹಾನಿಗೀಡಾದ ರೈತ ಮುಖಂಡರೊಂದಿಗೆ ಸಂವಾದ ಸಭೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ವೇಳೆ ಮಾತನಾಡಿದ ಸಚಿವರು, “ಸರ್ಕಾರದ ಮಟ್ಟದಲ್ಲಿ ಉನ್ನತ ಮಟ್ಟದ ತಜ್ಞರ ಸಮಿತಿ ರಚನೆಯಾಗಬೇಕು, ಪರಿಸ್ಥಿತಿಯ ಸಾಧಕ-ಬಾಧಕಗಳನ್ನು ವೈಜ್ಞಾನಿಕವಾಗಿ ನಿರ್ಣಯಿಸಿ ಮುಖ್ಯಮಂತ್ರಿಗೆ ವರದಿ ನೀಡಿ ಪರಿಹಾರ ಕಂಡುಕೊಳ್ಳಬೇಕಿದೆ” ಎಂದು ತಿಳಿಸಿದರು.

WhatsApp Image 2024 08 16 at 4.24.42 PM

ರೈತರು ಮತ್ತು ಅತಿವೃಷ್ಟಿ ಸಂತ್ರಸ್ತರು ಎದುರಿಸುತ್ತಿರುವ ಸಮಸ್ಯೆಗಳನ್ನು ತಾವಾಗಲೀ ಸಂಸದ ಗೋವಿಂದ ಕಾರಜೋಳವಾಗಲೀ ಏಕಾಂಗಿಯಾಗಿ ಪರಿಹರಿಸಲು ಸಾಧ್ಯವಿಲ್ಲ.  2019ರ ಪ್ರವಾಹದ ಸಮಯದಲ್ಲಿ ಅವರ ಹಕ್ಕುಗಳಿಗಾಗಿ ಹೋರಾಡಿದ ರೈತನಾಗಿ ತಮ್ಮ ಸ್ವಂತ ಅನುಭವದಿಂದ ರೈತರಿಗೆ ಸಹಾಯ ಮಾಡಲು ಪ್ರಾಮಾಣಿಕವಾಗಿ ಕೆಲಸ ಮಾಡಲು ಅವರು ಬದ್ಧರಾಗಿದ್ದಾರೆ. ಈ ಹೋರಾಟದಲ್ಲಿ ಸಂತ್ರಸ್ತರ ಪರ ನಿಲ್ಲುತ್ತೇನೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ ಸಚಿವ ತಿಮ್ಮಾಪುರ, ಪರಿಹಾರ ಕಂಡುಕೊಳ್ಳಲು ಪ್ರತಿಭಟನೆಯಿಂದ ಮಾತ್ರ ಸಮಸ್ಯೆ ಬಗೆಹರಿಯಲು ಸಾಧ್ಯವಿಲ್ಲ. ಸರ್ಕಾರದ ಮಟ್ಟದಲ್ಲಿ ಉನ್ನತ ಮಟ್ಟದ ತಜ್ಞರ ಸಮಿತಿ ರಚನೆಯಾಗಬೇಕು. ಪರಿಸ್ಥಿತಿಯ ಸಾಧಕ-ಬಾಧಕಗಳನ್ನು ವೈಜ್ಞಾನಿಕವಾಗಿ ನಿರ್ಣಯಿಸಿ ಮುಖ್ಯಮಂತ್ರಿಗೆ ವರದಿ ನೀಡಿ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.

ಸಭೆಯಲ್ಲಿ ರೈತ ಮುಖಂಡ ಅಶೋಕ ಪಾಟೀಲ ಮಾತನಾಡಿ, ಕಬ್ಬಿಗೆ ಎಕರೆಗೆ 1 ಲಕ್ಷ ಹಾಗೂ ಇತರೆ ಬೆಳೆಗಳಿಗೆ 50 ಸಾವಿರ ನೀಡಬೇಕು. ರೈತರ ಸಾಲ ಮನ್ನಾ ಮಾಡಬೇಕು.  ಶಾಶ್ವತ ಪರಿಹಾರ ಕಲ್ಪಿಸಬೇಕು. ತಾಲೂಕಿನಲ್ಲಿ 77 ಕಿ.ಮೀ ನದಿ ವ್ಯಾಪ್ತಿಯಿದೆ.  ಚಿಂಚನಖಂಡಿ ಮತ್ತು ಯಾದವಾಡದಲ್ಲಿ ಹೆಚ್ಚು ನೀರು ಹರಿಯುತ್ತದೆ.  ಕಾತರಕಿ ಬಳಿ ಹೆಚ್ಚಿನ ನೀರು ಹರಿಯುತ್ತದೆ.   ಆದರೆ ಸೇತುವೆ ಇದ್ಯಾವುದಕ್ಕೂ ಆಗಿಲ್ಲ, ವಿಸ್ತರಣೆ ಮಾಡಬೇಕು. ಯಾದವಾಡ ಸೇತುವೆ ಹಾಗೂ ಚಿಂಚನಖಂಡಿ ನದಿಯಲ್ಲಿ ಹೂಳು ತುಂಬಿದ್ದು, ಅವುಗಳನ್ನು ತೆಗೆದು ಒತ್ತುವರಿ ಪ್ರದೇಶವೆಂದು ಘೋಷಿಸಬೇಕು ಎಂದು ಸಮಸ್ಯೆಗಳ ಪಟ್ಟಿಯನ್ನು ಹಾಕಿ ಸಭೆಯ ಗಮನ ಸೆಳೆದರು.

ತಿಮ್ಮಾಪುರ

ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬಿಡಿಕಾರ, ತಹಶೀಲ್ದಾರ್ ವಿನೋದ ಹತಳ್ಳಿ, ಡಿವೈಎಸ್ಪಿ ಶಾಂತವೀರ, ನೀರಾವರಿ ಇಲಾಖೆ ಹಾಗೂ ಹೆಸ್ಕಾಂ ಪ್ರತಿನಿಧಿಗಳು ಸೇರಿದಂತೆ  ಪ್ರಮುಖರು ಹಾಜರಿದ್ದರು.

ಪ್ರಮುಖರಾದ ಸ್ಥಳೀಯ ಮುಖಂಡರಾದ ದುಂಡಪ್ಪ ಯರಗಟ್ಟಿ, ಕಲ್ಮೇಶ ಹಣಗುಜಿ, ಉದಯ ಸರ್ವಾಡ, ಸಂಜಯ ನಾಯಿಕ, ರಾಜುಗೌಡ ಪಾಟೀಲ, ಬಸವಂತಪ್ಪ ಕಾಂಬಳೆ, ನಾಗೇಶ ಸೊರಗಾಂವಿ, ಮುತ್ತಪ್ಪ ಕೋಮಾರ, ಶುಭಾಸ ಶಿರಬೂರ, ದುಂಡಪ್ಪ ಲಿಂಗರಡ್ಡಿ, ಹಣಮಂತ ನಬಾಬ, ಎ.ಜಿ.ಪಾಟೀಲ, ಮುತ್ತಪ್ಪ ಕೋಮಾರ, ಮಹೇಶಗೌಡ ಪಾಟೀಲ,  ಅಪ್ಪಾ ಸಾಹೇಬ ಲಕ್ಕಂ, ವೆಂಕಣ್ಣ ಗಿಡ್ಡಪ್ಪನವರ ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ತಿಳಿಸಿದರು.

ಈ ಪ್ರದೇಶದಲ್ಲಿ ಪದೇ ಪದೇ ಉಂಟಾಗುತ್ತಿರುವ ಪ್ರವಾಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಮತ್ತು ಸಂತ್ರಸ್ತ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...