ರಸ್ತೆಯಲ್ಲಿ ಪಾದಚಾರಿ ಮಾರ್ಗದಲ್ಲಿರುವ ಮೂಡಿಗೆರೆ ತಾಲೂಕಿನ ಬಣಕಲ್ ಮುಖ್ಯ ರಸ್ತೆಯಲ್ಲೇ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅವಳವಡಿಸಲಾಗಿದ್ದ, ಇದನ್ನು ಕೂಡಲೇ ಸ್ಥಳಾಂತರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಿದ್ಯುತ್ ಟ್ರಾನ್ಸ್ ಫಾರ್ಮರ್ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವುದು ಅವೈಜ್ಞಾನಿಕ. ಅದರ ಜೊತೆ ಚೇಂಜ್ ಓವರ್ ಮಾಡುವ ಸಲಾಕೆ ಕೂಡ ಅಳವಡಿಸಲಾಗಿರುವುದಾರಿಂದ ಆ ದಾರಿಯಾಗಿ ತಿರುಗಾಡುವ ಜನರಿಗೆ ತಾಗಿ, ಗಾಯಗಳಾಗುತ್ತಿವೆ. ರಸ್ತೆ ವಿಸ್ತರಣೆ ಸಮಯದಲ್ಲಿ ಎತ್ತರವಿತ್ತು. ಆದರೆ, ರಸ್ತೆ ವಿಸ್ತರಣೆ ನಂತರ ಎತ್ತರವಾಗಿರುವುದರಿಂದ ಅನೇಕ ಜನರಿಗೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಇದನ್ನು ಓದಿದ್ದೀರಾ? ಕೊಡಗು | ಕಿತ್ತೂರು ರಾಣಿ ಚೆನ್ನಮ್ಮ ಜೀವನ ಚರಿತ್ರೆ ಎಲ್ಲರೂ ತಿಳಿದುಕೊಳ್ಳಬೇಕು: ಜಿಲ್ಲಾಧಿಕಾರಿ ವೆಂಕಟ್ ರಾಜಾ
ಮುಖ್ಯ ರಸ್ತೆಯಲ್ಲೇ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅಳವಡಿಕೆ ಮಾಡಿರುವುದರಿಂದ ಪ್ರತಿದಿನ ವಿದ್ಯಾಭ್ಯಾಸ ಮಾಡುತ್ತಿರುವ ಶಾಲಾ, ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸ್ಥಳೀಯರು ಓಡಾಡುವುದಕ್ಕೆ ಭಯಪಡುತ್ತಿದ್ದಾರೆ. ಅಲ್ಲದೇ, ಇದರಿಂದ ಸುತ್ತಮುತ್ತಲಿನ ಜನರಿಗೆ ತೊಂದರೆಯಾಗುತ್ತಿದೆ.
ಆದ್ದರಿಂದ, ಆದಷ್ಟು ಬೇಗ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅನ್ನು ಬೇರೆ ಜಾಗಕ್ಕೆ ಸ್ಥಳಾಂತರಿಸಬೇಕೆಂದು ಗ್ರಾಮದ ಮುಖಂಡರಾದ ಸುರೇಶ್ ಶೆಟ್ಟಿ ಹಾಗೂ ಗ್ರಾಮಸ್ಥರು ಈ ದಿನ.ಕಾಮ್ ಮೂಲಕ ಆಗ್ರಹಿಸಿದ್ದಾರೆ.
