ಬಳ್ಳಾರಿ ಜಿಲ್ಲೆಯ 21 ಗ್ರಾಮಗಳಲ್ಲಿ ಮೊಹರಂ ಹಬ್ಬ ಆಚರಣೆ ನಿಷೇಧ : ಡಿಸಿ ಪ್ರಶಾಂತಕುಮಾರ್‌ ಆದೇಶ

Date:

ಜಿಲ್ಲೆಯಾದ್ಯಾಂತ ಜೂನ್ 27 ರಿಂದ ಜುಲೈ 7 ರವರೆಗೆ ಜರುಗುವ ಮೊಹರಂ ಹಬ್ಬ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಅವರು ಆದೇಶ ಹೊರಡಿಸಿದ್ದಾರೆ.

- Advertisement -

ʼಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ವೈಷಮ್ಯ ಇರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಮೊಹರಂ ಆಚರಿಸುವ ಸಂದರ್ಭದಲ್ಲಿ ಶಾಂತಿ, ಸುವ್ಯಸ್ಥೆಗೆ ಧಕ್ಕೆ ಉಂಟಾಗುವ ಬಗ್ಗೆ ವರದಿಗಳು ಇರುವುದರಿಂದ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಪೊಲೀಸ್ ಬಂದೋಬಸ್ತ್ ಪರಿಣಾಮಕಾರಿಯಾಗಿ ಜಾರಿಗೆ ತರಲು ಕರ್ನಾಟಕ ಪೊಲೀಸ್ ಕಾಯ್ದೆನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿಗಳು, ಜೂ.27 ರಿಂದ ಜು.7 ರವರೆಗೆ ಆಚರಿಸಲ್ಪಡುವ ಮೊಹರಂ ಹಬ್ಬವನ್ನು ಜಿಲ್ಲೆಯ ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಜನರು ಗುಂಪು ಸೇರದಂತೆ ಮೆರವಣಿಗೆ ನಡೆಸದಂತೆ ಮತ್ತು ಪಂಜಾಗಳನ್ನು ಕೂಡಿಸದಂತೆ ಮೊಹರಂ ಹಬ್ಬವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಯಾವ ಗ್ರಾಮಗಳಲ್ಲಿ ಮೊಹರಂ ಹಬ್ಬ ನಿಷೇಧ:

ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ತಾಳೂರು ರಸ್ತೆಯ ಕನ್ನಡ ನಗರ ಮುಖ್ಯ ರಸ್ತೆಯ ನ್ಯಾಯಾಧೀಶರ ವಸತಿಗೃಹ ಕಾಂಪೌಂಡ್ ಪಕ್ಕದಲ್ಲಿ ಮಹಾನಂದಿಕೊಟ್ಟ‌ ಒಳಗಡೆ, ಸಿರುಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಸೂಗೂರು, ಮುದೇನೂರು, ಹೀರೆಹಾಳ್, ನಾಡಂಗ, ಬಂಡ್ರಾಳ್, ದೇಶನೂರು, ಕೆ.ಬೆಳಗಲ್, ಅಲಬನೂರು ಗ್ರಾಮಗಳು. ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ತೆಕ್ಕಲಕೋಟೆ, ಹಳೇಕೋಟೆ, ಉಪ್ಪಾರಹೊಸಳ್ಳಿ, ಉಡೇಗೋಳ, ಅರಳಿಗನೂರು ಗ್ರಾಮಗಳು.
ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಿರಿಗೇರಿ, ಕೂರಿಗನೂರು, ತಾಳೂರು, ಕರೂರು ಗ್ರಾಮಗಳು. ಪಿಡಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಸುಂಡಿ ಗ್ರಾಮ, ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15-ಗೋನಾಳು ಗ್ರಾಮದಲ್ಲಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...