ಮುಳಬಾಗಿಲು | ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್

Date:

ಕೋಲಾರದ ಮುಳಬಾಗಿಲು ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜೆಎಂಎಫ್‌ಸಿ ಹಿರಿಯ ನ್ಯಾಯಾಧೀಶ ಗೌಡ ಜಗದೀಶ್ ರುದ್ರೆ ತಿಳಿಸಿದರು.

- Advertisement -

ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಒಂದು ಉತ್ತಮ ಅವಕಾಶ. ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡು ನೆಮ್ಮದಿಯ ಜೀವನ ರೂಪಿಸಿಕೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಜೆಎಂಎಫ್‌ಸಿ ನ್ಯಾಯಮೂರ್ತಿಗಳಾದ ಜಿ.ಹರೀಶ್ ಮಾತನಾಡಿ, ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಒಂದು ಉತ್ತಮ ಅವಕಾಶವಾಗಿದ್ದು ತಾಲೂಕಿನ ಹಾಗೂ ನ್ಯಾಯಾಲಯದ ವ್ಯಾಪ್ತಿಯ ಕಕ್ಷಿದಾರರು ಸದುಪಯೋಗ ಪಡೆದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಜುಲೈ 12 ರಂದು ನಿಗದಿಯಾಗಿರುವ ಲೋಕ್ ಅದಾಲತ್ ಮೂಲಕ ತಕ್ಷಣ ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದರು.

ಇದನ್ನೂ ಓದಿ: ಕೋಲಾರ | ಕೋಮುಲ್ ಸರ್ಕಾರಿ ನಾಮ ನಿರ್ದೇಶಕರಾಗಿ ಯೂನುಸ್ ಶರೀಫ್ ನೇಮಕ

ಅಡಿಷನಲ್ ನ್ಯಾಯಾಧೀಶರಾದ ಡಿ.ರೋಹಿಣಿ ಮಾತನಾಡಿ, ಯಾವುದೇ ಶುಲ್ಕವಿಲ್ಲದೇ ರಾಜಿಯಾಗುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಸಲುವಾಗಿ ರಾಷ್ಟ್ರಮಟ್ಟದಿಂದ ತಾಲೂಕು ಮಟ್ಟದದವರೆವಿಗೂ ಅದಾಲತ್ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಬ್ಯಾಂಕ್, ಅಪಘಾತ, ಸಣ್ಣ ಪುಟ್ಟ ಜಗಳ, ಜನನ ಪ್ರಮಾಣ ಪತ್ರ ದಂತಹ ಪ್ರಕರಣ ಸೇರಿದಂತೆ ಕಕ್ಷಿದಾರರು ಇಚ್ಛಿಸಿದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಅವಕಾಶವಿರುವ ಎಲ್ಲಾ ರೀತಿಯ ಪ್ರಕರಣಗಳನ್ನು ಅದಾಲತ್ ನಲ್ಲಿ ವಿಲೇವಾರಿ ಮಾಡಲಾಗುವುದು. ಕಕ್ಷಿದಾರರು ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಸುಲಭವಾಗಿ ಮತ್ತು ಶಿಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯಾರ್ಥ ಪಡಿಸಿಕೊಳ್ಳಬಹುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...