ಮುಳಬಾಗಿಲು | ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಡುವುದು ಗೊತ್ತು, ಕೆಳಗೆ ಇಳಿಸುವುದೂ ಗೊತ್ತು

Date:

ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಡುವುದು ಗೊತ್ತು ಹಾಗೂ ಕೆಳಗೆ ಇಳಿಸುವುದೂ ಗೊತ್ತು. ಮುಂದೆ ಎಲ್ಲಾ ಮುಸಲ್ಮಾನರು ನ್ಯಾಯ ಸಿಗುವವರೆಗೆ ಪಕ್ಷಾತೀತವಾಗಿ ನಸೀರ್ ಅಹಮದ್‌ ಪರ ನಿಲ್ಲಬೇಕು ಹಾಗೂ ಕಾಂಗ್ರೆಸ್ ನಡೆಯನ್ನು ಖಂಡಿಸಬೇಕು ಎಂದು ನಗರದಲ್ಲಿ ಮುಸ್ಲಿಂ ಉಲೇಮಾಗಳು ಹೇಳಿದರು.

- Advertisement -

ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹಮದ್‌ ಅವರನ್ನು ವಜಾ ಮಾಡಿರುವುದನ್ನು ಖಂಡಿಸಿ ನಗರದಲ್ಲಿ ಉಲೇಮಾಗಳು ಮುಸ್ಲಿಂ ಮುಖಂಡರ ಸಭೆ ನಡೆಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ನಗರದ 10ನೇ ನಂಬ‌ರ್ ಕಲ್ಯಾಣ ಮಂಟಪದಲ್ಲಿ ಉಲೇಮಾಗಳಾದ ಮುಳುಬಾಗಿಲು ಹಾಗೂ ಕೋಲಾರದ ಮೌಲಾನ ಖಲೀಮುಲ್ಲಾ, ಮೊಹಮದ್ ಅಸಾದುಲ್ಲಾ ಹಾಗೂ ಆಲಂಗೀರ್ ಪಕ್ಷಾತೀತವಾಗಿ ಮುಸ್ಲಿಂ ಮುಖಂಡರ ಸಭೆಯನ್ನು ನಡೆಸಿ ಕಾಂಗ್ರೆಸ್ ನಡೆಯನ್ನು ವಿರೋಧಿಸಿದರು.

ಮುಸಲ್ಮಾನರು ಕಾಂಗ್ರೆಸ್ ಪಕ್ಷವನ್ನು ಬೆಳೆಸುತ್ತಾ, ಎಲ್ಲಾ ರೀತಿಯಲ್ಲೂ ಸಹಾಯ ಮಾಡುತ್ತಾ ಮೊದಲಿನಿಂದಲೂ ಬರುತ್ತಿದ್ದಾರೆ. ಹೀಗಿರುವಾಗ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಪಕ್ಷದ ಟಿಕೆಟ್ ನೀಡದೆ ಅನ್ಯಾಯ ಮಾಡಿದೆ. ಇದರಿಂದ ನಸೀ‌ರ್ ಅಹಮದ್ ಬೇಸರದಿಂದ ಸಮರ್ಥ್ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಲಿಲ್ಲ ಎಂಬ ನೆಪ ಇಟ್ಟುಕೊಂಡು ಹುದ್ದೆಯಿಂದ ವಜಾ ಮಾಡಿರುವುದು ಖಂಡನೀಯ ಎಂದರು.

ಇದನ್ನು ಓದಿದ್ದೀರಾ..? ಕೋಲಾರ | ನಸೀರ್ ಅಹಮದ್‌ ವಜಾ ಮಾಡಿದ್ದಕ್ಕೆ ಉಲಮಾಗಳ ಆಕ್ರೋಶ

ಅಲ್ಹಾಜ್ ಶಹಬಸ್ ಖಾನ್, ಅಲ್ಹಾಜ್ ಫಯಾಜ್ ಖಾನ್, ಕಾಂಗ್ರೆಸ್ ಪಕ್ಷದ ಮುಖಂಡರು, ಪಕ್ಷಾತೀತ ಮುಖಂಡರು ಹಾಗೂ ನಗರಸಭೆಯ ಮಾಜಿ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅಮೂಲ್ಯ: ಜಿಲ್ಲಾಧಿಕಾರಿ ಪೂವಿತಾ ಎಸ್

ಪೊಲೀಸರು ಕೇವಲ ಕಾನೂನು ಜಾರಿಗೊಳಿಸುವ ಸಿಬ್ಬಂದಿಯಲ್ಲ ಸಂಕಷ್ಟದ ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗೆ...

ಉಡುಪಿ | ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಚಾರ್ಲ್ಸ್ ಅಂಬ್ಲರ್ ಆಗ್ರಹ

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಅಕ್ಟೋಬರ್ 23ರಂದು ದೇಶಾದ್ಯಂತ ನಡೆಯಲಿರುವ...

ಉಡುಪಿ ಧರ್ಮಪ್ರಾಂತ್ಯದ ಮೂವರು ಉಪಯಾಜಕರಿಗೆ ಗುರುದೀಕ್ಷೆ ಪದವಿ ಪ್ರದಾನ

ಉಡುಪಿ ಧರ್ಮಪ್ರಾಂತದ ಮೂವರು ಉಪ ಯಾಜಕರಿಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ...

‘SIR’ ವಿರುದ್ಧ ಅ.23ರಂದು ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಪ್ರಜಾಪ್ರಭುತ್ವ...