ಮಂಗಳೂರಿನಲ್ಲಿ ಅ.24-25ರಂದು ಬಹುಸಂಸ್ಕೃತಿ ಉತ್ಸವ : ಮುಖ್ಯಮಂತ್ರಿಗಳಿಗೆ ಆಹ್ವಾನ

Date:

Advertisements

ಸುವರ್ಣ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಅಕ್ಟೋಬರ್ 24 ಹಾಗೂ 25 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಹುಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರದಂದು ಆಹ್ವಾನ ನೀಡಲಾಯಿತು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ನಡೆಸಿದ ವಿವಿಧ ಅಕಾಡೆಮಿ ಅಧ್ಯಕ್ಷರುಗಳು ಮುಖ್ಯಮಂತ್ರಿ ಜೊತೆಗೆ ಸಮಾಲೋಚನೆ ನಡೆಸಿ ಆಹ್ವಾನ ನೀಡಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕೊಂಕಣಿ ಅಕಾಡೆಮಿ, ಬ್ಯಾರಿ ಅಕಾಡೆಮಿ, ಅರೆ ಭಾಷೆ ಅಕಾಡೆಮಿ, ಕೊಡವ ಅಕಾಡೆಮಿ ಹಾಗೂ ಯಕ್ಷಗಾನ ಅಕಾಡೆಮಿ ಜಂಟಿಯಾಗಿ ಅಕ್ಟೋಬರ್ 24 ಹಾಗೂ 25 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹು ಸಂಸ್ಕೃತಿ ಉತ್ಸವವನ್ನು ಆಯೋಜಿಸಿದೆ.

Advertisements

ಇದನ್ನು ಓದಿದ್ದೀರಾ? ಬೆಂಗಳೂರು | ಮುಸ್ಲಿಮರು ವಾಸಿಸುವ ಪ್ರದೇಶವನ್ನು ‘ಪಾಕಿಸ್ತಾನ’ ಎಂದ ಹೈಕೋರ್ಟ್‌ ನ್ಯಾಯಾಧೀಶ

ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಕೊಂಕಣಿ ಅಕಾಡೆಮಿ ಅಧ್ಯಕ್ಷ ಜೋಕಿಮ್ ಸ್ಟ್ಯಾನಿ ಆಳ್ವಾರಿಸ್ , ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕೊಡವ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ , ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ಶಿವರಾಮ ಶೆಟ್ಟಿ ತಲ್ಲೂರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X