ಮುಂಡಗೋಡ | ಅಡಿಕೆ ಬೆಳೆಗಾರರಿಗೆ ಎಲೆಚುಕ್ಕೆ, ಕೊಳೆರೋಗ ನಿಯಂತ್ರಣಕ್ಕೆ ಶೇ.60 ಸಹಾಯಧನ

Date:

ಮುಂಡಗೋಡ: 2026-27ನೇ ಸಾಲಿನಲ್ಲಿ ಅಡಿಕೆ ಬೆಳೆಗಾರರಿಗೆ ಬಾಧಿಸುತ್ತಿರುವ ಎಲೆಚುಕ್ಕೆ ಹಾಗೂ ಕೊಳೆರೋಗ ನಿಯಂತ್ರಣಕ್ಕಾಗಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಮತ್ತು ರಾಜ್ಯ ವಲಯ ಯೋಜನೆಯಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಸಮಗ್ರ ರೋಗ ಹಾಗೂ ಕೀಟ ನಿಯಂತ್ರಣ ಕಾರ್ಯಕ್ರಮದಡಿ ಸಸ್ಯ ಸಂರಕ್ಷಣಾ ಔಷಧಿಗಳ ಖರೀದಿಗೆ ಪ್ರತಿ ಎಕರೆಗೆ ₹2,000 ಘಟಕ ವೆಚ್ಚವನ್ನು ನಿಗದಿಪಡಿಸಲಾಗಿದೆ. ಇದರಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್‌ನಿಂದ ಶೇ.30ರಷ್ಟು, ಅಂದರೆ ಪ್ರತಿ ಎಕರೆಗೆ ₹600 ಹಾಗೂ ರಾಜ್ಯ ವಲಯ ಯೋಜನೆಯಡಿ ಹೆಚ್ಚುವರಿಯಾಗಿ ಶೇ.30ರಷ್ಟು, ಅಂದರೆ ಪ್ರತಿ ಎಕರೆಗೆ ₹600 ಸಹಾಯಧನ ದೊರೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಈ ಸುದ್ದಿ ಓದಿದ್ದೀರಾ ? ಯಲ್ಲಾಪುರ | ಉಪ್ಪಳೇಶ್ವರದಲ್ಲಿ ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಪತ್ತೆ: ಇಬ್ಬರ ಬಂಧನ

ಹೀಗಾಗಿ ಒಟ್ಟು ಶೇ.60ರಷ್ಟು, ಪ್ರತಿ ಎಕರೆಗೆ ₹1,200 ಸಹಾಯಧನ ಲಭ್ಯವಾಗಲಿದೆ. ಪ್ರತಿ ರೈತರು ಗರಿಷ್ಠ 5 ಎಕರೆವರೆಗೆ ಯೋಜನೆಯ ಸೌಲಭ್ಯ ಪಡೆಯಬಹುದಾಗಿದ್ದು, ಒಬ್ಬ ರೈತರಿಗೆ ಗರಿಷ್ಠ ₹6,000ವರೆಗೆ ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಅಡಿಕೆ ಬೆಳೆಗಾರರು ತಾವು ಖರೀದಿಸಿದ ಸಸ್ಯ ಸಂರಕ್ಷಣಾ ಔಷಧಿಗಳಾದ ಮೈಲುತುತ್ತು ಹಾಗೂ ಇತರ ಶಿಲೀಂಧ್ರನಾಶಕಗಳ ಜಿಎಸ್‌ಟಿ ಬಿಲ್ ಮತ್ತು ನಿಗದಿತ ನಮೂನೆಯ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿ.ಪಂ.) ಕಚೇರಿ, ಮುಂಡಗೋಡಕ್ಕೆ ಸಲ್ಲಿಸಿ ಸಹಾಯಧನ ಪಡೆಯಬಹುದು ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಹೋರಾಟ ಮುಂದುವರಿಕೆ: ಯಾತ್ರಿ ಸಂಘ ನಿರ್ಧಾರ

ಉಡುಪಿ ರೈಲ್ವೆ ಯಾತ್ರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ...

ಚಿಕ್ಕಮಗಳೂರು | ಮಾ. ಶಾಸಕ ಎಂ.ಪಿ. ಕುಮಾರಸ್ವಾಮಿ: ದಲಿತರ ಭೂ ಕಬಳಿಕೆ ಆರೋಪ 

ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಶಾಸಕರಾಗಿದ್ದ ಅವಧಿಯಲ್ಲಿ ದಲಿತ ಕುಟುಂಬವೊಂದಕ್ಕೆ ಸೇರಿದ್ದ...

ರಾಮನಗರ | ಡಾ. ಬಂಜಗೆರೆ ಜಯಪ್ರಕಾಶ್‌ ಅವರಿಗೆ ಪ್ರಶಸ್ತಿ ಗೌರವ: ‘ಜನಮುಖಿ ಜೆಪಿ’ ಕಾರ್ಯಕ್ರಮ ಸಫಲ

ಹಿರಿಯ ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ (ಜೆ.ಪಿ) ಅವರಿಗೆ ಕರ್ನಾಟಕ ಸಾಹಿತ್ಯ...

ಚಿಕ್ಕಮಗಳೂರು | ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು 

ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದ ಮುಖ್ಯ ರಸ್ತೆಯಲ್ಲಿ ರಸ್ತೆ ಅಪಘಾತದಲ್ಲಿ ಬೈಕ್...