ಮುಂಡಗೋಡ | ಮಳೆ-ಗಾಳಿ ಅಬ್ಬರಕ್ಕೆ ರಸ್ತೆಗೆ ಉರುಳಿದ ಬೃಹತ್ ಮಾವಿನ ಮರ; ಸಂಚಾರ ಅಸ್ತವ್ಯಸ್ತ

Date:

ಮುಂಡಗೋಡ: ಕಳೆದ ಕೆಲವು ದಿನಗಳಿಂದ ತೀವ್ರ ಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಂಡಗೋಡ ತಾಲ್ಲೂಕಿನ ಜನತೆಗೆ ವರುಣದೇವ ತಂಪು ಎರೆದಿದ್ದಾನೆ.

- Advertisement -

ಆದರೆ, ಮಳೆಯೊಂದಿಗೆ ಬೀಸಿದ ಭಾರಿ ಗಾಳಿಯ ಆರ್ಭಟಕ್ಕೆ ಮುಂಡಗೋಡ ತಾಲ್ಲೂಕಿನ ಪಾಳಾದಿಂದ ಹಾನಗಲ್ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಬೃಹತ್ ಮಾವಿನ ಮರವೊಂದು ರಸ್ತೆಯ ಮಧ್ಯಭಾಗದಲ್ಲೇ ಮರ ಬಿದ್ದ ಪರಿಣಾಮ ಈ ಮಾರ್ಗದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ದಾರಿಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ಪರದಾಡುವಂತಾಯಿತು. ಇನ್ನು ಜೋರಾದ ಗಾಳಿಗೆ ಬಿದ್ದ ಬೃಹತ್ ಮಾವಿನ ಮರದ ಕೊಂಬೆಗಳನ್ನು ಸೌದೆಗಾಗಿ ಕೊಂಡೊಯ್ಯಲು ಸ್ಥಳೀಯರು ಮುಗಿಬಿದ್ದರು. ಅಡುಗೆ ಅನಿಲದ (ಸಿಲಿಂಡರ್) ಕೊರತೆ ಎದುರಿಸುತ್ತಿರುವ ಜನತೆ, ಸಿಕ್ಕ ಅವಕಾಶವನ್ನು ಬಳಸಿಕೊಂಡು ಕಟ್ಟಿಗೆ ಸಂಗ್ರಹಿಸಲು ಪೈಪೋಟಿಗೆ ಇಳಿದ ದೃಶ್ಯ ಕಂಡುಬಂತು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | LPG ಸಿಲಿಂಡರ್ ಅಭಾವ; ಗೃಹಿಣಿಯರ ನೆಮ್ಮದಿಗೆ ಭಂಗ

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು, ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಬೃಹತ್ ಮರವನ್ನು ಯಂತ್ರಗಳ ಸಹಾಯದಿಂದ ಕತ್ತರಿಸಿ ತೆರವುಗೊಳಿಸಿದರು. ತದನಂತರ ವಾಹನ ಸಂಚಾರ ಎಂದಿನಂತೆ ಸುಗಮವಾಗಲು ದಾರಿ ಮಾಡಿಕೊಟ್ಟರು. ಅರಣ್ಯ ಇಲಾಖೆಯ ಈ ತ್ವರಿತ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...