ಮುಂಡಗೋಡ | ಉಪನೋಂದಣಿ ಕಚೇರಿಯಲ್ಲಿ ನಕಲಿ ದಾಖಲೆ ಸೃಷ್ಟಿ ಆರೋಪ; ಲೋಕಾಯುಕ್ತ ದಾಳಿ

Date:

ಮುಂಡಗೋಡ : ಉಪನೋಂದಣಿ ಹಾಗೂ ವಿವಾಹ ನೋಂದಣಿ ಕಚೇರಿಯಲ್ಲಿ ಅಕ್ರಮ ವ್ಯವಹಾರಗಳ ಆರೋಪ ಮತ್ತೆ ತಲೆದೋರಿದೆ. ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ರೂ, ಜನರಲ್ಲಿ ಏಳುತ್ತಿರುವ ಪ್ರಶ್ನೆ ಒಂದೇ — ಇಷ್ಟು ದೂರುಗಳು, ಇಷ್ಟು ವಿವಾದಗಳ ನಡುವೆಯೂ ಅಧಿಕಾರಿಗಳ ಮೇಲೆ ಕ್ರಮ ಏಕೆ ಕೈಗೊಳ್ಳಲಾಗುತ್ತಿಲ್ಲ? ಎಂಬುದು.

- Advertisement -

ಇತ್ತೀಚೆಗೆ ನಕಲಿ ದಾಖಲೆಗಳ ಆಧಾರದ ಮೇಲೆ ವಿವಾಹ ನೋಂದಣಿ ಹಾಗೂ ಜಮೀನು ವ್ಯವಹಾರ ನಡೆದಿರುವುದು ಬಹಿರಂಗವಾದ ಬಳಿಕ, ಕಚೇರಿಯ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ಹೆಚ್ಚಾಗಿದೆ. ಈ ಕುರಿತು ಹಿಂದೆಯೂ ಹಲವು ಬಾರಿ ಆರೋಪಗಳು ಕೇಳಿಬಂದಿದ್ದರೂ, ಅಧಿಕಾರಿಗಳನ್ನು ವರ್ಗಾವಣೆ ಮಾಡದೇ ಅಥವಾ ಅಮಾನತು ಮಾಡದೇ ಇರಿಸಿರುವುದು ಗಂಭೀರ ಪ್ರಶ್ನೆ ಎಬ್ಬಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಲೋಕಾಯುಕ್ತದ ದಾಳಿ – ದಾಖಲೆಗಳ ವಶಕ್ಕೆ ಪಡೆದು ತನಿಖೆ ಮುಂದುವರಿಕೆ ಬುಧವಾರ ಇನ್ಸ್‌ಪೆಕ್ಟರ್ ಎಸ್.ಎಸ್. ತೇಲಿ ನೇತೃತ್ವದ ಲೋಕಾಯುಕ್ತ ತಂಡವು ಉಪನೋಂದಣಿ ಕಚೇರಿಯ ದಾಖಲೆಗಳನ್ನು ಪರಿಶೀಲಿಸಿ, ನಕಲಿ ದಾಖಲಾತಿ ಪ್ರಕರಣಗಳ ಕುರಿತು ವಿಚಾರಣೆ ನಡೆಸಿತು. ಕಳೆದ ಎರಡು ವರ್ಷಗಳಲ್ಲಿ ನಡೆದ ವಿವಾಹ ನೋಂದಣಿ ಹಾಗೂ ಜಮೀನು ವ್ಯವಹಾರಗಳ ದಾಖಲೆಗಳಲ್ಲಿ ಲೋಪದೋಷ ಪತ್ತೆಯಾಗಿವೆ. ಕೆಲವು ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆಗೆ ಕಳುಹಿಸಲಾಗಿದೆ.

1000284290

ಮುಂಡಗೋಡ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಅಕ್ರಮಗಳ ಕುರಿತಾಗಿ ಹಲವು ಬಾರಿ ಆರೋಪ ಕೇಳಿಬಂದರೂ, ಅಧಿಕಾರಿಗಳ ಮೇಲೆ ಯಾವುದೇ ರೀತಿಯಲ್ಲೂ ಕ್ರಮ ಕೈಗೊಳ್ಳುತ್ತಿಲ್ಲ. ಇದಕ್ಕೆ ಕಾರಣವೇನು ಎಂಬ ಪ್ರಶ್ನೆ ತಾಲ್ಲೂಕಿನ ಜನರ ಮನಸ್ಸಿನಲ್ಲಿ ಮೂಡುತ್ತಿದೆ. ಕಚೇರಿಯ ಅಕ್ರಮ ವ್ಯವಹಾರಗಳಿಂದ ಮೇಲಿನ ಅಧಿಕಾರಿಗಳಿಗೆ ಇಂತಿಷ್ಟು ಅಂತ ಏನಾದ್ರೂ ಪಾಲು ಹೋಗುತ್ತಿದ್ದಿಯಾ ಎಂಬ ಅನುಮಾನ ಸಹ ಉಂಟಾಗಿದೆ. ಜನರು ಕೆಲಸಕ್ಕಾಗಿ ತೆರಳಿದರೆ ಅವರ ದಾಖಲೆಗಳು ಸರಿ ಇದ್ದರೆ ಕಾನೂನಿನ ಪ್ರಕಾರ ಅವರು ಕೆಲಸ ಮಾಡಿಕೊಡಬೇಕು ಆದರೆ ಲಂಚ ಕೊಡದೆ ದಾಖಲೆಗಳನ್ನೆ ಮುಟ್ಟುವುದಿಲ್ಲ. ಲಂಚ ಕೊಟ್ಟರೆ ಸುಳ್ಳು ದಾಖಲೆಗಳಿದ್ದರೂ ನೋಂದಣಿ ಮಾಡಿಕೊಡುತ್ತಾರೆ ಎನ್ನುವ ಸ್ಥಿತಿಗೆ ಉಪನೋಂದಣಾಧಿಕಾರಿ ಕಚೇರಿಯನ್ನು ಇಲ್ಲಿನ ಸಿಬ್ಬಂದಿಗಳು ತಂದಿದ್ದಾರೆ. ಇಂತಹ ಅಕ್ರಮಗಳು ಮುಂದುವರಿಯುತ್ತಿದ್ದರು ಹಿರಿಯ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ಏಕೆ ಎಂದು ಶ್ರೀರಾಮ ಸೇನೆಯ ಅಧ್ಯಕ್ಷ ಮಂಜುನಾಥ್ ಎಚ್.ಪಿ. ಅವರು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ – ಏಜೆಂಟ್ ಹಾಗೂ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಮಾನ್ಯ ಜನರು ಪ್ರತಿನಿತ್ಯ ತಮ್ಮ ಕೆಲಸಕ್ಕೆ ನೋಂದಣಿ ಕಚೇರಿಗೆ ಆಗಮಿಸುತ್ತಾರೆ ಎಲ್ಲಾ ದಾಖಲೆಗಳು ಸರಿ ಇದ್ದರೂ ಅವರು ಕೇಳಿದಷ್ಟು ಕೊಡದೆ ಹೋದರೆ ಯಾವುದೇ ಕೆಲಸ ಆಗುವುದಿಲ್ಲ. ಹೆಚ್ಚುವರಿ ಹಣ ಕೊಟ್ಟರೆ ಮಾತ್ರ ಕೆಲಸ ಆಗುತ್ತದೆ ಎಂಬ ಆರೋಪ ಪ್ರತಿನಿತ್ಯ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರ ಹೇಳುವ ಸರ್ವೇಸಾಮಾನ್ಯ ಮಾತಾಗಿದೆ. ಕರ್ನಾಟಕ ದಲಿತ ರಕ್ಷಣಾ ವೇದಿಕೆ, ಹಿಂದು ಜಾಗರಣ ವೇದಿಕೆ, ಶ್ರೀರಾಮಸೇನೆ ಹಾಗೂ ಭಜರಂಗದಳದ ಮುಖಂಡರುಗಳು ಉಪ ತಹಶೀಲ್ದಾರ್ ಅವರಿಗೆ ಮನವಿ ಪತ್ರ ನಿಡಿ. ಮುಂಡಗೋಡ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದೀಪಾ ಕರಮಡಿ ಅವರನ್ನು ಹಾಗೂ ಇಬ್ಬರು ಕಂಪ್ಯೂಟರ್ ಆಪರೇಟರ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಇಲ್ಲವೇ ಬೇರೆ ಕಡೆ ವರ್ಗಾವಣೆ ಮಾಡಿ ಮುಂಡಗೋಡ ತಾಲ್ಲೂಕಿನಲ್ಲಿ ಮಾತ್ರ ಅವರು ಬೇಡ ಎಂಬ ಬೇಡಿಕೆ ಇಟ್ಟಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕಚೇರಿಯ ಮುಂದೆ ತೀವ್ರ ಸ್ವರೂಪದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....