ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

Date:

ಮುಂಡಗೋಡ: ತಾಲೂಕಿನಾದ್ಯಂತ ಅಕ್ರಮ ಇಟ್ಟಿಗೆ ಭಟ್ಟಿಗಳು ಪರಿಸರ ಮತ್ತು ಅರಣ್ಯ ಸಂಪತ್ತನ್ನು ನುಂಗಿ ಹಾಕುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದರೂ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

- Advertisement -

ಈ ಕುರಿತು ಮಾಧ್ಯಮಗಳಲ್ಲಿ ಸವಿಸ್ತಾರವಾದ ವರದಿಗಳು ಪ್ರಕಟವಾಗಿ, ಅಕ್ರಮದ ಜಾಲವನ್ನು ಬಯಲಿಗೆಳೆದಿದ್ದರೂ ಸಹ, ಇಲ್ಲಿಯವರೆಗೆ ಯಾವುದೇ ನಿರ್ದಿಷ್ಟ ಕ್ರಮ ಕೈಗೊಳ್ಳದಿರುವುದು ಆಡಳಿತ ಯಂತ್ರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಇತ್ತೀಚೆಗೆ ನಡೆದ ಸ್ಥಳೀಯ ‘ರಿಯಾಲಿಟಿ ಚೆಕ್’ ವೇಳೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಕ್ರಮ ಭಟ್ಟಿಗಳು ಯಾವುದೇ ಅಡೆತಡೆಯಿಲ್ಲದೆ ನಿರಂತರವಾಗಿ ನಡೆಯುತ್ತಿರುವುದು ಕಂಡುಬಂದಿದೆ. ಅಧಿಕಾರಿಗಳಿಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ತಲುಪಿಸಿದ್ದರೂ, ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಕನಿಷ್ಠ ಸೌಜನ್ಯವನ್ನೂ ತೋರಿಲ್ಲ.

1000411022

ಅನೇಕ ಇಟ್ಟಿಗೆ ಭಟ್ಟಿ ಮಾಲೀಕರು “ನಾವು ನಮ್ಮ ಸ್ವಂತ ಜಮೀನಿನಲ್ಲೇ ಇಟ್ಟಿಗೆ ತಯಾರಿಸುತ್ತಿದ್ದೇವೆ, ಇದಕ್ಕೆ ಅನುಮತಿ ಬೇಕಿಲ್ಲ” ಎಂದು ಅಧಿಕಾರಿಗಳ ಮುಂದೆ ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ ಕರ್ನಾಟಕ ಭೂ ಕಂದಾಯ ಕಾಯ್ದೆಯ ಪ್ರಕಾರ, ಯಾವುದೇ ಕೃಷಿ ಭೂಮಿಯಲ್ಲಿ ವಾಣಿಜ್ಯ ಉದ್ದೇಶದ ಇಟ್ಟಿಗೆ ಭಟ್ಟಿ ನಡೆಸುವಂತಿಲ್ಲ; ಅದಕ್ಕೆ ಕಡ್ಡಾಯವಾಗಿ ಭೂ ಪರಿವರ್ತನೆ (NA) ಮಾಡಿಸಿರಬೇಕು. ಭೂಮಿ ಯಾರದ್ದೇ ಆಗಿರಲಿ, ಮಣ್ಣು ಎನ್ನುವುದು ಸರ್ಕಾರದ ನೈಸರ್ಗಿಕ ಸಂಪತ್ತು.

‘ಕರ್ನಾಟಕ ಸಣ್ಣ ಖನಿಜ ರಿಯಾಯಿತಿ ನಿಯಮಾವಳಿ’ ಅಡಿಯಲ್ಲಿ ಮಣ್ಣು ತೆಗೆಯಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಅನುಮತಿ ಪಡೆದು ಸರ್ಕಾರಕ್ಕೆ ರಾಯಧನ (Royalty) ಪಾವತಿಸುವುದು ಕಡ್ಡಾಯವಾಗಿದೆ. ಈ ರಾಯಧನ ಪಾವತಿಸದೆ ಮಣ್ಣು ಎತ್ತುವುದು ನೇರವಾಗಿ ‘ಅಕ್ರಮ ಗಣಿಗಾರಿಕೆ’ ವ್ಯಾಪ್ತಿಗೆ ಬರುತ್ತದೆ. ಅಧಿಕಾರಿಗಳಿಗೆ ಈ ಕಾನೂನು ತಿಳಿದಿದ್ದರೂ, ಮಾಲೀಕರ ಮಾತು ಕೇಳಿ ಸುಮ್ಮನಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಪರವಾನಗಿ ಇಲ್ಲದ ಭಟ್ಟಿಗಳು ಅರಣ್ಯದ ಮಣ್ಣು ಮತ್ತು ಕಟ್ಟಿಗೆಯನ್ನು ಲೂಟಿ ಮಾಡುತ್ತಿದ್ದರೂ ಅರಣ್ಯ ಇಲಾಖೆ ಮೌನಕ್ಕೆ ಶರಣಾಗಿದೆ. ಹೆಸ್ಕಾಂನ ವಿದ್ಯುತ್ ಕಂಬಗಳಿಂದ ನೇರವಾಗಿ ಅಕ್ರಮ ಸಂಪರ್ಕ ಪಡೆದು ಕೋಟ್ಯಂತರ ರೂಪಾಯಿ ನಷ್ಟ ಉಂಟುಮಾಡುತ್ತಿದ್ದರೂ ಇಲಾಖೆಯು ಅತ್ತ ತಿರುಗಿ ನೋಡುತ್ತಿಲ್ಲ. ಇದು ಅಧಿಕಾರಿಗಳು ಮತ್ತು ಅಕ್ರಮ ಭಟ್ಟಿ ಮಾಲೀಕರ ನಡುವೆ ಇರುವ ಸಂಬಂಧದ ಫಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ವರದಿಗಳು ಪ್ರಕಟವಾದಾಗಲೆಲ್ಲಾ ‘ಪರಿಶೀಲಿಸುತ್ತೇವೆ’ ಎಂಬ ಹಾರಿಕೆಯ ಉತ್ತರ ನೀಡುವ ಅಧಿಕಾರಿಗಳು, ವಾಸ್ತವದಲ್ಲಿ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ರಾಯಧನ ಮತ್ತು ತೆರಿಗೆ ವಂಚನೆಯಾಗುತ್ತಿದ್ದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಮೌನ ವಹಿಸಿರುವುದು ಆಶ್ಚರ್ಯಕರವಾಗಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ತಾಲೂಕಿನಾದ್ಯಂತ ಸಕ್ರಿಯಗೊಂಡ ಇಟ್ಟಿಗೆ ಭಟ್ಟಿಗಳು: ಅರಣ್ಯ–ಪರಿಸರದ ಮೇಲೆ ಹೆಚ್ಚಿದ ಒತ್ತಡ

ಮಣ್ಣಿನ ಲೂಟಿ ಮತ್ತು ಗಾಳಿಯ ಮಾಲಿನ್ಯದಿಂದ ಸ್ಥಳೀಯ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದರೂ, ಮಾಲಿನ್ಯ ನಿಯಂತ್ರಣ ಮಂಡಳಿಯು ಯಾವುದೇ ನೋಟಿಸ್ ನೀಡಿಲ್ಲ. ಅಧಿಕಾರಿಗಳ ಈ ನಿರ್ಲಕ್ಷ್ಯ ಧೋರಣೆಯಿಂದಾಗಿ ಅಕ್ರಮ ನಡೆಸುವವರಿಗೆ ಭಯವೇ ಇಲ್ಲದಂತಾಗಿದ್ದು, ಅವರು ಬಹಿರಂಗವಾಗಿಯೇ ಕಾನೂನು ಉಲ್ಲಂಘಿಸುತ್ತಿದ್ದಾರೆ.

ಇನ್ನಾದರೂ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆಗಳ ಉನ್ನತ ಅಧಿಕಾರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಕೇವಲ ಕಾಗದದ ಮೇಲೆ ಆದೇಶ ಹೊರಡಿಸದೆ, ಸ್ಥಳಕ್ಕೆ ಭೇಟಿ ನೀಡಿ ಅನಧಿಕೃತ ಭಟ್ಟಿಗಳಿಗೆ ಬೀಗ ಜಡಿಯುವ ಕೆಲಸವಾಗಬೇಕು. ಪರಿಸರ ನಾಶ ಮಾಡುವ ಮತ್ತು ಸರ್ಕಾರದ ಆದಾಯಕ್ಕೆ ಕನ್ನ ಹಾಕುವ ಇಂತಹ ಮಾಫಿಯಾಗಳಿಗೆ ಕಡಿವಾಣ ಹಾಕದಿದ್ದರೆ, ಮುಂಡಗೋಡಿನ ನೈಸರ್ಗಿಕ ಸಂಪತ್ತು ಸಂಪೂರ್ಣವಾಗಿ ಬರಿದಾಗುವುದರಲ್ಲಿ ಸಂಶಯವಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...