ಮುಂಡಗೋಡ | ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಸಚಿವರಿಗೆ ಮನವಿ

Date:

ಮುಂಡಗೋಡ: ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಹಾಗೂ ಮಾನವ ಸಂಪನ್ಮೂಲ ಒದಗಿಸುವುದು, ತಾಲೂಕು ಆಸ್ಪತ್ರೆಯಲ್ಲಿನ ಕುಂದುಕೊರತೆಗಳನ್ನು ನಿವಾರಿಸುವುದು ಸೇರಿದಂತೆ ಮೈನಳ್ಳಿ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡುವಂತೆ ಆಗ್ರಹಿಸಿ ‘ನಮ್ಮ ಆರೋಗ್ಯ ನಮ್ಮ ಹಕ್ಕು’ ಸಮಿತಿಯ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

- Advertisement -

ಸೆ.30ರಂದು ಬೆಂಗಳೂರಿನ ಸಚಿವರ 7ನೇ ಕ್ವಾರ್ಟರ್ಸ್‌ನಲ್ಲಿ ನಡೆದ ಭೇಟಿಯಲ್ಲಿ ಮುಂಡಗೋಡ ತಾಲೂಕಿನ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ಸಚಿವರಿಗೆ ವಿವರಿಸಲಾಯಿತು. ವಿಶೇಷವಾಗಿ ಮೈನಳ್ಳಿ ಭಾಗದ ಜನರು ಆರೋಗ್ಯ ಸೇವೆಗಾಗಿ ದೂರದ ಕೇಂದ್ರಗಳಿಗೆ ತೆರಳಬೇಕಾದ ಪರಿಸ್ಥಿತಿ, ತುರ್ತು ಸಂದರ್ಭಗಳಲ್ಲಿ ಎದುರಾಗುವ ಸಮಸ್ಯೆಗಳು ಹಾಗೂ ಸ್ಥಳೀಯವಾಗಿ ಆರೋಗ್ಯ ಸೇವೆಗಳ ಅಗತ್ಯತೆ ಕುರಿತು ಸಮಿತಿಯ ಸದಸ್ಯರು ಗಮನ ಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಸುದ್ದಿ ಓದಿದ್ದೀರಾ? ಕುಮಟಾ | ದೇವಿಮನೆ ಘಟ್ಟದಲ್ಲಿ KSRTC ಬಸ್ ಕಂದಕಕ್ಕೆ; 18 ಮಂದಿಗೆ ಗಾಯ

ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು, ಸಿಬ್ಬಂದಿ ಕೊರತೆ ನಿವಾರಿಸುವುದು ಹಾಗೂ ತಾಲೂಕು ಆಸ್ಪತ್ರೆಯಲ್ಲಿನ ಕುಂದುಕೊರತೆಗಳನ್ನು ಸರಿಪಡಿಸುವಂತೆ ಮನವಿ ಮಾಡಲಾಯಿತು. ಅಲ್ಲದೆ, ಸರ್ಕಾರದ ಮಾನದಂಡಗಳ ಪ್ರಕಾರ ಮೈನಳ್ಳಿ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡುವಂತೆ ಒತ್ತಾಯಿಸಲಾಯಿತು.

ಮನವಿ ಸ್ವೀಕರಿಸಿದ ಸಚಿವ ಯು.ಟಿ. ಖಾದರ್, ಮುಂಡಗೋಡ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಹಾಗೂ ಅಗತ್ಯ ಮಾನವ ಸಂಪನ್ಮೂಲಗಳನ್ನು ಸುಧಾರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ತಾಲೂಕು ಆಸ್ಪತ್ರೆಯಲ್ಲಿನ ಕುಂದುಕೊರತೆಗಳನ್ನು ನಿವಾರಿಸುವ ಕುರಿತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮೈನಳ್ಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರಾಗುವವರೆಗೆ ತಾತ್ಕಾಲಿಕವಾಗಿ ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿಯೂ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ‘ನಮ್ಮ ಆರೋಗ್ಯ ನಮ್ಮ ಹಕ್ಕು’ ಸಮಿತಿ ಅಧ್ಯಕ್ಷ ಹಾಗೂ ಜನವೇದಿಕೆ ನಾಯಕ ರವಿ ಟಾಕ್ರಪ್ಪ ಲಮಾಣಿ, ಕನಕದಾಸ ಆರೋಗ್ಯ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ಜನವೇದಿಕೆ ನಾಯಕ ದೊಂಡು ವಿಟ್ಟು ಎಡಗೆ, ಲಕ್ಷ್ಮಿ ರೋಂಗು ಮೀಸಳ, ಆಶಾರಾಣಿ ಗಂಗಾರಾಮ ಸಿಂಧೆ, ಭರಮಣ್ಣ ಚಕ್ರಸಾಲಿ ಹಾಗೂ ಮಮತಾ ಅಶೋಕ್ ಎಲ್. ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...

ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ...

ಕಾರವಾರ | ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲು ಉಪಲೋಕಾಯುಕ್ತರ ಸೂಚನೆ

ಕಾರವಾರ: ನಗರಸಭಾ ವ್ಯಾಪ್ತಿಯಲ್ಲಿದ್ದರೂ ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಗುಡ್ಡಳ್ಳಿ ಗ್ರಾಮದ...