ಮುಂಡಗೋಡ | ಬಿಜೆಪಿಗೆ ಬಿಗ್ ಶಾಕ್; ವಿವೇಕ್ ಹೆಬ್ಬಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಯುವ ನಾಯಕ ರವಿ ಹಾವೇರಿ

Date:

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯ ಸಮೀಕರಣದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಮುಂಡಗೋಡಿನ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಬಿಜೆಪಿಯ ಪ್ರಭಾವಿ ಯುವ ಮುಖಂಡ ರವಿ ಹಾವೇರಿ ಅವರು ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

- Advertisement -

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡರು ಹಾಗೂ ಕೆಪಿಸಿಸಿ ಸದಸ್ಯರಾದ ವಿವೇಕ್ ಹೆಬ್ಬಾರ್ ಅವರ ನೇತೃತ್ವದಲ್ಲಿ ಈ ಸೇರ್ಪಡೆ ಪ್ರಕ್ರಿಯೆ ನಡೆಯಿತು. ವಿವೇಕ್ ಹೆಬ್ಬಾರ್ ಅವರು ರವಿ ಹಾವೇರಿ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲನ್ನು ಹಾಕಿ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಾಂಗ್ರೆಸ್‌ಗೆ ಆನೆಬಲ: ಮೂಲತಃ ವೃತ್ತಿಯಲ್ಲಿ ಗುತ್ತಿಗೆದಾರರಾಗಿರುವ ರವಿ ಹಾವೇರಿ ಅವರು ಭೋವಿ ಸಮಾಜದ ಪ್ರಬಲ ಮುಖಂಡರಾಗಿದ್ದಾರೆ. ಈ ಹಿಂದೆ ಬಿಜೆಪಿ ಪಕ್ಷದಲ್ಲಿ ಹಲವು ಪ್ರಮುಖ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಅವರು, ಸಂಘಟನಾತ್ಮಕವಾಗಿ ಉತ್ತಮ ಹಿಡಿತ ಹೊಂದಿದ್ದಾರೆ.

ಅವರ ಈ ಸೇರ್ಪಡೆಯಿಂದ ಮುಂಬರುವ ದಿನಗಳಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ‘ಆನೆ ಬಲ’ ಬಂದಂತಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ರವಿ ಹಾವೇರಿ ಅವರು, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ವಿವೇಕ್ ಹೆಬ್ಬಾರ್ ಅವರ ಕಾರ್ಯವೈಖರಿಯನ್ನು ಮೆಚ್ಚಿ ತಾವು ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ಆಯ್ದ ಹತ್ಯೆಗಳ ಬಗ್ಗೆ ಮಾತ್ರ ಆಕ್ರೋಶವೇಕೆ? ಉಪೇಂದ್ರ ಪೈ–ಅನಂತಮೂರ್ತಿ ಹೆಗಡೆಗೆ ಅರ್ಜುನ್ ಮಿಂಟಿ ನೇರ ಪ್ರಶ್ನೆ

ಇದೇ ಸಂದರ್ಭದಲ್ಲಿ ಮತ್ತೊಬ್ಬ ಗುತ್ತಿಗೆದಾರರಾದ ನಾಗಪ್ಪ ಯಲ್ಲಪ್ಪ ವಡ್ಡರ (ಹೊಂಡಾ) ಅವರು ಕೂಡ ಪಕ್ಷ ಸೇರ್ಪಡೆಯಾದರು.

ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ, ಜಿಲ್ಲಾಧ್ಯಕ್ಷರಾದ ಸಾಯಿ ಗಾಂವ್ಕರ್ ಅವರು, ಕುಮಟಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಶೆಟ್ಟಿ, ಉತ್ತರ ಕನ್ನಡ ಜಿಲ್ಲೆಯ ಮಹಿಳಾ ಅಧ್ಯಕ್ಷೆ ಶಾರದಾ ಬಾಯಿ ರಾಠೋಡ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಸುಧಾ ಭೋವಿವಡ್ಡರ, ಜ್ಞಾನದೇವ ಗುಡಿಯಾಳ, ಕೃಷ್ಣಾ ಹಿರೇಹಳ್ಳಿ, ಸಲ್ಮಾ ಕಿರಣ ಶೇರಖಾನೆ, ಹಾಗೂ ಸ್ಥಳೀಯ ಕಾಂಗ್ರೆಸ್ ನಾಯಕರು ಹಾಗೂ ರವಿ ಹಾವೇರಿ ಅವರ ಬೆಂಬಲಿಗರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...