ಮುಂಡಗೋಡ | ರಸ್ತೆಯಲ್ಲಿ ಬರ್ತ್‌ಡೇ ಪಾರ್ಟಿ: ಮನೆಗೆ ಹೋಗಲು ದಾರಿ ಕೇಳಿದ ವ್ಯಕ್ತಿಯ ಮೇಲೆ ಹಲ್ಲೆ, ಮೂವರ ವಿರುದ್ಧ ದೂರು

Date:

ಮುಂಡಗೋಡ: ರಸ್ತೆಯಲ್ಲಿ ಹುಟ್ಟುಹಬ್ಬದ ಆಚರಣೆ ಮಾಡುತ್ತಿದ್ದಾಗ ಮನೆಗೆ ಹೋಗಲು ಜಾಗ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಮೂವರು ಸೇರಿ ಕೈ, ಕಾಲು ಹಾಗೂ ಕಟ್ಟಿಗೆಯಿಂದ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ.

- Advertisement -

ಘಟನೆಯಲ್ಲಿ ಗಾಯಗೊಂಡ ಮುಂಡಗೋಡ ತಾಲೂಕಿನ ನಿವಾಸಿ ಸಂತೋಷ ರಾಜಪ್ಪ ಕಟ್ಟಿಮನಿ (37) ಎಂಬುವವರು ಮುಂಡಗೋಡ ಪೊಲೀಸ್ ಠಾಣೆಗೆ ತೆರಳಿ ಆರೋಪಿಗಳ ವಿರುದ್ಧ ಲಿಖಿತ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಘಟನೆಯ ವಿವರ: ದೂರುದಾರ ಸಂತೋಷ್ ಅವರು ದಿನಾಂಕ 14-10-2026 ರಂದು ರಾತ್ರಿ ಸುಮಾರು 09:00 ಗಂಟೆಗೆ ಮುಂಡಗೋಡ ಪಟ್ಟಣದಲ್ಲಿ ತಮ್ಮ ಕೆಲಸವನ್ನು ಮುಗಿಸಿಕೊಂಡು ಸ್ಕೂಟಿ ವಾಹನದಲ್ಲಿ ಮನೆಗೆ ವಾಪಸ್ ಹಿಂತಿರುಗುತ್ತಿದ್ದರು. ಕೊಪ್ಪ ಗ್ರಾಮದಲ್ಲಿದ್ದ ತಮ್ಮ ಮನೆಯ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಆರೋಪಿಗಳಾದ ಮಂಜು ಸಂಕ್ರಪ್ಪ, ಪ್ರಜ್ವಲ್ ನಾರಾಯಣ ಕಟ್ಟಿಮನಿ ಹಾಗೂ ಶ್ರೇಯಸ್ ನಾರಾಯಣ ಕಟ್ಟಿಮನಿ ಎಂಬ ಮೂವರು ಸೇರಿಕೊಂಡು ಬರ್ತ್‌ಡೇ ಪಾರ್ಟಿ ಮಾಡುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಪರಿಶಿಷ್ಟ ಜಾತಿ, ಪಂಗಡದ ಅನುದಾನ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ

ಈ ವೇಳೆ ಸಂತೋಷ್ ಅವರು “ನಾನು ಮನೆಗೆ ಹೋಗಬೇಕು, ರಸ್ತೆಯಿಂದ ಸ್ವಲ್ಪ ಪಕ್ಕಕ್ಕೆ ಸರಿಯಿರಿ” ಎಂದು ವಿನಂತಿಸಿಕೊಂಡಿದ್ದಾರೆ. ಇದರಿಂದ ಕೆರಳಿದ ಆರೋಪಿಗಳು ರಸ್ತೆಯಿಂದ ಎದ್ದು ಹೋಗದೆ, “ನಿನಗೆ ಜಾಗ ಕೊಡುವುದಿಲ್ಲ, ಪಾರ್ಟಿ ಮುಗಿಯುವವರೆಗೆ ಇಲ್ಲೇ ಇರಬೇಕು” ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಳಿಕ ಮೂವರೂ ಸೇರಿ ಸಂತೋಷ್ ಅವರ ಮೂಗಿಗೆ ಕೈಯಿಂದ ಹೊಡೆದು, ಕಾಲಿನಿಂದ ತುಳಿದು ತೀವ್ರ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ ಆರೋಪಿ ಶ್ರೇಯಸ್ ಕಟ್ಟಿಮನಿ ಎಂಬಾತನು ಅಲ್ಲೇ ಬಿದ್ದಿದ್ದ ಕಟ್ಟಿಗೆಯಿಂದ ಸಂತೋಷ್ ಅವರ ತಲೆಗೆ ಬಲವಾಗಿ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅವರಿಂದ ಹೇಗೋ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಸಂತೋಷ್ ಅವರಿಗೆ, “ಇವತ್ತು ಬದುಕಿ ಉಳಿದುಕೊಂಡಿದ್ದೀಯಾ, ಇನ್ನೊಮ್ಮೆ ಸಿಕ್ಕರೆ ನಿನ್ನನ್ನು ಜೀವಸಹಿತ ಬಿಡುವುದಿಲ್ಲ” ಎಂದು ಆರೋಪಿಗಳು ಪ್ರಾಣ ಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಹಲ್ಲೆ ನಡೆಸಿದ ಮೂವರು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಸಂತೋಷ್ ಅವರು ಪೊಲೀಸರಲ್ಲಿ ವಿನಂತಿಸಿದ್ದು, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ...

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ...

SIR ರದ್ದುಗೊಳಿಸಿ, CEC ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ...

ಉಡುಪಿ | ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು

ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು...