ಮುಂಡಗೋಡ | ಬೌದ್ಧ ಧರ್ಮ ಗುರು ದಲಾಯಿ ಲಾಮ ಅವರಿಗೆ ‘ದಸಂಸ ಅಂಬೇಡ್ಕರ್ ಧ್ವನಿ’ ಸಂಘಟನೆಯಿಂದ ಗೌರವ ಸನ್ಮಾನ

Date:

ಮುಂಡಗೋಡ: ಇಲ್ಲಿನ ಟಿಬೇಟಿಯನ್ ಕ್ಯಾಂಪ್‌ನಲ್ಲಿ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ ಚಂದ್ರಕಾಂತ್ ಎಸ್. ಕಾದ್ರೊಳ್ಳಿ ಬಣ) ವತಿಯಿಂದ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು.

- Advertisement -

ಬೌದ್ಧ ಧರ್ಮದ ಪರಮೋಚ್ಚ ಗುರುಗಳು ಹಾಗೂ ನೋಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತರಾದ ಪೂಜ್ಯ ದಲಾಯಿ ಲಾಮ ಅವರನ್ನು ಸಂಘಟನೆಯ ಪದಾಧಿಕಾರಿಗಳು ಭೇಟಿ ಮಾಡಿ, ಗೌರವ ಪೂರ್ವಕವಾಗಿ ಸನ್ಮಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಸಂದರ್ಭದಲ್ಲಿ ದಲಾಯಿ ಲಾಮ ಅವರಿಗೆ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ನೀಡುವುದರ ಮೂಲಕ ಸಂಘಟನೆಯ ವತಿಯಿಂದ ಆತ್ಮೀಯವಾಗಿ ಗೌರವಿಸಲಾಯಿತು. ಶಾಂತಿ ಮತ್ತು ಮಾನವೀಯತೆಯ ಸಂದೇಶ ಸಾರುವ ಇಬ್ಬರು ಮಹಾನ್ ಚೇತನಗಳ ಆಶಯಗಳನ್ನು ಈ ಗೌರವ ಸಮರ್ಪಣೆಯು ಪ್ರತಿಬಿಂಬಿಸುವಂತಿತ್ತು.

1000387069

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಬಸವರಾಜ್ ಸಂಗಮೇಶ್ವರ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಮಂಜುನಾಥ್ ಹರಿಜನ ಚಿಗಳ್ಳಿ ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಮರಿಯಪ್ಪ ಬೆನಕನಹಳ್ಳಿ ಅವರು ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು. ಮುಂಡಗೋಡ ತಾಲೂಕಾಧ್ಯಕ್ಷರಾದ ನಾಗರಾಜ್ ಮೇತ್ರಿ, ತಾಲೂಕ ಗೌರವಾಧ್ಯಕ್ಷರಾದ ಎನ್.ಎಮ್. ಮೇತ್ರಿ ಮತ್ತು ಪಾಳಾ ತಾಲೂಕ ಉಪಾಧ್ಯಕ್ಷರಾದ ಚಂದ್ರಶೇಖರ್ ತೊಂಡೂರ್ ಅವರು ಸನ್ಮಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ತಾಲೂಕಿನಾದ್ಯಂತ ಸಕ್ರಿಯಗೊಂಡ ಇಟ್ಟಿಗೆ ಭಟ್ಟಿಗಳು: ಅರಣ್ಯ–ಪರಿಸರದ ಮೇಲೆ ಹೆಚ್ಚಿದ ಒತ್ತಡ

ಇನ್ನುಳಿದಂತೆ ತಾಲೂಕ ಪ್ರಧಾನ ಕಾರ್ಯದರ್ಶಿ ಅರ್ಜುನ್ ಸನವಳ್ಳಿ, ಉಪಾಧ್ಯಕ್ಷ ಕನಕಪ್ಪ ಹರಿಜನ, ಕೋಶಾಧ್ಯಕ್ಷ ಮಂಜುನಾಥ ಗೋಟಗೊಡಿಕೊಪ್ಪ ಹಾಗೂ ಪ್ರಮುಖರಾದ ಅಶೋಕ್ ಹರಿಜನ, ಶಂಕರ್ ಹರಿಜನ, ಗಣಪತಿ ನಡಕಿನಮನಿ, ಬಸವರಾಜ ನಡುಕಿನಮನಿ, ಬಸವರಾಜ್ ಅತ್ತಿವೇರಿ ಮತ್ತು ಪರಶುರಾಮ್ ಹರಿಜನ ಉಪಸ್ಥಿತರಿದ್ದರು.

ಅಲ್ಲದೆ ಕೊಳಗಿ ಪರಶುರಾಮ ಗೌಡಣ್ಣನವರ್ ಶಿಡ್ಲಗುಂಡಿ, ವೀರಭದ್ರ ಕೊಳಗಿ ಹಾಗೂ ಮಹಿಳಾ ಘಟಕದ ತಾಲೂಕ ಅಧ್ಯಕ್ಷರಾದ ಶಿವಕ್ಕ ಹರಿಜನ್ ಹುನಗುಂದ, ಉಪಾಧ್ಯಕ್ಷೆ ಸರೋಜಾ ದೊಡ್ಮನಿ ಮತ್ತು ಹುನುಗುಂದ ಘಟಕದ ಅಧ್ಯಕ್ಷರಾದ ಮಂಜುನಾಥ್ ಹರಿಜನ ಸೇರಿದಂತೆ ಸಂಘಟನೆಯ ಅನೇಕ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...