ಮುಂಡಗೋಡ | ಪಟ್ಟಣದಲ್ಲಿ ದನಗಳ್ಳರ ಹಾವಳಿ ಹೆಚ್ಚಳ: ಪೋಲಿಸರಿಗೆ ದೂರು ನೀಡಿದ ಮಾಲಿಕರು

Date:

ಮುಂಡಗೋಡ : ಕಳೆದ ಕೆಲವು ದಿನಗಳಿಂದ ಪಟ್ಟಣದಲ್ಲಿ ದನಗಳ್ಳರ ಹಾವಳಿ ಹೆಚ್ಚಾಗಿದ್ದು ರಾತ್ರಿ ವೇಳೆಯಲ್ಲಿ ಮಲಗಿರುವ ದನ ಕರುಗಳನ್ನು ಕಾರಿನಲ್ಲಿ ಕಳುವು ಮಾಡಿಕೊಂಡು ಹೊಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ, ಇದರಿಂದ ಸ್ಥಳೀಯರಲ್ಲಿ ಮತ್ತು ಜಾನುವಾರು ಮಾಲೀಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕಂದು ಬಣ್ಣದ ರೆನಾಲ್ಟ್ ಡಸ್ಟರ್ ಕಾರಿನ ಹಾಗೆ ಕಾಣುವ ವಾಹನದಲ್ಲಿ ಅಪರಿಚಿತ ವ್ಯಕ್ತಿಗಳು ರಾತ್ರಿ ಹೊತ್ತು ಬಂದು, ಈ ಕೃತ್ಯ ಎಸಗುತ್ತಿದ್ದಾರೆ ಎಂದು ಪ್ರಾಣಿಗಳ ಮಾಲಿಕರು ತಿಳಿಸಿದ್ದಾರೆ.

- Advertisement -

ಇದುವರೆಗೆ ಮೂರು ದನ ಕಳುವಾಗಿರುವುದಾಗಿ ತಿಳಿದುಬಂದಿದೆ. ಜಗದೀಶ ಭರಮಣ್ಣ ಗೌಳಿ ಅವರಿಗೆ ಸೇರಿದ ಸಣ್ಣ ಕರು, ಜಗದೀಶ ಅಗಡಿ ಅವರಿಗೆ ಸೇರಿದ ಆಕಳು, ಹಾಗೂ ಹಜರತ ಅಲಿ ಅಬ್ದುಲ್ ರೆಹಮಾನ್ ಚೋಪದಾರ, ಅವರಿಗೆ ಸೇರಿದ ದನವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ಮಾಲಿಕರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚಳ: ಅಬಕಾರಿ ಇಲಾಖೆಯ ನಿರ್ಲಕ್ಷ್ಯಕ್ಕೆ ಬಡ ಕುಟುಂಬಗಳು ಬೀದಿಪಾಲು

ರಾತ್ರಿ ವೇಳೆ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ಕಂದು ರೂಪದ ಕಾರಿನ ಚಿತ್ರವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಸಿಕ್ಕಿದ್ದೆ, ದನಗಳ ಮಾಲಿಕರು ತಮ್ಮ ದನಗಳನ್ನು ಸುರಕ್ಷಿತವಾಗಿ ಕಾಯ್ದುಕೊಳ್ಳುವಂತೆ, ಮತ್ತು  ಸಂಜೆ ನಂತರ ಬೀದಿಗೆ ಬಿಡದಂತೆ ಕೊಟ್ಟಿಗೆಯಲ್ಲಿ ಕಟ್ಟಿ ಹಾಕುವಂತೆ ಹಾಗೂ ಯಾವುದೇ ಅನುಮಾನಾಸ್ಪದ ವಾಹನ ಅಥವಾ ವ್ಯಕ್ತಿಗಳನ್ನು ಗಮನಿಸಿದ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಪೊಲೀಸರು ಶೀಘ್ರದಲ್ಲೇ ಆರೋಪಿಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...