ಮುಂಡಗೋಡ | ರಾಮಾಪುರ ಗ್ರಾಮದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ

Date:

ಮುಂಡಗೋಡ ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ಗ್ರಾಮ ಅಭಿವೃದ್ಧಿ ಸಮಿತಿ, ಲೊಯೋಲ ವಿಕಾಸ ಕೇಂದ್ರ–ಮುಂಡಗೋಡ ಹಾಗೂ ಯುವರತ್ನ ಯುವ ಒಕ್ಕೂಟ–ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

- Advertisement -

ಲೊಯೋಲ ವಿಕಾಸ ಕೇಂದ್ರದ ಕಾರ್ಯಕರ್ತ ಭರಮಣ್ಣ ಚಕ್ರಸಾಲಿ ಮಾತಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ, ಸಂವಿಧಾನ ರಚನೆಗೆ ಅವರ ಕೊಡುಗೆ ಹಾಗೂ ಅವರು ನೀಡಿದ “ಶಿಕ್ಷಣ–ಸಂಘಟನೆ–ಹೋರಾಟ” ತತ್ವಗಳ ಬಗ್ಗೆ ಗ್ರಾಮಸ್ಥರಿಗೆ ವಿವರಿಸಿದರು. ಗ್ರಾಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀ ಶ್ರೀಕಾಂತ ಪೂಜಾರ್ ಮಾತನಾಡಿ,“ನಾವು ಎಲ್ಲರೂ ಅಂಬೇಡ್ಕರ್ ರಚಿಸಿದ ಸಂವಿಧಾನದಡಿ ಬದುಕುತ್ತಿದ್ದೇವೆ. ಅದರ ನಿಯಮಗಳನ್ನು ಸರಿಯಾಗಿ ಪಾಲಿಸಿದಾಗ ಮಾತ್ರ ಅಂಬೇಡ್ಕರ್ ಅವರ ಕನಸು ನಿಜವಾಗುತ್ತದೆ,” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ರಾತ್ರಿ ಪೂರ್ತಿ ಅಕ್ರಮವಾಗಿ ಮರಳು ಸಾಗಾಟ; ಅರಣ್ಯ ಇಲಾಖೆಯ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ಕಾರ್ಯಕ್ರಮದಲ್ಲಿ ಕೋಡಂಬಿ ಗ್ರಾಮ ಪಂಚಾಯತ್ ಸದಸ್ಯ ಅಶೋಕ್ ಅರಳೇಶ್ವರ, ಜನವೇದಿಕೆ ನಾಯಕಿ ಸಾವಿತ್ರಿ ಪೂಜಾರ್, ಸಮಿತಿ ಸದಸ್ಯ ಸಿದ್ರಾಮಯ್ಯ ಬಡಿಗೇರ್, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಗ್ರಾಮ ಅಭಿವೃದ್ಧಿ ಸಮಿತಿಯ ಮಹಿಳೆಯರು ಪಾಲ್ಗೊಂಡಿದ್ದರು. ಶ್ರೀಮತಿ ಮಂಗಳಾ ಮೋರೆ ಸ್ವಾಗತಿಸಿ, ಶ್ರೀ ಪ್ರವೀಣ ಶೇದಿಯಣ್ಣನವರ ವಂದನೆ ಸಲ್ಲಿಸಿದರು.ಶ್ರೀ ಹಜರತ್ ಮುಲ್ಲಾನವರ ಅವರು “ಸಂವಿಧಾನ ಅರಿಯೋ–ಸಂವಿಧಾನ ತಿಳಿಯೋ” ಎಂಬ ಜಾಗೃತಿ ಹಾಡನ್ನು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...