ಮುಂಡಗೋಡ | ಹೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ; ಲಂಚದ ಆರೋಪಗಳಿಂದಲೇ ಸುದ್ದಿಯಲ್ಲಿದ್ದ ಅಧಿಕಾರಿ

Date:

ಮುಂಡಗೋಡ: ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಧರ್ಮರಾಜ ಬೆಡಸಗಾಂವ್ ಅವರು ₹65 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಮುಂಡಗೋಡಿನಲ್ಲಿ ನಡೆದಿದೆ.

- Advertisement -

ವಿದ್ಯುತ್ ಗುತ್ತಿಗೆದಾರ ಶಿವಯೋಗಿ ಕೂಡಲಮಠ ನೀಡಿದ ದೂರಿನ ಮೇರೆಗೆ ಕಾರವಾರ ಹಾಗೂ ಧಾರವಾಡ ಲೋಕಾಯುಕ್ತ ಘಟಕಗಳ ಅಧಿಕಾರಿಗಳ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಮುಂಡಗೋಡಿನ ಹೆಸ್ಕಾಂ ಕಚೇರಿಯಲ್ಲೇ ಎಇಇ ಅವರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಮಾಹಿತಿಯ ಪ್ರಕಾರ, ಬಿಸಿಎಂ ವಸತಿ ನಿಲಯದ ವಿದ್ಯುತ್ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳ ಸಂಬಂಧ ಹಣದ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮುಂಗಡವಾಗಿ ₹65 ಸಾವಿರ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡದ ಇಬ್ಬರು ಪೊಲೀಸ್ ಸಿಬ್ಬಂದಿಗೆ ಡಿಜಿ-ಐಜಿಪಿ ಶ್ಲಾಘನಾ ಪದಕ

ಇದೇ ವೇಳೆ, ಕಳೆದ ಸುಮಾರು ಒಂದೂವರೆ ವರ್ಷಗಳಿಂದ ಮುಂಡಗೋಡ ಹೆಸ್ಕಾಂ ಉಪವಿಭಾಗದಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಇಇ ಧರ್ಮರಾಜ ಬೆಡಸಗಾಂವ್ ವಿರುದ್ಧ ಗುತ್ತಿಗೆದಾರರ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿತ್ತು ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಸಣ್ಣಪುಟ್ಟ ಕೆಲಸಗಳಿಂದ ಹಿಡಿದು ವಿವಿಧ ಕಾಮಗಾರಿಗಳ ತನಕ ಹಣದ ಬೇಡಿಕೆ ಇಡಲಾಗುತ್ತಿತ್ತು ಎಂಬ ಆರೋಪಗಳನ್ನು ಹೆಸರು ಹೇಳಲು ಇಚ್ಛಿಸದ ಕೆಲವು ಗುತ್ತಿಗೆದಾರರು ಮಾಡುತ್ತಿದ್ದಾರೆ.

ಈಗಾಗಲೇ ಕಾಮಗಾರಿಗಳ ಸ್ಪರ್ಧೆ ಹೆಚ್ಚಿರುವುದು, ಬಿಲ್‌ಗಳ ಪಾವತಿ ವಿಳಂಬವಾಗುತ್ತಿರುವುದು ಹಾಗೂ ಮಾರುಕಟ್ಟೆಯ ಪರಿಸ್ಥಿತಿಯಿಂದ ಗುತ್ತಿಗೆದಾರರು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಅಧಿಕಾರಿಯ ನಡೆ ಮತ್ತಷ್ಟು ತೊಂದರೆ ಉಂಟುಮಾಡಿತ್ತು ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಾಯುಕ್ತ ಬಲೆಗೆ ಅಧಿಕಾರಿ ಬಿದ್ದಿರುವ ಹಿನ್ನೆಲೆಯಲ್ಲಿ ಅವರ ಕಾರ್ಯವೈಖರಿ, ಅವರು ನಿರ್ವಹಿಸಿದ್ದ ಕಾಮಗಾರಿಗಳು ಹಾಗೂ ಕಚೇರಿಯ ಆಡಳಿತಾತ್ಮಕ ಚಟುವಟಿಕೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂಬ ಒತ್ತಾಯವೂ ಸಾರ್ವಜನಿಕರ ವಲಯದಿಂದ ಕೇಳಿಬರುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರಿಸಿದ್ದು, ತನಿಖೆಯ ಬಳಿಕವೇ ಆರೋಪಗಳ ಸತ್ಯಾಸತ್ಯತೆ ಸಂಪೂರ್ಣವಾಗಿ ಹೊರಬರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜೈಂಟ್ಸ್ ಗ್ರೂಪ್ ವತಿಯಿಂದ ಒಂದು ವಾರದ ಸಮಾಜಮುಖಿ ಸೇವಾ ಕಾರ್ಯಕ್ರಮಗಳು ಯಶಸ್ವಿ

ದಾನಧರ್ಮ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳಿಗೆ ಸದಾ ಆದ್ಯತೆ ನೀಡುತ್ತಿರುವ ಜೈಂಟ್ಸ್...

ಹೆರಿಗೆಯ ನಂತರ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ! ಬಾಲಕನ ವಿರುದ್ಧ ಪೋಕ್ಸೋ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಕೇರಳ ಮೂಲದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ...

ಶೌಚಕ್ಕೆ ಬಾವಿ ನೀರು ಹೊರುವ ವಿದ್ಯಾರ್ಥಿಗಳು: ತಾತ್ಕಾಲಿಕವಷ್ಟೇ ಎಂದು ನುಣುಚಿದ ಆಡಳಿತ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ...

ವಿಜಯಪುರ | ನೈಜ ಮತದಾರರ ಹಕ್ಕು ಕಸಿದುಕೊಳ್ಳದಂತೆ ಕ್ರಮಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ Claims &...