ಮುಂಡಗೋಡ | ಹುಬ್ಬಳ್ಳಿ ‘ಮರ್ಯಾದ ಹತ್ಯೆ’ ಪ್ರಕರಣ; ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಡಿಎಸ್‌ಎಸ್ ಆಗ್ರಹ

Date:

ಮುಂಡಗೋಡ: ದಲಿತ ಯುವಕನನ್ನು ಪ್ರೀತಿಸಿ ಮದುವೆ ಆದಳು ಎಂಬ ಏಕೈಕ ಕಾರಣಕ್ಕೆ ಸ್ವಂತ ಮಗಳನ್ನೇ ಬಲಿಪಡೆದ ಹುಬ್ಬಳ್ಳಿಯ ಮರ್ಯಾದಾ ಹತ್ಯೆ ಪ್ರಕರಣವು ಮಾನವೀಯ ಕುಲಕ್ಕೇ ಅಂಟಿದ ಕಪ್ಪುಚುಕ್ಕೆಯಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ, ಕಾದ್ರೊಳ್ಳಿ ಬಣ) ತೀವ್ರವಾಗಿ ಖಂಡಿಸಿದೆ.

- Advertisement -
1000395376 1
ಬಸವರಾಜ ಸಂಗಮೇಶ್ವರ ಜಿಲ್ಲಾಧ್ಯಕ್ಷರು

ಈ ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿದ ಸಮಿತಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಬಸವರಾಜ ಸಂಗಮೇಶ್ವರ ಅವರು, “ಅಂತರ್ಜಾತಿ ವಿವಾಹವಾದ ಗರ್ಭಿಣಿ ಮಗಳನ್ನು ಹತ್ಯೆ ಮಾಡಿದ ತಂದೆಯ ಕೃತ್ಯ ಅಕ್ಷಮ್ಯ. ಜಾತಿ ವ್ಯವಸ್ಥೆಯ ಈ ವಿಷಜಂತುಗಳು ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ. ಗಡಿಯಾಚೆಗಿನ ಉಗ್ರಗಾಮಿಗಳಿಗೂ ಮತ್ತು ಜಾತಿ ಹೆಸರಿನಲ್ಲಿ ರಕ್ತ ಹರಿಸುವ ಈ ‘ಸ್ಥಳೀಯ ಉಗ್ರರಿಗೂ’ ಯಾವುದೇ ವ್ಯತ್ಯಾಸವಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇಂತಹ ಮನಸ್ಥಿತಿಯವರು ದೇಶದ ಪ್ರಗತಿಗೆ ಮಾರಕವಾಗಿದ್ದಾರೆ,” ಎಂದು ಕಿಡಿಕಾರಿದರು. “ಹುಟ್ಟಿಸಿದ ತಂದೆಗೆ ಜೀವ ಕೊಡುವ ಹಕ್ಕಿದೆಯೇ ಹೊರತು ಜೀವ ತೆಗೆಯುವ ಅಧಿಕಾರವಿಲ್ಲ. ಇಂತಹ ನೀಚ ಕೃತ್ಯ ಎಸಗಿದವರಿಗೆ ಕೇವಲ ಜೈಲು ಶಿಕ್ಷೆಯಾದರೆ ಸಾಲದು, ಸರ್ಕಾರವು ವಿಶೇಷ ಆಸಕ್ತಿ ವಹಿಸಿ ಆರೋಪಿಗಳಿಗೆ ‘ಮರಣದಂಡನೆ’ ಶಿಕ್ಷೆಯಾಗುವಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ರೈತರ ಸಂಕಷ್ಟದ ನಡುವೆ ಕೋಟಿ ವೆಚ್ಚದ ಉತ್ಸವ ಬೇಕಿತ್ತೇ?; ಜಿಲ್ಲಾಡಳಿತದ ವಿರುದ್ಧ ಶಾಸಕ ಭೀಮಣ್ಣ ನಾಯ್ಕ ಆಕ್ರೋಶ

ಅಟ್ರಾಸಿಟಿ ಕಾಯ್ದೆ ಹಾಗೂ ಕಠಿಣ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿ, ತಕ್ಷಣವೇ ನ್ಯಾಯ ಒದಗಿಸಬೇಕು. ಅಷ್ಟೇ ಅಲ್ಲದೆ, ಪ್ರೀತಿಪಾತ್ರರನ್ನು ಕಳೆದುಕೊಂಡು ಕಂಗಾಲಾಗಿರುವ ಸಂತ್ರಸ್ತ ಕುಟುಂಬಕ್ಕೆ ಸರ್ಕಾರ 1 ಕೋಟಿ ರೂ.ಗಳ ಆರ್ಥಿಕ ನೆರವು ನೀಡಬೇಕು. ಒಂದು ವೇಳೆ ಈ ಪ್ರಕರಣದಲ್ಲಿ ನ್ಯಾಯ ವಿಳಂಬವಾದರೆ ಜಿಲ್ಲೆಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು,” ಎಂದು ಬಸವರಾಜ ಸಂಗಮೇಶ್ವರ ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...