ಮುಂಡಗೋಡ | ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚಳ: ಅಬಕಾರಿ ಇಲಾಖೆಯ ನಿರ್ಲಕ್ಷ್ಯಕ್ಕೆ ಬಡ ಕುಟುಂಬಗಳು ಬೀದಿಪಾಲು

Date:

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಅನೇಕ ಗ್ರಾಮಗಳಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಅಂಗಡಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಕ್ಟೋಬರ್ ತಿಂಗಳಲ್ಲಿ ತಾಲೂಕಿನ ಅಗಡಿ ಗ್ರಾಮದಲ್ಲಿರುವ ಒಂದು ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಸ್ಥಳದಲ್ಲಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದರು. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965ರ ಅಡಿಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿತ್ತು.

- Advertisement -

“ಬಂಧಿತ ವ್ಯಕ್ತಿಯು ಮದ್ಯವನ್ನು ಯಾರಿಂದ ಖರೀದಿಸಿದ್ದಾನೆ ಮತ್ತು ಎಷ್ಟು ಸಮಯದಿಂದ ಮಾರಾಟ ಮಾಡುತ್ತಿದ್ದಾನೆ ಹಾಗೂ ಇದೇ ರೀತಿ ಬೇರೆ ಬೇರೆ ಗ್ರಾಮಗಳಲ್ಲಿ ಮದ್ಯ ಮಾರಾಟ ಮಾಡುತ್ತಿರುವವರು ಯಾರ ಕಡೆಯಿಂದ ಮದ್ಯದ ಬಾಟಲಿಗಳನ್ನು ಖರೀದಿಸುತ್ತಿದ್ದಾರೆ ಎಂಬುದರ ಬಗ್ಗೆ ಮಾಹಿತಿ, ಇಲ್ಲವೇ ಗ್ರಾಮದಲ್ಲಿ ಸದ್ದಿಲ್ಲದೆ ನಕಲಿ ಮದ್ಯ ತಯಾರಿಸುವ ಗುಂಪು ತಲೆ ಎತ್ತಿದೆಯಾ ಎಂಬುದರ ಕುರಿತು ಅಬಕಾರಿ ಇಲಾಖೆ ತನಿಖೆ ನಡೆಸಿ ಬಹಿರಂಗಪಡಿಸಬೇಕು. ಅಬಕಾರಿ ನಿಯಮಗಳನ್ನು ಗಾಳಿಗೆ ತೂರಿ ಹಳ್ಳಿಗಳಲ್ಲಿ ಮದ್ಯ ಸರಬರಾಜು ಮಾಡುತ್ತಿರುವ ಮದ್ಯಂಗಡಿಗಳನ್ನು ಪತ್ತೆಹಚ್ಚಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂಬುದು ಸಾರ್ವಜನಿಕರ ಬೇಡಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಮುಂಡಗೋಡ ಪಟ್ಟಣದ ಪ್ರಮುಖ ರಸ್ತೆ ಪಕ್ಕದಲ್ಲಿರುವ ಕೆಲವೊಂದು ಹೊಟೇಲ್‌ಗಳಲ್ಲಿ ಬೆಳಿಗ್ಗೆಯಿಂದ ಮಧ್ಯರಾತ್ರಿವರೆಗೂ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದಾರೆ. ಅದೇ ರೀತಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಣ್ಣ ಕಿರಾಣಿ ಅಂಗಡಿಗಳಲ್ಲಿ, ಹೊಟೇಲ್‌ಗಳಲ್ಲಿ ಹಾಗೂ ಮನೆಗಳ ಅಕ್ಕ ಪಕ್ಕದ ಖಾಲಿ ಜಾಗಗಳಲ್ಲಿ ಮದ್ಯದ ಬಾಟಲಿಗಳನ್ನು ಶೇಖರಿಸಿ ರಹಸ್ಯವಾಗಿ ಮಾರಾಟ ಮಾಡತ್ತಿರುವುದು ಹೊಸ ವಿಷಯವೇನಲ್ಲ. ಇದರ ಬಗ್ಗೆ ಹಲವು ಬಾರಿ ಅಬಕಾರಿ ಇಲಾಖೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಸ್ಥಳೀಯರು ಹೇಳುತ್ತಾರೆ.

ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿರುವ ಪ್ರಕಾರ, “ಮುಂಡಗೋಡ ಪಟ್ಟಣ ವ್ಯಾಪ್ತಿಯ ಮದ್ಯದ ಅಂಗಡಿಗಳ ಸಿಸಿಟಿವಿ ದೃಶ್ಯಾವಳಿ ನೀಡುವಂತೆ ಅವರು ಮಾಹಿತಿ ಹಕ್ಕು ಕಾಯ್ದೆ(RTI) ಮೂಲಕ ಅರ್ಜಿ ಸಲ್ಲಿಸಿದರೂ, ಅದರ ಬಗ್ಗೆ ಇಲಾಖೆ ವತಿಯಿಂದ ಉತ್ತರ ದೊರೆತಿಲ್ಲ. ಮುಂಡಗೋಡ ತಾಲೂಕಿನಲ್ಲಿ ಯಾವುದೇ ನಿಯಮಗಳನ್ನು ಪಾಲಿಸದೆ ಮದ್ಯದಂಗಡಿಯ ಅಕ್ಕ ಪಕ್ಕದಲ್ಲಿ ಮತ್ತು ಕೌಂಟರ್ ಮುಂದೆ ಕುಡಿಯಲು ಕೊಡುತ್ತಾರೆ. ಎಲ್ಲವೂ ಗೊತ್ತಿದ್ದರೂ, ದೂರು ನೀಡಿದರೂ ಅಬಕಾರಿ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳದೆ ಇರುವುದನ್ನು ನೋಡಿದರೆ ಇಲಾಖೆಯ ಕಾರ್ಯವೈಖರಿ ಮೇಲೆ ಅನುಮಾನ ವ್ಯಕ್ತವಾಗುತ್ತಿದೆ” ಎಂದು ಆರೋಪಿಸಿದರು.

“ನಂದಿಕಟ್ಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಣ್ಣ ಅಂಗಡಿಗಳಲ್ಲಿ ಮತ್ತು ಹೊಟೇಲ್‌ಗಳಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ನಡೆಯುತ್ತಿದೆ. ಈ ಒಂದೇ ಗ್ರಾಮದ ಒಂದು ದಿನದ ಆದಾಯ 1 ಲಕ್ಷ ರೂಪಾಯಿಗೂ ಅಧಿಕವಾಗಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಇದರ ಪರಿಣಾಮವಾಗಿ 14-15 ವರ್ಷದ ವಯಸ್ಸಿನ ಬಾಲಕರು ಮದ್ಯಪಾನ ಮಾಡಿ ದಾರಿ ತಪ್ಪುತ್ತಿದ್ದಾರೆ. ಕಣ್ಣ ಮುಂದೆ ಮಕ್ಕಳು ಹಾಳಾಗುತ್ತಿರುವುದನ್ನು ನೋಡಿ ತಂದೆ ತಾಯಿಗಳು ನಿತ್ಯವೂ ಕಣ್ಣಿರು ಹಾಕುವಂಥ ದುಃಸ್ಥಿತಿ ನಿರ್ಮಾಣವಾಗಿದೆ. ರಾತ್ರಿ ವೇಳೆ ಕುಡಿದು ಬರುವ ಗಂಡಸರು ಮನೆಗಳಲ್ಲಿ ಜಗಳವಾಡುವುದರಿಂದ ಅನೇಕ ಕುಟುಂಬಗಳು ನೆಮ್ಮದಿ ಕಳೆದುಕೊಂಡಿವೆ” ಎಂದು ಕಳವಳ ವ್ಯಕ್ತಪಡಿಸಿದರು.

ಈ ಸಮಸ್ಯೆಯನ್ನು ಪರಿಹರಿಸಿ ಅಕ್ರಮವಾಗಿ ತಲೆ ಎತ್ತಿರುವ ಮದ್ಯದಂಗಡಿಗಳನ್ನು ಮುಚ್ಚಿ ಅವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಗ್ರಾಮದ ಮಹಿಳೆಯರು ಮತ್ತು ಯುವಕರು ಎಚ್ಚರಿಸಿದ್ದಾರೆ. ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಅಬಕಾರಿ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾರವಾರ: 24 ಗಂಟೆಯೊಳಗೆ ಕಳ್ಳತನ ಪ್ರಕರಣ ಭೇದಿಸಿದ ಶಹರ ಠಾಣೆ ಪೊಲೀಸರು

ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು ಹೆಚ್ಚಳವಾಗಿರುವುದರಿಂದ ರಾಜ್ಯಾದ್ಯಂತ ಎಲ್ಲ ಹಳ್ಳಿಗಳ ಹಿರಿಯರು ಸೇರಿದಂತೆ ಯುವಜನರೂ ಕುಡಿತದ ಸೆಲೆಯಲ್ಲು ಮುಳುಗಿದ್ದಾರೆ. ಅಬಕಾರಿ ಇಲಾಖೆಯ ನಿರ್ಲಕ್ಷ್ಯದಿಂದ ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಸೌಹಾರ್ದಕ್ಕೆ ಧಕ್ಕೆ ಉಂಟಾಗುತ್ತಿದೆ. ಈ ಸಮಸ್ಯೆಯನ್ನು ಬೇರುಸಹಿತ ಕಿತ್ತೊಗೆಯಲು ಅಬಕಾರಿ ಇಲಾಖೆ ತಕ್ಷಣೀಯ ಕಾರ್ಯಾಚರಣೆಗಳನ್ನು ಆರಂಭಿಸಬೇಕು, ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.

ಸರ್ಕಾರವು ಅಬಕಾರಿ ಕಾಯ್ದೆಯಲ್ಲಿ ತಿದ್ದುಪಡಿಗಳನ್ನು ತರಲು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಅಭಿಯಾನಗಳನ್ನು ನಡೆಸಲು ಮುಂದಾಗಬೇಕು. ಸಾರ್ವಜನಿಕರ ಆಕ್ರೋಶವು ಒಂದು ಸಂಕೇತವಾಗಿದ್ದು, ಇದನ್ನು ಕಡೆಗಣಿಸಿದರೆ ಸಾಮಾಜಿಕ ಅಸ್ಥಿರತೆ ಹೆಚ್ಚಾಗುವ ಸಾಧ್ಯತೆಯಿದೆ. ತ್ವರಿತ ಕ್ರಮಗಳ ಮೂಲಕ ಮುಂಡಗೋಡದಂತಹ ಬಹುತೇಕ ಹಳ್ಳಿ ಮತ್ತು ಪಟ್ಟಣಗಳನ್ನು ಶಾಂತತೆ ಹಾಗೂ ಸುರಕ್ಷಿತ ಸ್ಥಳವನ್ನಾಗಿ ಮಾಡುವ ಸಾಧ್ಯತೆಯಿದೆ.

987638ca8c89079659d0147ec8165bb4e02be67aff4a7af8f502ae66e86a5a1e?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...