ಮುಂಡಗೋಡ | ಹಕ್ಕುಪತ್ರ ಪಡೆದ ರೈತರಿಂದ ತೋಟಗಾರಿಕೆ ಜಂಟಿ ನಿರ್ದೇಶಕ ಬಿ.ಪಿ. ಸತೀಶ್ ಅವರಿಗೆ ಸನ್ಮಾನ

Date:

ಮುಂಡಗೋಡ: ಸರ್ಕಾರದ ಯೋಜನೆಗಳನ್ನು ಪ್ರಾಮಾಣಿಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಸೇವೆಯನ್ನು ಗುರುತಿಸಿ, ಮುಂಡಗೋಡಿನ ಐಬಿ (ಪ್ರವಾಸಿ ಮಂದಿರ)ಯಲ್ಲಿ ಪರಿಶಿಷ್ಟ ಪಂಗಡದ ಪಟ್ಟಾ ಭೂಮಿ ಹೊಂದಿರುವ ರೈತರು ಆತ್ಮೀಯವಾಗಿ ಸನ್ಮಾನಿಸಿದರು.

- Advertisement -

ಧರ್ತಿ ಆಬಾ ಯೋಜನೆಯ ಅಡಿಯಲ್ಲಿ ಪಟ್ಟಾ ಭೂಮಿಯನ್ನು ಹೊಂದಿರುವ ಪರಿಶಿಷ್ಟ ಪಂಗಡದ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ಮೊದಲ ಬಾರಿಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವಲ್ಲಿ ತೋಟಗಾರಿಕೆ ಜಂಟಿ ನಿರ್ದೇಶಕರಾದ (ಜಿಲ್ಲಾ ಪಂಚಾಯತ್) ಶ್ರೀ ಬಿ.ಪಿ. ಸತೀಶ್ ಅವರು ವಿಶೇಷ ಆಸಕ್ತಿ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇಲಾಖೆಯ ಯೋಜನೆಗಳು ಕಟ್ಟಕಡೆಯ ರೈತನಿಗೂ ದೊರೆಯುವಂತಾಗಲು ಅವರು ಮಾಡಿದ ಪ್ರಾಮಾಣಿಕ ಪ್ರಯತ್ನವನ್ನು ಶ್ಲಾಘಿಸಿ ಈ ಗೌರವ ಸಮರ್ಪಣೆ ಮಾಡಲಾಗಿದೆ ಎಂದು ಮುಂಡಗೋಡ ವಾಲ್ಮೀಕಿ ಸಮುದಾಯದ ಅಧ್ಯಕ್ಷರಾದ ಶ್ರೀ ಸುರೇಶ್ ಕಲ್ಲೋಳಿ ಅವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ಆಯುರ್ವೇದ ವೈದ್ಯ ಕೊಲೆ ಪ್ರಕರಣ: 24 ಗಂಟೆಯೊಳಗೆ ಆರೋಪಿಯ ಬಂಧನ, 15 ಲಕ್ಷದ ಚಿನ್ನಾಭರಣ ವಶ

ಕಾರ್ಯಕ್ರಮದಲ್ಲಿ ಮುಂಡಗೋಡಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಶ್ರೀ ಕೃಷ್ಣ ಕುಳ್ಳೂರ, ಶಿರಸಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಶ್ರೀ ಪ್ರಸನ್ನ ಹೆಗಡೆ ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ರಮೇಶ್ ಜಮಖಂಡಿ ಅವರು ಭಾಗವಹಿಸಿದ್ದರು.

ತಾಲೂಕಿನ ವಿವಿಧ ಕಡೆಯಿಂದ ಆಗಮಿಸಿದ್ದ ಪರಿಶಿಷ್ಟ ಪಂಗಡದ ನೂರಾರು ರೈತ ಮುಖಂಡರು ಮತ್ತು ಫಲಾನುಭವಿಗಳು ಈ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...