ಮುಂಡಗೋಡ | NMD ಜಮೀರ್ ಹತ್ಯೆ ಪ್ರಕರಣ: ಪಿಸ್ತೂಲ್ ಪೂರೈಕೆಯಲ್ಲಿ ಸಹಕಾರ – 6ನೇ ಆರೋಪಿ ದಿಲ್‌ರಾಜ್ ದೆಹಲಿಯಲ್ಲಿ ಬಂಧನ

Date:

ಇಡೀ ಉತ್ತರ ಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಮುಂಡಗೋಡನ NMD ಜಮೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

ಹತ್ಯೆಗೆ ಬಳಸಲಾಗಿದ್ದ ಕಂಟ್ರಿ ಮೇಡ್ ಪಿಸ್ತೂಲ್‌ಗಳನ್ನು ಪೂರೈಸಲು ನೆರವಾಗಿದ್ದ ಆರೋಪಿ ದಿಲ್‌ರಾಜ್‌ನನ್ನು ದೆಹಲಿಯಲ್ಲಿ ವಶಕ್ಕೆ ಪಡೆಯಲಾಗಿದ್ದು, ಈ ಮೂಲಕ ಪ್ರಕರಣದ ಒಟ್ಟು ಬಂಧಿತರ ಸಂಖ್ಯೆ ಆರಕ್ಕೇರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಘಟನೆಯ ಹಿನ್ನೆಲೆ: ಕಳೆದ ಏಪ್ರಿಲ್ 24ರ ಶುಕ್ರವಾರ ರಾತ್ರಿ ಸುಮಾರು 11 ಗಂಟೆಯ ಸುಮಾರಿಗೆ ಮುಂಡಗೋಡಿನ ಬಸ್ ನಿಲ್ದಾಣದ ಎದುರಿಗಿರುವ ಸಾವಜಿ ಹೋಟೆಲ್‌ನಲ್ಲಿ NMD ಜಮೀರ್ ಎಂಬುವವರ ಮೇಲೆ ಭೀಕರ ಹತ್ಯೆ ನಡೆದಿತ್ತು. ಊಟಕ್ಕೆ ಕುಳಿತಿದ್ದ ಜಮೀರ್ ಅವರ ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

1000699816
ಆರೋಪಿ ದಿಲ್ ರಾಜು

ಈ ವೇಳೆ ಗುಂಡಿನ ಸದ್ದೂ ಕೇಳಿಬಂದಿತ್ತು. ತನಿಖೆ ಆರಂಭಿಸಿದ್ದ ಪೊಲೀಸರು ಈಗಾಗಲೇ ಐವರು ಆರೋಪಿಗಳನ್ನು ಬಂಧಿಸಿ, ಅವರಿಂದ ಎರಡು ಪಿಸ್ತೂಲ್ ಹಾಗೂ ಆರು ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದರು.

ಈಗ ಬಂಧಿತನಾಗಿರುವ ಆರೋಪಿ ದಿಲ್‌ರಾಜ್ ಮೂಲತಃ ಉತ್ತರಾಖಂಡದವನಾಗಿದ್ದು, ಕೆಲವು ವರ್ಷಗಳ ಹಿಂದೆ ಸಿದ್ದಾಪುರದಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಶಿರಸಿ ಜೈಲಿನಲ್ಲಿದ್ದಾಗ ಈತನಿಗೆ ಹತ್ಯೆ ಸಂಚಿನ ಪ್ರಮುಖ ವ್ಯಕ್ತಿ ಮಂಜುನಾಥ ಕಾಜಗಾರ್ ಪರಿಚಯವಾಗಿದ್ದ.

ನಂತರ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾಗ ದಿಲ್‌ರಾಜ್‌ಗೆ ಜಾಮೀನು ಕೊಡಿಸಲು ಮಂಜುನಾಥ ಕಾಜಗಾರ್ ಸಹಾಯ ಮಾಡಿದ್ದ ಎನ್ನಲಾಗಿದೆ. ಈ ಸ್ನೇಹದ ಹಿನ್ನೆಲೆಯಲ್ಲಿ ಜಮೀರ್ ಹತ್ಯೆಗೆ ಮೊದಲು ದಿಲ್‌ರಾಜ್‌ಗೆ ಸುಫಾರಿ ನೀಡಲಾಗಿತ್ತು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಯಾವುದೋ ಕಾರಣಕ್ಕೆ ಜಮೀರ್ ಹತ್ಯೆ ಮಾಡಲು ದಿಲ್‌ರಾಜ್ ನಿರಾಕರಿಸಿದ್ದರೂ, ಹತ್ಯೆಗೆ ಅಗತ್ಯವಿದ್ದ ಪಿಸ್ತೂಲ್‌ಗಳನ್ನು ಎಲ್ಲಿಂದ ಪಡೆಯಬೇಕು ಎಂಬ ಮಾಹಿತಿಯನ್ನು ಆರೋಪಿಗಳಿಗೆ ನೀಡಿದ್ದ ಎನ್ನಲಾಗಿದೆ. ಈತನ ಸುಳಿವಿನ ಮೇರೆಗೆ ಆರೋಪಿಗಳು ಮುಂಬೈನಿಂದ ಎರಡು ಪಿಸ್ತೂಲ್‌ಗಳನ್ನು ತರಿಸಿಕೊಂಡಿದ್ದರು.

ತನಿಖೆಯ ವೇಳೆ ಸಿಕ್ಕ ಮಾಹಿತಿ ಆಧಾರದ ಮೇಲೆ ಪೊಲೀಸರ ತಂಡ ದೆಹಲಿಗೆ ತೆರಳಿ ಆರೋಪಿಯನ್ನು ಬಂಧಿಸಿ ಕರೆತಂದಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಜಿಲ್ಲಾದ್ಯಂತ ಈ ಕೇಸ್ ತೀವ್ರ ಕುತೂಹಲ ಕೆರಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...