ಮುಂಡಗೋಡ | ನರೇಗಾ ಕೆಲಸಕ್ಕೆ ಕೊರತೆ ಇಲ್ಲ: ಅಗತ್ಯವಿರುವವರು ಮುಂದೆ ಬರಲಿ – ಇಒ ಟಿ. ವಾಯ್. ದಾಸನಕೊಪ್ಪ

Date:

ಮುಂಡಗೋಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ನರೇಗಾ) ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿ ಅಕುಶಲ ಕೆಲಸ ನೀಡಲು ಪ್ರಸ್ತುತ ಯಾವುದೇ ತೊಂದರೆ ಇಲ್ಲ. ಕೆಲಸದ ಅಗತ್ಯವಿರುವವರು ಧಾರಾಳವಾಗಿ ಮುಂದೆ ಬರಬಹುದು ಎಂದು ಮುಂಡಗೋಡ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಟಿ.ವಾಯ್. ದಾಸನಕೊಪ್ಪ ಅವರು ತಿಳಿಸಿದ್ದಾರೆ.

- Advertisement -

ತಾಲೂಕಿನ ಕಾತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಬಸನಕಟ್ಟೆ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು, ಸ್ಥಳೀಯ ಕೂಲಿಕಾರರೊಂದಿಗೆ ಮಾತುಕತೆ ನಡೆಸಿದರು. ನಿರಂತರವಾಗಿ ಕೆಲಸ ನೀಡಬೇಕು ಎಂಬ ಕೂಲಿಕಾರರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಇಒ ಅವರು ಈ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕಾತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸ್ತುತ ಎರಡು ಕೆರೆಗಳು ಹಾಗೂ ಒಂದು ಕೃಷಿ ಕಾಲುವೆ ಹೂಳೆತ್ತುವ ಕಾಮಗಾರಿ ಸೇರಿದಂತೆ ಸುಮಾರು ಹದಿನೈದು ಲಕ್ಷ ರೂಪಾಯಿಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ಮುಂದಿನ ದಿನಗಳಲ್ಲಿ ಜನರ ಬೇಡಿಕೆಗೆ ಅನುಗುಣವಾಗಿ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮತ್ತು ಪ್ರತಿಯೊಬ್ಬರಿಗೂ ಅವರ ಹಕ್ಕಿನ ಕೆಲಸ ನೀಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಅವರು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಖನಿಜ ಸಂಪತ್ತಿನ ಪತ್ತೆಗೆ ವೈಮಾನಿಕ ಸಮೀಕ್ಷೆ: ಕಡಿಮೆ ಎತ್ತರದಲ್ಲಿ ವಿಮಾನ ಹಾರಾಟ, ಆತಂಕ ಬೇಡ

ಇದೇ ಸಂದರ್ಭದಲ್ಲಿ, ಏರುತ್ತಿರುವ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡಬೇಕೆಂದು ಕೂಲಿಕಾರರು ಮನವಿ ಮಾಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಇಒ ಅವರು, “ಸದ್ಯಕ್ಕೆ ಸರ್ಕಾರದಿಂದ ಕೆಲಸದ ಪ್ರಮಾಣ ಕಡಿತಗೊಳಿಸುವ ಬಗ್ಗೆ ಯಾವುದೇ ಅಧಿಕೃತ ಆದೇಶ ಬಂದಿಲ್ಲ. ಆದರೂ, ಕೂಲಿಕಾರರ ಈ ಬೇಡಿಕೆಯನ್ನು ಮತ್ತೊಮ್ಮೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು,” ಎಂದು ಹೇಳಿದರು.

ಪರಿಶೀಲನೆಯ ವೇಳೆ ಎನ್.ಎಮ್.ಎಮ್.ಎಸ್. (NMMS) ಮೂಲಕ ಹಾಜರಾತಿ ದಾಖಲಿಸುವುದು ಹಾಗೂ ಅಳತೆಗೆ ತಕ್ಕಂತೆ ಕೆಲಸ ನಿರ್ವಹಿಸುವ ಕುರಿತು ಪರಿಶೀಲಿಸಿ, ಸಿಬ್ಬಂದಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಕಡಪಟ್ಟಿ, ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ, ಬಿಎಫ್‌ಟಿ ಗಣಪತಿ ಪವಾರ, ಕಾಯಕ ಬಂಧುಗಳು ಹಾಗೂ ನೂರಾರು ಕೂಲಿಕಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...