ಮುಂಡಗೋಡ | ಕಿಲ್ಲೆ ಓಣಿ ಕೆರೆಯಲ್ಲಿ ಕಸದ ರಾಶಿ: ಸ್ವಚ್ಛತೆಗೆ ಸಾರ್ವಜನಿಕರ ಆಗ್ರಹ

Date:

ಮುಂಡಗೋಡ: ಪಟ್ಟಣದ ಕಿಲ್ಲೆ ಓಣಿ ವ್ಯಾಪ್ತಿಯಲ್ಲಿರುವ ಪುರಾತನ ಕೆರೆಯೊಂದು ಕಸ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಕೊಳಚೆಯಿಂದ ತುಂಬಿಕೊಂಡಿದ್ದು, ಸಾರ್ವಜನಿಕರ ಆರೋಗ್ಯ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುವ ಆತಂಕ ಎದುರಾಗಿದೆ.

- Advertisement -

ಪುರಾತನ ಇತಿಹಾಸ ಹೊಂದಿರುವ ಈ ಕೆರೆಯ ನೀರನ್ನು ಈ ಹಿಂದೆ ಕಿಲ್ಲೆ ಓಣಿಯಲ್ಲಿರುವ ಆಂಜನೇಯ ದೇವಸ್ಥಾನದ ಪೂಜಾ ಕಾರ್ಯಗಳಿಗೆ ಪ್ರತಿನಿತ್ಯ ಬಳಸಲಾಗುತ್ತಿತ್ತು ಎಂಬ ಪ್ರತೀತಿ ಇದೆ. ಆದರೆ, ಸದ್ಯ ಕೆರೆಗೆ ನಿರಂತರವಾಗಿ ಕಸ ಹಾಗೂ ತ್ಯಾಜ್ಯ ಸುರಿಯುತ್ತಿರುವ ಪರಿಣಾಮ ಕೆರೆ ಕೊಳಚೆಯಿಂದ ತುಂಬಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕೆರೆಯಲ್ಲಿ ಅಪಾರ ಪ್ರಮಾಣದ ಪ್ಲಾಸ್ಟಿಕ್ ತ್ಯಾಜ್ಯ, ಕಸ ಹಾಗೂ ಇತರ ತ್ಯಾಜ್ಯಗಳು ಸಂಗ್ರಹವಾಗಿರುವುದರಿಂದ ದುರ್ವಾಸನೆ ಬೀರುತ್ತಿದ್ದು, ಸೊಳ್ಳೆ ಹಾಗೂ ಇತರೆ ಕೀಟಗಳ ಉತ್ಪತ್ತಿಗೂ ಕಾರಣವಾಗುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಸಾರ್ವಜನಿಕರಲ್ಲಿ ಮೂಡಿದೆ. ಮಳೆಗಾಲದಲ್ಲಿ ಕೆರೆಯಲ್ಲಿರುವ ಕಸ ಹಾಗೂ ತ್ಯಾಜ್ಯಗಳು ಚರಂಡಿಗೆ ಸೇರಿ ನೀರು ಸರಾಗವಾಗಿ ಹರಿಯಲು ಅಡ್ಡಿಯಾಗುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಕಾರವಾರ | ಕೈಗಾ ರಸ್ತೆಯಲ್ಲಿ ಭಾರಿ ವಾಹನಗಳಿಗೆ ಕಡಿವಾಣ; ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ

ಇದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗುವ ಆತಂಕ ಸ್ಥಳೀಯ ನಿವಾಸಿಗಳಲ್ಲಿದೆ. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿಯ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಕೆರೆಯಲ್ಲಿರುವ ಕಸ ಹಾಗೂ ತ್ಯಾಜ್ಯವನ್ನು ತೆರವುಗೊಳಿಸುವುದರ ಜೊತೆಗೆ ಚರಂಡಿಯನ್ನು ಸ್ವಚ್ಛಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕೆರೆಯನ್ನು ನಿಯಮಿತವಾಗಿ ಸ್ವಚ್ಛಗೊಳಿಸುವ ವ್ಯವಸ್ಥೆ ಮಾಡಬೇಕು, ಕಸ ಎಸೆಯದಂತೆ ಸೂಚನಾ ಫಲಕಗಳನ್ನು ಅಳವಡಿಸಬೇಕು ಹಾಗೂ ಸಾರ್ವಜನಿಕ ಸ್ಥಳದಲ್ಲಿ ಕಸ ಸುರಿಯುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಕೆರೆಯನ್ನು ಸ್ವಚ್ಛಗೊಳಿಸಿ, ಮುಂದಿನ ದಿನಗಳಲ್ಲಿ ಕೆರೆಗೆ ಕಸ ಸುರಿಯದಂತೆ ಶಾಶ್ವತ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...