ಮುಂಡಗೋಡ | ಪಿಎಸ್ಐ ಯಲ್ಲಾಲಿಂಗ ಕುನ್ನೂರು ಅವರಿಗೆ ಪೊಲೀಸ್ ಸಿಬ್ಬಂದಿಗಳಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಕೆ

Date:

ಮುಂಡಗೋಡ: ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದ ದಕ್ಷ ಪಿ.ಎಸ್.ಐ ಯಲ್ಲಾಲಿಂಗ ಕುನ್ನೂರು ಅವರ ಸ್ಮರಣಾರ್ಥವಾಗಿ ಇಂದು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಅತ್ಯಂತ ಭಾವುಕ ವಾತಾವರಣದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

- Advertisement -

ಠಾಣೆಯ ಎಲ್ಲಾ ಸಿಬ್ಬಂದಿ ಹಾಗೂ ಗಣ್ಯರು ಮೇಣದಬತ್ತಿ ಹಚ್ಚಿ, ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅಗಲಿದ ಚೇತನಕ್ಕೆ ನಮನ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿ.ಪಿ.ಐ ರಂಗನಾಥ ನೀಲಮ್ಮನವರ ಅವರು,“ಯಲ್ಲಾಲಿಂಗ ಅವರು ಅತ್ಯುತ್ತಮ ಆಡಳಿತಾಧಿಕಾರಿಯಾಗಿದ್ದರು. ಅವರ ನಿಧನದ ಸುದ್ದಿ ನಮಗೆ ತೀವ್ರ ದುಃಖ ತಂದಿದೆ. ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ಅವರು ಉತ್ತಮ ಬಾಂಧವ್ಯ ಹೊಂದಿದ್ದರು. ದೇವರು ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ” ಎಂದು ಕಂಬನಿ ಮಿಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಂಜುನಾಥ ಪಾಟೀಲ್ ಅವರು,“ಯಲ್ಲಾಲಿಂಗ ಅವರು ಭ್ರಷ್ಟಾಚಾರ ರಹಿತ, ಕಳಂಕರಹಿತ ಅಧಿಕಾರಿಯಾಗಿದ್ದರು. ಬಡವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಗುಣ ಅವರದಾಗಿತ್ತು.

ಇಂತಹ ದಕ್ಷ ಅಧಿಕಾರಿಯ ಅಗಲಿಕೆ ತಾಲ್ಲೂಕಿಗೆ ಹಾಗೂ ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟ. ಭಗವಂತ ಕೊಟ್ಟ ಈ ದೇಹವನ್ನು ನಾವು ಸಾಧ್ಯವಾದಷ್ಟು ಕಾಪಾಡಿಕೊಂಡು ಸಾಗಬೇಕು” ಎಂದು ಹೇಳಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜಾತ್ರಾ ಮಹೋತ್ಸವಗಳಲ್ಲೂ ಜೂಜಿನ ಕರಿನೆರಳು; ಬೀಳಬೇಕಿದೆ ಬ್ರೇಕ್

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಮೌನ ಆಚರಿಸುವ ಮೂಲಕ ತಮ್ಮ ನೆಚ್ಚಿನ ಅಧಿಕಾರಿಗೆ ಅಂತಿಮ ನಮನ ಸಲ್ಲಿಸಿದರು.

ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ರವಿ ಹಾವೇರಿ, ಮಂಜುನಾಥ ಹೆಚ್.ಪಿ., ಶಂಕರ ಲಮಾಣಿ, ವಿಶ್ವನಾಥ ನಾಯರ್, ತನ್ವೀರ್ ಅಹ್ಮದ್ ಮಿರ್ಜಾನಕರ್ ಸೇರಿದಂತೆ ಹಲವರು ಭಾಗವಹಿಸಿ ಯಲ್ಲಾಲಿಂಗ ಕುನ್ನೂರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ತಾಲ್ಲೂಕಿನ ಜನತೆ ಕೂಡ ಈ ದಕ್ಷ ಅಧಿಕಾರಿಯ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...