ಮುಂಡಗೋಡ | ಇಂದೂರ ಗ್ರಾಮದಲ್ಲಿ ಇಸ್ಪೀಟ್ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ; ಏಳು ಜನರ ಮೇಲೆ ಪ್ರಕರಣ ದಾಖಲು

Date:

ಮುಂಡಗೋಡ: ತಾಲೂಕಿನ ಇಂದೂರ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಹಚ್ಚಿ ಜುಗಾರಿ ಆಡುತ್ತಿದ್ದ ಅಡ್ಡೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ನಡೆಸಿದ್ದಾರೆ.

- Advertisement -

ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜುಗಾರಾಟ ಆಡುತ್ತಿದ್ದ ಆರೋಪದ ಮೇಲೆ ಒಟ್ಟು ಏಳು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ದಿನಾಂಕ 30-12-2025ರಂದು ರಾತ್ರಿ 11:00 ಗಂಟೆಯ ಸುಮಾರಿಗೆ ಈ ದಾಳಿ ನಡೆದಿದೆ. ಇಂದೂರ ಗ್ರಾಮದ ಮಂಜುನಾಥ ಕರೆಪ್ಪ ಹರಿಜನ ಮತ್ತು ಜ್ಞಾನದೇವ ದೊಂಡಿಬಾ ಹೆಬ್ಬಳ್ಳಿ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಸ್ಥಳದಲ್ಲೇ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಆದರೆ ದಾಳಿಯ ಸಂದರ್ಭದಲ್ಲಿ ಮೈಲಾರಿ ತಿಪ್ಪಣ್ಣ ಹರಿಜನ, ಸಂತೋಷ ನಿಂಗಪ್ಪ ಹರಿಜನ, ಮಂಜು ಗಾಳಪ್ಪ ಹರಿಜನ, ಮಂಜು ಪುಟ್ಟಪ್ಪ ಹರಿಜನ ಹಾಗೂ ಫಕೀರೇಶ ಮಹಾದೇವಪ್ಪ ಹರಿಜನ ಎಂಬುವವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

ಪೊಲೀಸರು ದಾಳಿಯ ವೇಳೆ ಜುಗಾರಾಟಕ್ಕೆ ಬಳಸುತ್ತಿದ್ದ 52 ಇಸ್ಪೀಟ್ ಎಲೆಗಳು ಹಾಗೂ ಪಣವಾಗಿ ಇಟ್ಟಿದ್ದ 1,500 ರೂಪಾಯಿ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯು ಮುಂಡಗೋಡ ಪೊಲೀಸ್ ವೃತ್ತ ನಿರೀಕ್ಷಕರಾದ (CPI) ರಂಗನಾಥ ನೀಲಮ್ಮನವರ ಅವರ ಮಾರ್ಗದರ್ಶನದಲ್ಲಿ ನಡೆದಿದೆ.

ಸದರಿ ಪ್ರಕರಣವು ಅಸಂಜ್ಞೇಯ ಅಪರಾಧವಾಗಿರುವುದರಿಂದ (Non-Cognizable), ಆರಂಭದಲ್ಲಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತದನಂತರ ಮಾನ್ಯ ನ್ಯಾಯಾಲಯದ ಅನುಮತಿ ಪಡೆದ ಪೊಲೀಸರು, ಕಲಂ-87 ಕೆ.ಪಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಭಿಮಾನಿಗಳ ಆಸೆಯಂತೆ ದಸರೆಗೆ ಮರಳಿದ ಅಭಿಮನ್ಯು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಕೊಡಗಿನ ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು...

ದೆಹಲಿಯಲ್ಲಿ ಪತ್ರಕರ್ತೆಯರ ಮೇಲೆ ಪೊಲೀಸ್ ದೌರ್ಜನ್ಯ: ಕ್ರಮಕ್ಕೆ ಶಿವಮೊಗ್ಗ ಕಾನಿಪಸ ಆಗ್ರಹ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜಿನಾಮೆಗೆ ಆಗ್ರಹಿಸಿ ನಡೆಯುತ್ತಿರುವ...

ತೀರ್ಥಹಳ್ಳಿ | ಮತಪಟ್ಟಿಯಿಂದ ಮುಸ್ಲಿಮರ ಹೆಸರು ಅಳಿಸಲು ಬಿಜೆಪಿ ಸಂಚು? ತಹಶೀಲ್ದಾರ್‌ಗೆ ಪತ್ರ ಬರೆದಿದ್ದ ಬಿಜೆಪಿ ಮುಖಂಡ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ರೋಗಿಗಳನ್ನು ಗ್ರಾಹಕರಂತೆ ಕಾಣದೆ ಮನೆಯ ಸದಸ್ಯರಂತೆ ಉಪಚರಿಸುವ ಚಿತ್ರಕೂಟ: ಡಾ. ಪ್ರದೀಪ್

ರೋಗಿಗಳನ್ನು ಗ್ರಾಹಕರಂತೆ ಕಾಣದೆ ಮನೆಯ ಸದಸ್ಯರಂತೆ ಅಕ್ಕರೆಯಿಂದ ಉಪಚರಿಸುವ ಅಪರೂಪದ ವಾತಾವರಣ...