ಮುಂಡಗೋಡ | ಅನುದಾನಿತ ಪ್ರೌಢಶಾಲೆಗಳ ಹಿತಾಸಕ್ತಿ ಕಾಪಾಡಲು ಕೆಪಿಎಸ್‌ ಪರಿವರ್ತನೆ ಕೈಬಿಡುವಂತೆ ಮನವಿ

Date:

ಮುಂಡಗೋಡ: ಅನುದಾನಿತ ಪ್ರೌಢಶಾಲೆಗಳ ಅಸ್ತಿತ್ವ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿ ಹಾಗೂ ಶಿಕ್ಷಕ-ಸಿಬ್ಬಂದಿಯ ಉದ್ಯೋಗ ಭದ್ರತೆಯನ್ನು ಕಾಪಾಡುವ ಉದ್ದೇಶದಿಂದ, ಅನುದಾನಿತ ಪ್ರೌಢಶಾಲೆಗಳ ಸಮೀಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್)ಗಳಾಗಿ ಪರಿವರ್ತಿಸುವ ಪ್ರಸ್ತಾವನೆಯನ್ನು ಕೈಬಿಡುವಂತೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ (ರಿ.), ಹುಬ್ಬಳ್ಳಿ, ಮುಂಡಗೋಡ ತಾಲೂಕು ಘಟಕದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಮನವಿಯಲ್ಲಿ, ಅನುದಾನಿತ ಪ್ರೌಢಶಾಲೆಗಳ ಸಮೀಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ಗಳಾಗಿ ಮೇಲ್ದರ್ಜೆಗೇರಿಸಿದರೆ ಹಲವು ದಶಕಗಳಿಂದ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಗಣನೀಯವಾಗಿ ಕುಸಿಯುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಈ ಸುದ್ದಿ ಓದಿದ್ದೀರಾ? ಭಟ್ಕಳ | ದೋಣಿ ಮುಳುಗಿ ನಾಪತ್ತೆಯಾಗಿದ್ದ ಮೀನುಗಾರನ ಶವ ಮರುದಿನ ತೀರದಲ್ಲಿ ಪತ್ತೆ

ಇದರಿಂದ ಶಿಕ್ಷಕರು ಹಾಗೂ ಸಿಬ್ಬಂದಿಯ ಸೇವಾ ಭದ್ರತೆಗೆ ಧಕ್ಕೆಯಾಗುವುದಲ್ಲದೆ, ಅನುದಾನಿತ ಶಿಕ್ಷಣ ಸಂಸ್ಥೆಗಳ ಅಸ್ತಿತ್ವಕ್ಕೂ ಗಂಭೀರ ಸಂಕಷ್ಟ ಎದುರಾಗಲಿದೆ ಎಂದು ತಿಳಿಸಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರವು ಅನುದಾನಿತ ಶಾಲೆಗಳ ಹಿತಾಸಕ್ತಿಯನ್ನು ಪರಿಗಣಿಸಿ, ಕೆಪಿಎಸ್ ಪರಿವರ್ತನೆ ಪ್ರಸ್ತಾವನೆಯನ್ನು ಮರುಪರಿಶೀಲಿಸಿ ಕೈಬಿಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮನವಿ ಸ್ವೀಕರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಸುಮಾ ಜಿ. ಅವರು, ಮನವಿಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಅಲ್ಲದೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಶೀಘ್ರವೇ ರವಾನಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ (ರಿ.), ಮುಂಡಗೋಡ ತಾಲೂಕು ಘಟಕದ ಅಧ್ಯಕ್ಷ ಎಸ್.ಡಿ. ಮುಡೆಣ್ಣವರ, ವಿಜಯಕುಮಾರ ಬಿ.ಎ., ಗಿರೀಶ ಕುಲಕರ್ಣಿ, ವಿ.ವಿ. ಮಲ್ಲನಗೌಡ್ರ, ಎಸ್.ಎನ್. ಸವದತ್ತಿ, ಶರಣಪ್ಪ ಜಡೆದಲಿ ಸೇರಿದಂತೆ ತಾಲೂಕಿನ ವಿವಿಧ ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...