ಮುಂಡಗೋಡ | ರಸ್ತೆ ಅಪಘಾತ: ಗ್ರಾಮ ಲೆಕ್ಕಾಧಿಕಾರಿ ಗೋಪಾಲ್ ಎಂ. ಸ್ಥಳದಲ್ಲೇ ಮೃತ್ಯು

Date:

ಮುಂಡಗೋಡ: ದರ್ಶನ್ ಅಭಿನಯದ ‘ಡೆವಿಲ್’ ಚಲನಚಿತ್ರವನ್ನು ವೀಕ್ಷಿಸಿ ಹುಬ್ಬಳ್ಳಿಯಿಂದ ಮುಂಡಗೋಡಿಗೆ ಹಿಂತಿರುಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಂಡಗೋಡ ತಾಲ್ಲೂಕಿನ ಗ್ರಾಮ ಲೆಕ್ಕಾಧಿಕಾರಿ ಗೋಪಾಲ್ ಎಂ. (38) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

ಈ ದುರ್ಘಟನೆಯು ತಡರಾತ್ರಿ, ತಡಸ ಸಮೀಪದ ತಾಯವ್ವ ದೇವಸ್ಥಾನದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಗೋಪಾಲ್ ಎಂ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಮುಂಡಗೋಡ ತಹಶೀಲ್ದಾರ್ ಕಚೇರಿಯ ಇಬ್ಬರು ಸಿಬ್ಬಂದಿಗಳು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಒಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಸಿಬ್ಬಂದಿಗಳೊಂದಿಗೆ ಗೋಪಾಲ್ ಎಂ. ಅವರು ರಾತ್ರಿ ಹುಬ್ಬಳ್ಳಿಯಿಂದ ಮುಂಡಗೋಡಿಗೆ ಹಿಂತಿರುಗುತ್ತಿದ್ದರು. ತಾಯವ್ವ ದೇವಸ್ಥಾನದ ಬಳಿ ಅವರ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಪಕ್ಕದ ಕಂದಕಕ್ಕೆ (ಹಳ್ಳಕ್ಕೆ) ಇಳಿದು ಪಲ್ಟಿಯಾಗಿದೆ. ಅಪಘಾತದ ತೀವ್ರತೆಯಿಂದಾಗಿ ಗೋಪಾಲ್ ಎಂ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತಡರಾತ್ರಿಯಾದರೂ ಗೋಪಾಲ್ ಎಂ. ಅವರು ಮನೆಗೆ ತಲುಪದಿರುವ ಕಾರಣ ಆತಂಕಗೊಂಡ ಅವರ ಕುಟುಂಬದ ಸದಸ್ಯರು ಮತ್ತು ಸಹೋದ್ಯೋಗಿಗಳು ಅವರನ್ನು ಹುಡುಕಲು ಪ್ರಾರಂಭಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಲೋಕ ಅದಾಲತ್ ಮೂಲಕ 47,179 ಪ್ರಕರಣ ಇತ್ಯರ್ಥ; ₹ 82.62 ಕೋಟಿ ಹಣ ಸಂಗ್ರಹ

ಮೂಲತಃ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನವರಾದ ಗೋಪಾಲ್ ಎಂ. ಅವರು ಮುಂಡಗೋಡ ತಾಲ್ಲೂಕಿನಲ್ಲಿ ತಮ್ಮ ಕರ್ತವ್ಯ ನಿಷ್ಠೆ ಮತ್ತು ಉತ್ತಮ ಜನ ಸಂಪರ್ಕದಿಂದಾಗಿ ಕಂದಾಯ ಇಲಾಖೆಯ ಅತ್ಯಂತ ಜನಪ್ರಿಯ ಅಧಿಕಾರಿಗಳಲ್ಲಿ ಒಬ್ಬರಾಗಿದ್ದರು. ಈ ಮೊದಲು ಅವರು ಇಂದೂರ ಗ್ರಾಮ ಲೆಕ್ಕಾಧಿಕಾರಿ ಆಗಿ ಸೇವೆ ಸಲ್ಲಿಸಿದ್ದರು. ನಂತರ ಮುಂಡಗೋಡ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿ ಆಗಿದ್ದರು.

ಅವರ ನಿಧನ ಸುದ್ದಿ ಕೇಳಿ ಮುಂಡಗೋಡ ತಾಲ್ಲೂಕಿನಾದ್ಯಂತ ಸಾರ್ವಜನಿಕರು ಮತ್ತು ಸಹೋದ್ಯೋಗಿಗಳಲ್ಲಿ ತೀವ್ರ ಶೋಕ ಆವರಿಸಿದೆ. ಅಪಘಾತದ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...