ಮುಂಡಗೋಡ | ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೃಷ್ಣ ಕುಳೂರ ಅವರಿಗೆ ‘ತೋಟಗಾರಿಕೆ ಕೃಷಿ ರತ್ನ’ ಪ್ರಶಸ್ತಿ ಗೌರವ

Date:

ಮುಂಡಗೋಡ: ತೋಟಗಾರಿಕೆ ಕ್ಷೇತ್ರದಲ್ಲಿನ ಸುದೀರ್ಘ ಹಾಗೂ ನಿಸ್ವಾರ್ಥ ಸೇವೆಯನ್ನು ಗುರುತಿಸಿ, ಮುಂಡಗೋಡು ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಶ್ರೀ ಕೃಷ್ಣ ಟಿ. ಕುಳೂರ ಅವರಿಗೆ ಪ್ರತಿಷ್ಠಿತ “ವಿಶ್ವ ದರ್ಶನ ನ್ಯಾಷನಲ್ ಐಕಾನ್ ಅವಾರ್ಡ್-2025” ಹಾಗೂ “ತೋಟಗಾರಿಕೆ ಕೃಷಿ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

- Advertisement -

ವಿಶ್ವ ದರ್ಶನ ಕನ್ನಡ ದಿನಪತ್ರಿಕೆಯ ಆಶ್ರಯದಲ್ಲಿ ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ 6ನೇ ರಾಜ್ಯ ಭಾವೈಕ್ಯತಾ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲ ತೋಟಗಾರಿಕೆ ಇಲಾಖೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಕೃಷ್ಣ ಕುಳ್ಳೂರ ಅವರು ರೈತ ಸ್ನೇಹಿ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

1000404692

ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನವರಾದ ಇವರು, 2007ರಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಿಂದ ತಮ್ಮ ವೃತ್ತಿ ಜೀವನ ಆರಂಭಿಸಿದರು. ನಂತರ ಶಿರಸಿ ಹಾಗೂ ಮುಂಡಗೋಡು ತಾಲೂಕುಗಳಲ್ಲಿ ಸೇವೆ ಸಲ್ಲಿಸುತ್ತಾ, ರೈತರಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ ? ಮುಂಡಗೋಡ-ಹಳಿಯಾಳದ ಮದ್ಯ-ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್ ದಾಳಿ; ಪಾಳಾ ಭಾಗದ ಮಟ್ಕಾ ದಂಧೆಗೆ ಬೀಳುತ್ತಾ ಬ್ರೇಕ್?

ವಿಶೇಷವಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ವಿಸ್ತರಣೆ ಮತ್ತು ರೈತರ ಆರ್ಥಿಕ ಸಬಲೀಕರಣಕ್ಕಾಗಿ ಇವರು ಹಗಲಿರುಳು ಶ್ರಮಿಸಿದ್ದಾರೆ. ಇವರ ಈ ಸಾಧನೆಯನ್ನು ಪರಿಗಣಿಸಿ ವಿಶ್ವ ದರ್ಶನ ಪತ್ರಿಕೆಯ ಸಂಪಾದಕರಾದ ಡಾ. ಎಸ್. ಎಸ್. ಪಾಟೀಲ್ ಅವರ ನೇತೃತ್ವದ ಸಮಿತಿಯು ಈ ಗೌರವಕ್ಕೆ ಇವರನ್ನು ಆಯ್ಕೆ ಮಾಡಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ಶ್ರೀ ಕೃಷ್ಣ ಕುಳೂರ ಅವರಿಗೆ ಇಲಾಖೆಯ ಸಹೋದ್ಯೋಗಿಗಳು, ರೈತ ಬಾಂಧವರು ಹಾಗೂ ಹಿತೈಷಿಗಳು ಅಭಿನಂದನೆಗಳ ಸುರಿಮಳೆಗರೆದಿದ್ದಾರೆ. ಈ ಪ್ರಶಸ್ತಿಯು ತಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅವರು ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...