ಮುಂಡಗೋಡ | ಸಬ್ ರಿಜಿಸ್ಟ್ರಾರ್ ಆಫೀಸ್ ನಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್ ಕುರಿತು ತರಬೇತಿ ಕಾರ್ಯಾಗಾರ ಆಯೋಜನೆ

Date:

ಉತ್ತರ ಕನ್ನಡ: ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಹೊಸದಾಗಿ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಮುಂಡಗೋಡ ತಾಲೂಕಿನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

- Advertisement -

ಈ ನೂತನ ವ್ಯವಸ್ಥೆಯ ಬಗ್ಗೆ ಸಾರ್ವಜನಿಕರಲ್ಲಿ ಮತ್ತು ಅಧಿಕೃತ ಇ-ಸ್ಟ್ಯಾಂಪ್ ಮಾರಾಟ ಕೇಂದ್ರಗಳ (ACC) ಪ್ರತಿನಿಧಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1000444609

ಬೆಂಗಳೂರಿನ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರ ಆದೇಶದನ್ವಯ ಈ ತರಬೇತಿಯನ್ನು ಆಯೋಜಿಸಲಾಗಿದ್ದು, ಡಿಜಿಟಲ್ ಇ-ಸ್ಟ್ಯಾಂಪ್‌ಗಳ ಪ್ರಿಂಟ್ ತೆಗೆಯುವುದು ಮತ್ತು ಅವುಗಳನ್ನು ಯಾವೆಲ್ಲಾ ಉದ್ದೇಶಗಳಿಗೆ ಬಳಸಬಹುದು ಎಂಬುದರ ಬಗ್ಗೆ ತರಬೇತಿಯಲ್ಲಿ ಸವಿಸ್ತಾರವಾಗಿ ಮಾಹಿತಿ ನೀಡಲಾಗುವುದು.

ಈ ತರಬೇತಿ ಕಾರ್ಯಕ್ರಮವು ಮುಂಡಗೋಡಿನ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ದಿನಾಂಕ 13-01-2026 ರಂದು ಮಧ್ಯಾಹ್ನ 04:00 ರಿಂದ 05:00 ಗಂಟೆಯವರೆಗೆ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಬೇಡ್ತಿ-ವರದಾ ಯೋಜನೆಗೆ ಶಿವರಾಮ ಹೆಬ್ಬಾರ್ ವಿರೋಧ; ಸ್ವರ್ಣವಲ್ಲೀ ಶ್ರೀಗಳ ನೇತೃತ್ವದಲ್ಲಿ ಬೃಹತ್ ಸಮಾವೇಶ

ಮುಂಡಗೋಡಿನ ಇ-ಸ್ಟ್ಯಾಂಪ್ ಮಾರಾಟ ಕೇಂದ್ರದ ಪ್ರತಿನಿಧಿಗಳು, ಗ್ರಾಮ ಓನ್, ಕರ್ನಾಟಕ ಓನ್, ಬಳಕೆದಾರರು ಮತ್ತು ಸಾರ್ವಜನಿಕರು ಈ ತರಬೇತಿಯಲ್ಲಿ ಕಡ್ಡಾಯವಾಗಿ ಭಾಗವಹಿಸಿ, ಡಿಜಿಟಲ್ ತಂತ್ರಜ್ಞಾನದ ಸದುಪಯೋಗ ಪಡೆದುಕೊಳ್ಳಬೇಕೆಂದು ಉಪ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...

ಉಡುಪಿ | ಕಂಡ್ಲೂರಿನಲ್ಲಿ ಹೋಂ ಸ್ಟೇ ಎನ್‌ಒಸಿಗೆ ₹5 ಸಾವಿರ ಲಂಚ: ವಿಎ ಲೋಕಾಯುಕ್ತ ಬಲೆಗೆ

ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಲು ₹5...