ಮುಂಡಗೋಡ | ಒಂದೇ ದಿನ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ; ಹೆಸ್ಕಾಂ ಎಇಇ, ಕಂದಾಯ ನಿರೀಕ್ಷಕ ಬಂಧನ

Date:

ಮುಂಡಗೋಡ: ತಾಲ್ಲೂಕಿನಲ್ಲಿ ಒಂದೇ ದಿನ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

- Advertisement -

ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಧರ್ಮರಾಜ ಬೆಡಸಗಾಂವ್ ಅವರು ₹65 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರವಾರ ಹಾಗೂ ಧಾರವಾಡ ಲೋಕಾಯುಕ್ತ ಘಟಕಗಳ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ವಿದ್ಯುತ್ ಗುತ್ತಿಗೆದಾರ ಶಿವಯೋಗಿ ಕೂಡಲಮಠ ನೀಡಿದ ದೂರಿನ ಮೇರೆಗೆ ದಾಳಿ ನಡೆಸಲಾಗಿದ್ದು, ಬಿಸಿಎಂ ವಸತಿ ನಿಲಯದ ವಿದ್ಯುತ್ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳ ಸಂಬಂಧ ಹಣದ ಬೇಡಿಕೆ ಇಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಮುಂಗಡವಾಗಿ ₹65 ಸಾವಿರ ಸ್ವೀಕರಿಸುತ್ತಿದ್ದ ವೇಳೆ ಅವರನ್ನು ಕಚೇರಿಯಲ್ಲಿಯೇ ವಶಕ್ಕೆ ಪಡೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಅಡಿಕೆ ಬೆಳೆಗಾರರ ಬದುಕಿನೊಂದಿಗೆ ಚೆಲ್ಲಾಟ ಬೇಡ: ಶಾಸಕ ಶಿವರಾಮ ಹೆಬ್ಬಾರ್

ಇದೇ ವೇಳೆ, ಪಾಳ ಹಾಗೂ ಮುಂಡಗೋಡ ವ್ಯಾಪ್ತಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಬಿಸನಾಳ ಅವರು ಕೂಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಫಾರ್ಮ್ ಹೌಸ್ ಪರವಾನಿಗೆ ನೀಡುವ ಸಂಬಂಧ ಕೃಷಿಕ ನಾರಾಯಣ ಅರೆಜೋಗಿ ಅವರಿಂದ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದ್ದು, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಕಾರವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಹೆಸ್ಕಾಂ ಎಇಇ ವಿರುದ್ಧ ಕಳೆದ ಒಂದೂವರೆ ವರ್ಷಗಳಿಂದ ಗುತ್ತಿಗೆದಾರರ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿತ್ತು ಎಂಬ ಮಾತುಗಳು ಕೇಳಿಬರುತ್ತಿವೆ. ವಿವಿಧ ಕಾಮಗಾರಿಗಳ ಸಂಬಂಧ ಹಣದ ಬೇಡಿಕೆ ಇಡಲಾಗುತ್ತಿತ್ತು ಎಂದು ಕೆಲ ಗುತ್ತಿಗೆದಾರರು ಆರೋಪಿಸುತ್ತಿದ್ದು, ಅಧಿಕಾರಿಯ ಕಾರ್ಯವೈಖರಿ ಕುರಿತು ಸಮಗ್ರ ತನಿಖೆ ನಡೆಸಬೇಕೆಂಬ ಒತ್ತಾಯವೂ ವ್ಯಕ್ತವಾಗಿದೆ.

ಒಂದೇ ದಿನ ಎರಡು ಪ್ರಮುಖ ಇಲಾಖೆಗಳ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವುದು ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದು, ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ಎರಡೂ ಪ್ರಕರಣಗಳ ಕುರಿತು ಲೋಕಾಯುಕ್ತ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ಹೊರಬರುವ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಅಂಗನವಾಡಿ, ಶಾಲೆ, ಆಸ್ಪತ್ರೆಗಳಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು: ಸಿಇಒ ಡಾ. ದಿಲೀಷ್ ಶಶಿ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ...

ಉತ್ತರ ಕನ್ನಡ | ಸೆ.24ರಂದು ಯೆಲ್ಲೋ ಅಲರ್ಟ್‌: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...