ಮುಂಡಗೋಡ | ಆಲಳ್ಳಿಯಲ್ಲಿ ವೃದ್ಧೆ ಅನುಮಾನಾಸ್ಪದ ಸಾವು; ₹1.70 ಲಕ್ಷ ನಗದು, ಚಿನ್ನಾಭರಣ ನಾಪತ್ತೆ

Date:

ಮುಂಡಗೋಡ ತಾಲೂಕಿನ ಆಲಳ್ಳಿ ಗ್ರಾಮದಲ್ಲಿ 75 ವರ್ಷದ ಮಹಿಳೆಯೊಬ್ಬರು ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಆಲಳ್ಳಿ ಗ್ರಾಮದ ಕಮಲವ್ವ ಕೋಂ ತಿರಕಪ್ಪ ಆಡೂರ (75) ಎಂದು ಗುರುತಿಸಲಾಗಿದೆ.

- Advertisement -

ಅಕ್ಟೋಬರ್ 25ರ ರಾತ್ರಿ 8.34ರಿಂದ ಅಕ್ಟೋಬರ್ 26ರ ಬೆಳಗ್ಗೆ 6.30ರ ನಡುವಿನ ಅವಧಿಯಲ್ಲಿ ಮನೆಯಲ್ಲಿ ಮಲಗಿದ್ದ ಅವರು ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ಮೃತರ ಪುತ್ರ ರಾಘವೇಂದ್ರ ನೀಡಿದ ದೂರಿನ ಪ್ರಕಾರ, ಮನೆಯಲ್ಲಿ ಇಟ್ಟಿದ್ದ ₹1.70 ಲಕ್ಷ ನಗದು ಹಾಗೂ ಸುಮಾರು 35 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿವೆ. ಈ ಹಿನ್ನೆಲೆಯಲ್ಲಿ ತಾಯಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಅಂಕೋಲಾ | ಬಾಳೆಗುಳಿ–ಮಾಸ್ತಿಕಟ್ಟಾ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

ದೂರಿನ ಆಧಾರದ ಮೇಲೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪೊಲೀಸರಯ ಯುಡಿಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಇನ್ಸ್‌ಪೆಕ್ಟರ್ ರಮೇಶ ಹಾನಾಪುರ ಹಾಗೂ ಪಿಎಸ್‌ಐ ಮಂಜುನಾಥ ಗೌಡರ ನೇತೃತ್ವದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಬಳಿಕ ಕಾರವಾರದಿಂದ ಶ್ವಾನದಳ ಹಾಗೂ ಬೆರಳಚ್ಚು ತಜ್ಞರನ್ನು ಸ್ಥಳಕ್ಕೆ ಕರೆಸಲಾಗಿದ್ದು, ಘಟನಾ ಸ್ಥಳದಲ್ಲಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಯಿತು. ಶ್ವಾನದಳವು ವೃದ್ಧೆಯ ಮನೆಯ ಸುತ್ತಮುತ್ತ ಹಾಗೂ ಮನೆಯ ಹಿಂಭಾಗದ ಓಣಿಯಲ್ಲಿ ಶೋಧ ನಡೆಸಿ ಬಳಿಕ ಹಿಂದಿರುಗಿದೆ ಎನ್ನಲಾಗಿದೆ.

ಮಹಿಳೆಯ ಸಾವಿನ ನಿಖರ ಕಾರಣ, ನಾಪತ್ತೆಯಾಗಿರುವ ಹಣ ಮತ್ತು ಚಿನ್ನಾಭರಣಗಳ ಕುರಿತು ಹಾಗೂ ಘಟನೆಯಲ್ಲಿ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...

ಕಲಬುರಗಿ | ನಕಲಿ ಎಸ್‌ಟಿ ಪ್ರಮಾಣ ಪತ್ರಗಳಿಗೆ ಕಡಿವಾಣ, ಮೀಸಲಾತಿ ರಕ್ಷಣೆಗೆ ಆಗ್ರಹ

ನಕಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಜಾತಿ ಪ್ರಮಾಣಪತ್ರಗಳ ಹಾವಳಿಗೆ ಕಡಿವಾಣ ಹಾಕಬೇಕು...