ಮುಂಡಗೋಡ | ಟಿಬೆಟಿಯನ್ ಕ್ಯಾಂಪಿನಲ್ಲಿ ₹4.60 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Date:

ಮುಂಡಗೋಡ: ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂ.4ರಲ್ಲಿ ಮನೆಯ ಬೀಗ ಒಡೆದು ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.

- Advertisement -

ಟಿಬೆಟಿಯನ್ ಕ್ಯಾಂಪ್ ನಂ.4ರ 76(ಎ)ನೇ ಮನೆಯಲ್ಲಿ ವಾಸವಿರುವ ನವಾಂಗ್ ಟೆಂಡಪ್ (42) ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಸೆಪ್ಟೆಂಬರ್ 8ರ ಮಧ್ಯಾಹ್ನ 3 ಗಂಟೆಯಿಂದ ಸೆಪ್ಟೆಂಬರ್ 9ರ ಸಂಜೆ 5 ಗಂಟೆಯ ನಡುವಿನ ಅವಧಿಯಲ್ಲಿ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಅಡಿಕೆ ಬೆಳೆಗಾರರಿಗೆ ಎಲೆಚುಕ್ಕೆ, ಕೊಳೆರೋಗ ನಿಯಂತ್ರಣಕ್ಕೆ ಶೇ.60 ಸಹಾಯಧನ

ಮನೆಯ ಮುಂಭಾಗದ ಬಾಗಿಲಿಗೆ ಹಾಕಲಾಗಿದ್ದ ಬೀಗವನ್ನು ಯಾವುದೋ ವಸ್ತುವಿನ ಸಹಾಯದಿಂದ ತೆರೆಯಲಾಗಿದ್ದು, ಕಳ್ಳರು ಮನೆಯೊಳಗೆ ಪ್ರವೇಶಿಸಿದ್ದಾರೆ ಎನ್ನಲಾಗಿದೆ. ಬಳಿಕ ಕೋಣೆಯಲ್ಲಿದ್ದ ಟ್ರಜರಿ ತೆರದು ಅದರಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ಕೊಂಡೊಯ್ದಿದ್ದಾರೆ.

ಕಳುವಾದ ವಸ್ತುಗಳಲ್ಲಿ 15 ಗ್ರಾಂ ತೂಕದ ಬಂಗಾರದ ಸರ, 25 ಗ್ರಾಂ ತೂಕದ ಬಂಗಾರದ ಬಿಸ್ಕೆಟ್ ಚೈನ್, ಏಳು ಬಳೆಗಳು ಹಾಗೂ ಒಂದು ಬೆಳ್ಳಿಯ ದೀಪ ಸೇರಿದ್ದು, ಇವುಗಳ ಒಟ್ಟು ಮೌಲ್ಯ ಸುಮಾರು ₹4.60 ಲಕ್ಷ ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳತನದ ಕುರಿತು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಜಯಂತಿ ಆಚರಣೆ ಅರ್ಥಪೂರ್ಣ

ಜಗತ್ತು ಕಂಡ ಸರ್ವಶ್ರೇಷ್ಠ ಪುರುಷ ಶ್ರೀರಾಮ. ಶ್ರೀ ರಾಮನ ಆದರ್ಶಗಳನ್ನು ನಮಗೆ...

ಯಾದಗಿರಿ | ಅ.27ರಂದು ಕಾಂಗ್ರೆಸ್‌ನ ‘ಸಂಘಟನಾ ಸೃಜನ್-2’ ಅಭಿಯಾನ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11...

ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ...

ಯಾದಗಿರಿ | ಮೂರು ದಶಕಗಳಿಂದ ಡಾಂಬರು ಕಾಣದ ರಸ್ತೆ: ರೈತರ ಸಂಚಾರಕ್ಕೆ ಸಂಕಷ್ಟ

ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಮಾರ್ಗವಾಗಿ ಅನವಾರ, ಬೊಮ್ಮನಹಳ್ಳಿ, ಅಯ್ಯಾಳ ಕೆ.ಟಿ., ವಡಿಗೇರ,...