ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

Date:

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ ಆರೋಪದ ಮೇಲೆ ನಾಲ್ವರು ಶಾಲಾ ವಿದ್ಯಾರ್ಥಿಗಳನ್ನು ಮುಂಡಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹63,920 ಮೌಲ್ಯದ ಮೊಬೈಲ್‌ಗಳು ಹಾಗೂ ಇತರ ಎಲೆಕ್ಟ್ರಾನಿಕ್ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

ಬಂಧಿತ ನಾಲ್ವರು ವಿದ್ಯಾರ್ಥಿಗಳು ಮುಂಡಗೋಡಿನ ಕರಗಿನಕೊಪ್ಪ ಮುರಾರ್ಜಿ ವಸತಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಬೆಳಗಾವಿ ಜಿಲ್ಲೆಯ ರಾಮದುರ್ಗ ಮೂಲದವರು ಎಂದು ಮಾಹಿತಿಯಿಂದ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಮಾಹಿತಿ ಪ್ರಕಾರ, ವಿದ್ಯಾರ್ಥಿಗಳು ರಾತ್ರಿ ಸುಮಾರು 1 ಗಂಟೆಗೆ ವಸತಿ ನಿಲಯದಿಂದ ಹೊರಟು ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಮುಂಡಗೋಡ ಪಟ್ಟಣಕ್ಕೆ ಬಂದು. ಯಲ್ಲಾಪುರ ರಸ್ತೆಯಲ್ಲಿರುವ ಶ್ರೀ ಮೊಬೈಲ್ ಅಂಗಡಿಯ ಮೇಲ್ಛಾವಣಿ ಮೂಲಕ ಒಳ ಪ್ರವೇಶಿಸಿ ಮೊಬೈಲ್‌ಗಳಿಗಾಗಿ ಹುಡುಕಾಟ ನಡೆಸಿದ್ದರು. ಅಲ್ಲಿ ಮೊಬೈಲ್‌ಗಳು ಸಿಗದ ಹಿನ್ನೆಲೆಯಲ್ಲಿ ಬಳಿಕ ಶಿರಸಿ ರಸ್ತೆಯಲ್ಲಿರುವ ಶಿವು ಮೊಬೈಲ್ ಅಂಗಡಿಗೆ ತೆರಳಿದ್ದಾರೆ.

ಅಂಗಡಿಯ ಕಬ್ಬಿಣದ ಬಾಗಿಲು ಹಾಗೂ ಬೀಗವನ್ನು ಮುರಿದು ಒಳನುಗ್ಗಿದ ವಿದ್ಯಾರ್ಥಿಗಳು ರಿಪೇರಿಗಾಗಿ ಬಂದಿದ್ದ ಮೊಬೈಲ್‌ಗಳು, ಪವರ್ ಬ್ಯಾಂಕ್, ನೆಕ್‌ಬ್ಯಾಂಡ್, ಇಯರ್‌ಬಡ್ಸ್, ಸ್ಪೀಕರ್, ಮೊಬೈಲ್ ಚಾರ್ಜರ್ ಸೇರಿದಂತೆ ಹಲವು ವಸ್ತುಗಳನ್ನು ತೆಗೆದುಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ದಾಂಡೇಲಿ | ವಾಟರ್ ಆಕ್ಟಿವಿಟೀಸ್‌ಗೆ ಅಡ್ಡಿ: ರೆಸಾರ್ಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಜೀವ ಬೆದರಿಕೆ ಆರೋಪ

ಸಿಸಿ ಕ್ಯಾಮರಾ ದೃಶ್ಯ ಹಾಗೂ ಇತರ ಮಾಹಿತಿಯ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ನಾಲ್ವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ವಸತಿ ಶಾಲೆಯಲ್ಲಿ ಇಟ್ಟುಕೊಂಡಿದ್ದ ಕಳವು ವಸ್ತುಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

ಕೃತ್ಯಕ್ಕೆ ಬಳಸಿದ್ದ ಬ್ಯಾಟರಿ, ಕಟರ್, ಸುತ್ತಿಗೆ, ಕಬ್ಬಿಣ ಕತ್ತರಿಸುವ ಬ್ಲೇಡ್ ಸೇರಿದಂತೆ ವಿವಿಧ ಪರಿಕರಗಳನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯಲ್ಲಿ ಈ ವಿದ್ಯಾರ್ಥಿಗಳು ಈ ಹಿಂದೆ ಮುಂಡಗೋಡನಲ್ಲಿ ಮತ್ತೊಂದು ಮೊಬೈಲ್ ಅಂಗಡಿಯಲ್ಲೂ ಕಳ್ಳತನ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ ಇಂದು ಮೂಲಗಳು ತಿಳಿಸಿವೆ.

ಇದೇ ವೇಳೆ ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿಗಳು ಮಧ್ಯರಾತ್ರಿ ಹೊರಗೆ ಹೋಗಲು ಹೇಗೆ ಸಾಧ್ಯವಾಯಿತು ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಸತಿ ನಿಲಯದ ಭದ್ರತಾ ವ್ಯವಸ್ಥೆ ಹಾಗೂ ವಾರ್ಡನ್‌ಗಳ ಮೇಲ್ವಿಚಾರಣೆ ಸೇರಿದಂತೆ ಹಲವು ಅಂಶಗಳನ್ನು ಪರಿಶೀಲಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಹೊರಗೆ ತೆರಳಲು ಯಾರಾದರೂ ಸಹಾಯ ಮಾಡಿದ್ದಾರೆಯೇ ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...