ಬಿಜೆಪಿ ಬಿಟ್ಟು ಹೋಗಲ್ಲ, ಬೇಕಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಮುನಿರತ್ನ

Date:

  • 17 ಜನರಲ್ಲಿ ಯಾರು ಕಾಂಗ್ರೆಸ್‌ಗೆ ಹೋಗುತ್ತಾರೆ ಗೊತ್ತಿಲ್ಲ
  • ‘ನನ್ನನ್ನು ಜೈಲಿನಲ್ಲಿಟ್ಟು ನನ್ನ ಕ್ಷೇತ್ರ ಅಭಿವೃದ್ಧಿ ಮಾಡಲಿ’

17 ಜನರಲ್ಲಿ ಯಾರು ಕಾಂಗ್ರೆಸ್‌ಗೆ ಹೋಗುತ್ತಾರೆ ಗೊತ್ತಿಲ್ಲ. ನಾನಂತೂ ಬಿಜೆಪಿ ಬಿಟ್ಟು ಹೋಗುವುದಿಲ್ಲ. ಬೇಕಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಮುನಿರತ್ನ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್​ಗೆ ಹೋಗುವ ಅವಶ್ಯಕತೆ ನನಗೆ ಇಲ್ಲ. ಅಧಿಕಾರಕ್ಕಾಗಿ ನಾನು ಪಕ್ಷ ಬಿಟ್ಟು ಹೋಗಲ್ಲ. ನನ್ನ ಮುಂದಿನ ಜೀವನದ ಆಧಾರ ಬಿಜೆಪಿ ಚಿಹ್ನೆ. ಬಿಜೆಪಿ ಬಗ್ಗೆ ನಂಬಿಕೆ, ಗೌರವ ಇದೆ” ಎಂದರು.

“ಬಿಜೆಪಿಯಲ್ಲಿ ನನ್ನನ್ನು ಬಹಳ ಗೌರವಯುತವಾಗಿ ನೋಡಿಕೊಳ್ಳುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಗೌರವದಿಂದ ಮಾತಾಡಿಸುತ್ತಾರೆ. ಹೀಗಿದ್ದ ಮೇಲೆ ನಾನು ಯಾಕೆ ಬೇರೆ ಪಕ್ಷದ ಕಡೆ ಮುಖ ಮಾಡಲಿ” ಎಂದು ಪ್ರಶ್ನಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ನನ್ನ ಜೀವನದ ಗುರು ಬಿ ಕೆ ಹರಿಪ್ರಸಾದ್ ಮತ್ತು ಡಿ ಕೆ ಶಿವಕುಮಾರ್​ ನನ್ನ ರಾಜಕೀಯ ಗುರು’ ಎಂಬ ಎಸ್ ​ಟಿ ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಿ, “ಅದು ಅವರ ವೈಯಕ್ತಿಕ ಅಭಿಪ್ರಾಯ. ನಾನು ಡಿ ಕೆ ಸುರೇಶ್​ 40 ವರ್ಷದಿಂದ ಸ್ನೇಹಿತರು. ವೈಯಕ್ತಿಕವಾಗಿ ಡಿ ಕೆ ಸುರೇಶ್, ಡಿ ಕೆ ಶಿವಕುಮಾರ್​ ಹಾಗೂ ಸಿದ್ದರಾಮಯ್ಯ ಅವರ ಜತೆ ದ್ವೇಷವಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಕುಮಾರಸ್ವಾಮಿಗೆ ಕೆಲಸ ಇಲ್ಲ, ಪ್ರಚಾರಕ್ಕಾಗಿ ಆರೋಪ ಮಾಡುತ್ತಾರೆ: ಡಿ ಕೆ ಸುರೇಶ್ ಲೇವಡಿ

ರಾಜಕೀಯ ಸಂಬಂಧ ಉಳಿಸಿಕೊಂಡಿಲ್ಲ

“ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಸಚಿವರು. ಅವರು ಯಾವುದೇ ರಾಜಕೀಯ ಸಂಬಂಧ ಉಳಿಸಿಕೊಂಡಿಲ್ಲ. ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಉತ್ತರ ಕೊಡುತ್ತಾರಾ ಅಥವಾ ಬೆಂಗಳೂರಿನ ಸಚಿವರಾಗಿ ಉತ್ತರ ಕೊಡುತ್ತಾರಾ ನನಗೆ ಗೊಂದಲ ಆಗುತ್ತಿದೆ. ಮೊದಲು ಅವರು ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಎಲ್ಲರನ್ನೂ ಕರೆದು ಸಭೆ ಮಾಡಲಿ” ಎಂದು ಸಲಹೆ ನೀಡಿದರು.

ನಾನು ಜೈಲಿಗೆ ಹೋಗಲು ಸಿದ್ಧ

“ಆರ್. ಆರ್. ನಗರದಲ್ಲಿ ತನಿಖೆ ಅಂತಾದರೆ ಅದು 28 ಕ್ಷೇತ್ರಗಳಿಗೂ ಅನ್ವಯಿಸಬೇಕು. ಅಧಿಕಾರಿಗಳು ತಿರುಚಿ ಬರೆದರೆ ಆ ದಾಖಲೆಗಳು ಮೇಲೆ ದೊಡ್ಡ ತನಿಖಾ ಸಂಸ್ಥೆಗಳಿಗೆ ಹೋಗುತ್ತವೆ. ಅಧಿಕಾರಿಗಳು ಎಚ್ಚರಿಕೆಯಿಂದ ತನಿಖೆ ಮಾಡಬೇಕು. ಅವರು ಸ್ಥಳಕ್ಕೆ ಹೋಗಿ ಸಮಗ್ರ ತನಿಖೆ ಮಾಡಿದರೆ ಅವರಿಗೆ ಒಳ್ಳೆಯದು. ಇಲ್ಲದಿದ್ದರೆ ಅದೇ ಅವರಿಗೆ ಮುಳುವಾಗುತ್ತದೆ. ನನ್ನ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ ಅಂದರೆ ನಾನು ಜೈಲಿಗೆ ಹೋಗಲು ಸಿದ್ಧ. ನನಗೆ ಆರ್​.ಆರ್​.ನಗರ ಕ್ಷೇತ್ರದ ಅಭಿವೃದ್ಧಿ ಮುಖ್ಯ. ಡಿ.ಕೆ.ಶಿವಕುಮಾರ್​ ನನ್ನನ್ನು ಬೇಕಾದರೆ ಜೈಲಿಗೆ ಕಳಿಸಲಿ. ನನ್ನನ್ನು ಜೈಲಿನಲ್ಲಿ ಇಟ್ಟು ನನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿ” ಎಂದು ಅವರು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜ್ವಲ್ ಲೈಂಗಿಕ ಹಗರಣ | ಹೋರಾಟದ ನಡಿಗೆ ಹಾಸನದ ಕಡೆಗೆ; ಪ್ರತಿಭಟನಕಾರರ ಪ್ರಮುಖ ಬೇಡಿಕೆಗಳು

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮಾಡಿದ ಆರೋಪವನ್ನು ಹೊತ್ತಿರುವ, ದೇಶದಿಂದ...

ಚಂದ್ರಶೇಖ‌ರ್ ಆತ್ಮಹತ್ಯೆ | ಕುಟುಂಬ ಸದಸ್ಯರ ಭೇಟಿಯಾದ ವಿಜಯೇಂದ್ರ; ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ...

ಬಿಎಂಟಿಸಿ ಬಸ್‌ ಚಾಲಕರ ಹುದ್ದೆಗೆ ಕನ್ನಡಿಗರ ಬದಲು ಕೇರಳದವರೇ ಬೇಕಾ: ಸರ್ಕಾರಕ್ಕೆ ಆರ್‌ ಅಶೋಕ್‌ ಪ್ರಶ್ನೆ

ಸಿಎಂ ಸಿದ್ದರಾಮಯ್ಯನವರೇ, ಬಿಎಂಟಿಸಿ ಬಸ್ಸು ಚಾಲಕರ ಹುದ್ದೆಗೆ ಕನ್ನಡಿಗರನ್ನು ನೇಮಕಾತಿ ಮಾಡಿಕೊಳ್ಳಲು...

ಪದವೀಧರರಿಗೆ ಹೆಂಡ ಕುಡಿಸಿ ಚಟಗಳ ದಾಸರನ್ನಾಗಿಸುತ್ತಿರುವ ಬಿಜೆಪಿ: ಕಾಂಗ್ರೆಸ್‌ ಕಿಡಿ

ಕಾಂಗ್ರೆಸ್ ಪಕ್ಷ ಪದವೀಧರರಿಗೆ ಯುವನಿಧಿ ಯೋಜನೆ ನೀಡಿದೆ, ಉದ್ಯೋಗ ಸೃಷ್ಟಿಸಲು ಶ್ರಮಿಸುತ್ತಿದೆ,...