ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮನೀಶ್ ಮೌದ್ಗಿಲ್ ಅವರನ್ನು ಪಾಲಿಕೆಯ ಕಂದಾಯ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಜತೆಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನ ಕಾರ್ಯಕಾರಿ ನಿರ್ದೇಶಕಿ ವಿನೋತ್ ಪ್ರಿಯಾ ಆರ್. ಅವರನ್ನು ಪಾಲಿಕೆಯ ದಕ್ಷಿಣ ವಲಯ ಆಯುಕ್ತೆಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕ ಕರೀಗೌಡ ಅವರನ್ನು ಬಿಬಿಎಂಪಿ ಯಲಹಂಕ ವಲಯ ಆಯುಕ್ತರನ್ನಾಗಿ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನಿರ್ದೇಶಕಿ(ಐಟಿ) ಸ್ನೇಹಲ್ ಆರ್. ಅವರನ್ನು ಬಿಬಿಎಂಪಿ ಪೂರ್ವ ವಲಯ ಆಯುಕ್ತೆಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಬಿಬಿಎಂಪಿ ವಿಶೇಷ ಆಯುಕ್ತೆ (ಎಸ್ಟೇಟ್ಸ್) ಪ್ರೀತಿ ಗೆಹ್ಲೋಟ್ ಅವರನ್ನು ಪಾಲಿಕೆಯ ದಾಸರಹಳ್ಳಿ ವಲಯ ಆಯುಕ್ತೆಯನ್ನಾಗಿ ಹಾಗೂ ರಿಯಲ್ ಎಸ್ಟೇಟ್ ರೆಗ್ಯುಲೇಟರಿ ಪ್ರಾಧಿಕಾರ (ರೇರಾ)ದ ಕಾರ್ಯದರ್ಶಿ ಇಬ್ರಾಹೀಂ ಮೈಗೂರ್ ಅವರನ್ನು ಪಾಲಿಕೆಯ ಮಹದೇವಪುರ ವಲಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಮಧ್ಯಾಹ್ನದ ನಂತರ ಬೆಂಗಳೂರಿನಲ್ಲಿ ಭಾರೀ ಮಳೆ; ನಿಧಾನಗತಿ ಸಂಚಾರ
ಮನೀಶ್ ಮೌದ್ಗಿಲ್ ಅವರು 1998 ರ ಬ್ಯಾಚ್ ಐಎಎಸ್ ಅಧಿಕಾರಿ. ಈ ಹಿಂದೆ ಸರ್ವೆ, ಸೆಟ್ಲ್ಮೆಂಟ್ ಮತ್ತು ಭೂ ದಾಖಲೆಗಳ ಆಯುಕ್ತ ಸೇರಿದಂತೆ ಹಲವು ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಜೂನ್ 2008 ರಿಂದ ಜೂನ್ 2009 ರವರೆಗೆ ರಾಮನಗರದ ಜಿಲ್ಲಾಧಿಕಾರಿಯಾಗಿದ್ದರು.