ಉಡುಪಿ | ಅನರ್ಹ ಬಿ.ಪಿ.ಎಲ್ ಕಾರ್ಡ್ ಗಳನ್ನು ಪತ್ತೆಹಚ್ಚುವ ಕಾರ್ಯಕ್ಕೆ ವೇಗ ನೀಡಿ : ಸಚಿವ ಕೆ.ಹೆಚ್ ಮುನಿಯಪ್ಪ

Date:

ಉಡುಪಿ ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಗುರುತಿಸಲು ಕಟ್ಟುನಿಟ್ಟಿನ ಕ್ರಮವಹಿಸುವುದರೊಂದಿಗೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಕಾನೂನು ಮಾಪನ ಶಾಸ್ತç ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದ ಆರ್ಥಿಕ ಸ್ಥಿತಿಯು ರಾಷ್ಟ್ರದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರದ ಸಮೀಕ್ಷೆ ಅನ್ವಯ ಸುಮಾರು 7 ಲಕ್ಷಕ್ಕೂ ಅಧಿಕ ಅನರ್ಹ ಬಿ.ಪಿ.ಎಲ್ ಕಾರ್ಡ್ಗಳು ಹೊಂದಿರುವ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರವು ಇಂತಹ ಅನುಮಾಸ್ಪದ ಪಡಿತರ ಚೀಟಿಗಳನ್ನು ಪರಿಷ್ಕರಣಾ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಇಂತಹ ಪಡಿತರ ಚೀಟಿಗಳನ್ನು ಶೀಘ್ರದಲ್ಲಿ ಎ.ಪಿ.ಎಲ್ ಕಾರ್ಡ್ಗೆ ಪರಿವರ್ತಿಸುವಂತೆ ತಿಳಿಸಿದ ಅವರು, ಒಂದು ವೇಳೆ ಅರ್ಹ ಬಿಪಿಎಲ್ ಕಾರ್ಡ್ಗಳು ಎ.ಪಿ.ಎಲ್ ಎಂದು ಪರಿವರ್ತನೆ ಹೊಂದಿದ್ದಲ್ಲಿ ಅಂಥವರು ಸಂಬಂಧಿಸಿದ ದಾಖಲೆಗಳನ್ನು ತಾಲೂಕಿನ ತಹಶೀಲ್ದಾರ್‌ಗಳಿಗೆ ಸಲ್ಲಿಸಿದ್ದಲ್ಲಿ ಅದನ್ನು ಶೀಘ್ರವೇ ಬಿಪಿಎಲ್ ಚೀಟಿಗೆ ಪರಿವರ್ತಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಜಿಲ್ಲೆಯಲ್ಲಿ ಅನರ್ಹ ಪಡಿತರ ಚೀಟಿದಾರರು ಪತ್ತೆಯಾದಲ್ಲಿ ಅಂತಹವರ ಪಡಿತರ ಚೀಟಿಗಳನ್ನು ಸರಕಾರದ ಮಾನದಂಡಗಳ ಅನ್ವಯ ಎ.ಪಿ.ಎಲ್ ಗೆ ಪರಿವರ್ತಿಸಲು ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಪಡಿತರ ಚೀಟಿ ಅಕ್ಕಿಯನ್ನು ಅಕ್ರಮ ದಾಸ್ತಾನು ಅಥವಾ ಮಾರಾಟ ಮಾಡುತ್ತಿದ್ದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 295 ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದು, 1,95,058 ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳಿದ್ದು, ಒಟ್ಟು 8,31,846 ಫಲಾನುಭವಿಗಳಿದ್ದಾರೆ. ಪಡಿತರ ವಿತರಣೆಯಲ್ಲಿ ರಾಜ್ಯದಲ್ಲಿಯೇ ಉಡುಪಿ ಜಿಲ್ಲೆಯು ಮೂರನೇ ಸ್ಥಾನದಲ್ಲಿದೆ. ಸೆಪ್ಟಂಬರ್ ಮಾಹೆಯಲ್ಲಿ 40375.45 ಕ್ವಿಂಟಾಲ್ ಅಕ್ಕಿ ವಿತರಣೆ ಮಾಡುವುದರೊಂದಿಗೆ ಶೇ. 78.42 ಪ್ರಗತಿ ಸಾಧಿಸಲಾಗಿರುತ್ತದೆ ಎಂದರು.

DSC03958

ಜಿಲ್ಲೆಯಲ್ಲಿ ಇ-ಕೆ.ವೈ.ಸಿ ಕಾರ್ಯ ಶೇ. 99.30 ಪೂರ್ಣಗೊಂಡಿದೆ. ಮನೆ ಮನೆಗೆ ಭೇಟಿ ನೀಡಿ ಇ-ಕೆ.ವೈ.ಸಿ ಕಾರ್ಯಗಳನ್ನು ಪೂರ್ಣಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸೆಪ್ಟಂಬರ್ ಮಾಹೆಯಲ್ಲಿ 2950 ಅನರ್ಹ ಪಡಿತರ ಚೀಟಿಗಳು ಪತ್ತೆಯಾಗಿದ್ದು, ಅದರಲ್ಲಿ 2739 ಅನ್ನು ಆದ್ಯತೇತರ ಪಡಿತರ ಚೀಟಿಗಳಾಗಿ ಪರಿವರ್ತಿಸಲಾಗಿದ್ದು, ಬಾಕಿ ಉಳಿದ 211 ಪಡಿತರ ಚೀಟಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಲು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಆದ್ಯತಾ ಪಡಿತರ ಚೀಟಿಗೆ 13,947 ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ 13,412 ಅರ್ಜಿಗಳನ್ನು ವಿಲೇವಾರಿ ಮಾಡಿ, 535 ಅರ್ಜಿಗಳು ಬಾಕಿ ಇವೆ. ಆದ್ಯತೇತರ ಪಡಿತರ ಚೀಟಿಗೆ 12,332 ಅರ್ಜಿಗಳು ಸಲ್ಲಿಕೆಯಾಗಿ 10,294 ಅರ್ಜಿಗಳನ್ನು ವಿಲೇವಾರಿ ಮಾಡಿ, 2038 ಅರ್ಜಿಗಳ ವಿಲೇವಾರಿಗೆ ಬಾಕಿ ಇವೆ. ಇವುಗಳ ವಿಲೇವಾರಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆಯಡಿ 9 ಪ್ರಕರಣಗಳು ದಾಖಲಾಗಿ 200.95 ಕ್ವಿಂಟಾಲ್ ಅಕ್ಕಿಯನ್ನು ಹಾಗೂ 3 ವಾಹನಗಳನ್ನು ವಶಪಡಿಸಿಕೊಂದು 2 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಅಂಗಡಿ ಮುಂಗಟ್ಟುಗಳು, ಮಾಲ್‌ಗಳು, ಪೆಟ್ರೋಲ್ ಪಂಪ್‌ಗಳಲ್ಲಿ ತೂಕ ಮತ್ತು ಅಳತೆಯ ತಪಾಸಣೆಯನ್ನು ನಿರಂತರವಾಗಿ ಕೈಗೊಳ್ಳಬೇಕು ಎಂದು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಯಾವುದೇ ಗ್ರಾಹಕರಿಗೆ ತೊಂದರೆ ಆಗದಂತೆ ಪ್ರತಿಯೊಂದು ಅಂಗಡಿಗಳನ್ನು ತಪಾಸಣೆ ನಡೆಸಿ ಮೋಸ ಕಂಡುಬಂದಲ್ಲಿ ಅಂಥವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಗ್ರಾಹಕರ ಹಿತರಕ್ಷಣೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು, ಸಾರ್ವಜನಿಕ ಸೇವೆಗಳನ್ನು ನೀಡುವಾಗ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು. ಗ್ರಾಹಕರು ದಿನನಿತ್ಯದ ವ್ಯವಹಾರಗಳಲ್ಲಿ ಮೋಸಹೋಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ರಶ್ಮಿ, ದ.ಕ ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಕಾನೂನು ಮಾಪನ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಆಹಾರ ನಿರೀಕ್ಷಕರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...