ಬೈಕ್ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಂತಾಮಣಿ ತಾಲೂಕಿನ ಡೆಕ್ಕನ್ ಆಸ್ಪತ್ರೆ ಹಿಂಭಾಗದ ಅಶ್ವಿನಿ ಬಡಾವಣೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ರಾಮಸ್ವಾಮಿ(45) ಕೊಲೆಯಾಗಿರುವ ವ್ಯಕ್ತಿ. ಈತ ಟಿಪ್ಪರ್ ಮತ್ತು ಜೆಸಿಬಿ ಮಾಲೀಕನಾಗಿದ್ದು, ನಗರದ ಅಶ್ವಿನಿ ಬಡಾವಣೆಯಲ್ಲಿ ವಾಸವಾಗಿದ್ದ. ಗುರವಾರ ರಾತ್ರಿ 9.30ರ ಸಮಯದಲ್ಲಿ ತಮ್ಮ ಸ್ಕೂಟಿಯಲ್ಲಿ ಬರುವಾಗ ಅಪರಿಚಿತ ವ್ಯಕ್ತಿಯೊಬ್ಬ ಬೈಕ್ ಅಡ್ಡಗಟ್ಟಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಇದನ್ನೂ ಓದಿ : ಈ ದಿನ ಸಂಪಾದಕೀಯ | ರಾಜ್ಯಪಾಲರ ಹದ್ದು ಮೀರಿದ ವರ್ತನೆ- ಗೆರೆ ಎಳೆಯುವುದೇ ಕಾಯ್ದಿರಿಸಿರುವ ಸುಪ್ರೀಮ್ ತೀರ್ಪು?
ಸ್ಥಳಕ್ಕೆ ಎಸ್ಪಿ ಕುಶಾಲ್ ಚೌಕ್ಸೆ ಹಾಗೂ ಚಿಂತಾಮಣಿ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಚಿಂತಾಮಣಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.