ಮಂಗಳೂರಿನಲ್ಲಿ ಮತ್ತೊಂದು ಕೊಲೆ; ಚೂರಿ ಇರಿದು ಹತ್ಯೆ

Date:

ವಿವಾಹಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದ್ದು, ಜಗಳದಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವಳಚ್ಚಲ್ ಬಳಿ ನಡೆದಿದೆ. ವಾಮಂಜೂರು ನಿವಾಸಿ ಸುಲೇಮಾನ್ ಎಂಬವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕೊಲೆ ಆರೋಪಿ ಮುಸ್ತಫಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಆರೋಪಿ ಮುಸ್ತಫಾಗೆ ಹತ್ಯೆಯಾಗಿರುವ ಸುಲೇಮಾನ್ ಅವರೇ ವಿವಾಹ ಮಾಡಿದ್ದರು. ಆದರೆ, ಆ ನಂತರದಲ್ಲಿ ಇಬ್ಬರ ನಡುವೆ ವೈಮನಸ್ಸು ಬೆಳೆದಿತ್ತು. ವಿವಾಹಕ್ಕೆ ಸಂಬಂಧಿಸಿದ ಹಣಕಾಸು ವಿಚಾರವಾಗಿ ಮಾತುಕತೆ ನಡೆಸಲು ಸುಲೇಮಾನ್ ಅವರು ತಮ್ಮಇಬ್ಬರು ಮಕ್ಕಳೊಂದಿಗೆ ಮುಸ್ತಫಾ ಮನೆಗೆ ಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ವೇಳೆ, ಇಬ್ಬರ ನಡುವೆ ಗಲಾಟೆ ನಡೆದಿದ್ದು, ಸುಲೇಮಾನ್ ಅವರಿಗೆ ಮುಸ್ತಫಾ ಚೂರಿಯಲ್ಲಿ ಇರಿದಿದ್ದಾನೆ. ಅಲ್ಲದೆ, ಸುಲೇಮಾನ್ ಅವರ ಪುತ್ರ ರಿಯಾಬ್ ಮತ್ತು ಸಿಯಾಬ್ ಮೇಲೂ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸುಲೇಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮುಸ್ತಫನನ್ನು ಬಂಧಿಸಿದ್ದಾರೆ.

ಇತ್ತೀಚೆಗಷ್ಟೇ, ಕೇರಳದ ವಯನಾಡು ಮುಲದ ಮುಸ್ಲಿಂ ಕಾರ್ಮಿಕನನ್ನು ಹಿಂದುತ್ವವಾದಿಗಳ ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿತ್ತು. ಈ ಘಟನೆ ಮಾಸುವ ಮುನ್ನವೇ, ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನ ಕೊಲೆಯಾಗಿತ್ತು. ಸುಹಾಸ್‌ ಶೆಟ್ಟಿಯನ್ನು ಬಿಜೆಪಿ ಕಾರ್ಯಕರ್ತನೆಂದು ಹೇಳಿಕೊಂಡಿದ್ದ ಬಿಜೆಪಿಗರು ಭಾರೀ ದಾಂಧಲೆ ಸೃಷ್ಟಿಸಿದ್ದರು. ಇದೀಗ, ಸಣ್ಣ ವೈಮನಸ್ಯದಿಂದ ಮತ್ತೊಂದು ಕೊಲೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ಸುಳ್ಯ | ಎಡಮಂಗಲದಲ್ಲಿ ʼಪ್ರಜಾಧ್ವನಿ ಕರ್ನಾಟಕʼ ಸಹಯೋಗದಲ್ಲಿ ಗಾಂಧಿ ಜಯಂತಿ

ಪ್ರಜಾಧ್ವನಿ ಕರ್ನಾಟಕ ಮತ್ತು ಸರಕಾರಿ ಪ್ರೌಢಶಾಲೆ ಎಡಮಂಗಲ ಇವುಗಳ ಸಹಯೋಗದಲ್ಲಿ ಭಾರತದ...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...