ಉಡುಪಿ | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದ ಪತಿ; ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಸಾವು !

Date:

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಗುಮ್ಮೆಟ್ಟು ನಿವಾಸಿ ಗೀತಾ ಅವರ ಮೇಲೆ ಸಂಸಾರಿಕ ಕಲಹದ ಹಿನ್ನೆಲೆಯಲ್ಲಿ ಪತಿ ಸುನೀಲ್ ಕುಮಾರ್ ನಡೆಸಿದ ಮಾರಣಾಂತಿಕ ಹಲ್ಲೆಗೆ ಒಳಗಾಗಿ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.

- Advertisement -

ಕಳೆದ ಮಂಗಳವಾರ ಗೀತಾ ಹಾಗೂ ಅವರ ಪತಿ ಸುನೀಲ್ ಕುಮಾರ್ ನಡುವೆ ಸಂಸಾರಿಕ ವಿಚಾರವಾಗಿ ಗಲಾಟೆ ನಡೆದಿದ್ದು, ಈ ಸಂದರ್ಭ ಸುನೀಲ್ ಕುಮಾರ್ ಗೀತಾ ಅವರನ್ನು ಕೊಲ್ಲುವ ಉದ್ದೇಶದಿಂದ ಯಾವುದೋ ಆಯುಧದಿಂದ ಹಣೆಗೆ ಹಾಗೂ ಗದ್ದಕ್ಕೆ ಹೊಡೆದು ಗಂಭೀರ ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಗೀತಾ ಅವರನ್ನು ತಕ್ಷಣ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಘಟನೆಯ ಹಿನ್ನೆಲೆಯಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಸುನೀಲ್ ಕುಮಾರ್ (44), ಅವರನ್ನು ಪೊಲೀಸರು ವಶಕ್ಕೆ ಪಡೆದು ಬಂಧನ ಮಾಡಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಮುಂದುವರಿದಂತೆ, ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಗೀತಾ ಅವರ ವೈದ್ಯಕೀಯ ಪರೀಕ್ಷೆಯಲ್ಲಿ ಎದೆ ಭಾಗದ ಮೂಳೆಗಳು ಮುರಿದಿದ್ದು, ಹೊಟ್ಟೆಯ ಒಳಭಾಗಕ್ಕೆ ತೀವ್ರ ಗಾಯವಾಗಿರುವುದು ದೃಢಪಟ್ಟಿತ್ತು. ಆದರೆ ಚಿಕಿತ್ಸೆಗೂ ಸ್ಪಂದಿಸದೇ ಗೀತಾ ಅವರು ಸೋಮವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ದಾಖಲಾಗಿದ್ದ ಕೊಲೆಗೆ ಯತ್ನ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಲಾಗಿದ್ದು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...