ಮುಸ್ಲಿಂ ಯುವಕನ ಹತ್ಯೆ ಹಿನ್ನೆಲೆ: ಮೇ 30ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ದ.ಕ. ಜಿಲ್ಲಾಡಳಿತ ಆದೇಶ

Date:

Advertisements

ಮಂಗಳೂರಿನ ಕೊಳತ್ತಮಜಲು ಎಂಬಲ್ಲಿ ಪಿಕಪ್ ಚಾಲಕನಾಗಿದ್ದ ಅಮಾಯಕ ಅಬ್ದುಲ್ ರಹಿಮಾನ್ ಎಂಬವರನ್ನು ದುಷ್ಕರ್ಮಿಗಳ ಗುಂಪು ತಲವಾರಿನಿಂದ ದಾಳಿ ನಡೆಸಿ ಹತ್ಯೆ ಮಾಡಿದೆ.

ಘಟನೆಯಲ್ಲಿ ರಹೀಂ ಅವರೊಂದಿಗೆ ಇದ್ದ ಇನ್ನೋರ್ವ ಯುವಕ ಇಮ್ತಿಯಾಝ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಫಳ್ನೀರ್‌ನಲ್ಲಿರುವ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ನಿಷೇಧಾಜ್ಞೆ ಜಾರಿಗೊಳಿಸಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಮಂಗಳವಾರ(ಮೇ 27)ದಂದು ನಡೆದಿದ್ದು, ಘಟನೆಯ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisements

ಈ ಘಟನೆಯ ಬಳಿಕ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ವರದಿಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಮೇ 30ರವರೆಗೆ ನೂತನ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆಯ 163ನೇ ಕಲಂ ಅಡಿ ನಿಷೇಧಾಜ್ಞೆ ಜಾರಿಗೊಳಿಸಿದೆ.

ಈ ಬಗ್ಗೆ ಆದೇಶ ಹೊರಡಿಸಿರುವ ಜಿಲ್ಲಾಡಳಿತವು, ‘ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ದಿನಾಂಕ 2025ರ ಮೇ 27ರಿಂದ ಮೇ 30ರ ಸಂಜೆ ಆರು ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ” ಎಂದು ತಿಳಿಸಿದೆ.

ಈ ನಿಷೇಧ್ಞಾಜೆಯ ಅವಧಿಯಲ್ಲಿ, ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗಾಡುವುದನ್ನು ನಿಷೇಧಿಸಲಾಗಿದೆ.

ಇದನ್ನು ಓದಿದ್ದೀರಾ? ಮಂಗಳೂರು | ಯುವಕನ ಹತ್ಯೆ; ದ್ವೇಷ ಹರಡುವವರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ: ಮುಸ್ಲಿಮರಿಂದ ಆಕ್ರೋಶ

ಈ ನಿಷೇಧ್ಞಾಜೆಯ ಅವಧಿಯಲ್ಲಿ ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ, ಜಾಲತಾಣಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಕೃತ್ಯ ಎಸಗುವುದು ಅಥವಾ ಕೃತ್ಯ ಎಸಗಲು ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಲಾಗಿದೆ.

ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿ, ಬಂದೂಕು, ಲಾಠಿಗಳನ್ನು ಅಥವಾ ದೈಹಿಕವಾಗಿ ಹಿಂಸೆಯನ್ನು ಉಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದು ಅಥವಾ ಹೊಂದುವುದನ್ನು ನಿಷೇಧಿಸಲಾಗಿದೆ.

ಪಟಾಕಿಗಳನ್ನು ಸಿಡಿಸುವುದು ಅಥವಾ ಯಾವುದೇ ಆಸಿಡ್ ಅಥವಾ ಸ್ಫೋಟಕ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

ವ್ಯಕ್ತಿಗಳ, ಶವಗಳ ಅಥವಾ ಆಕೃತಿ ಹಾಗೂ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ.
ಕಲ್ಲುಗಳನ್ನು ಅಥವಾ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು, ಶೇಖರಿಸುವುದನ್ನು ಅಥವಾ ತಯಾರಿಸುವುದನ್ನು ನಿಷೇಧಿಸಲಾಗಿದೆ.

ಸರ್ಕಾರಿ ಸಂಸ್ಥೆಗಳು/ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ನಿಂದಿಸುವಂತಹ, ಅವಹೇಳನಕಾರಿಯಾದಂತಹ ಯಾವುದೇ ಘೋಷಣೆಗಳು/ಭಾಷಣಗಳು, ಪ್ರತಿಭಟನೆಗಳು, ಅವಾಚ್ಯ ಶಬ್ದಗಳ ಬಳಕೆ, ಪ್ರಚೋದನಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ನಿಷೇಧಾಜ್ಞೆಯು ಜಾರಿಯಲ್ಲಿರುವ ಪ್ರದೇಶದಲ್ಲಿ ಸರ್ಕಾರದಿಂದ ಅಥವಾ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ. ಮತ್ತು ಪೊಲೀಸ್ ಅಧಿಕಾರಿಗಳು, ಬ್ಯಾಂಕ್ ಭದ್ರತಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಣೆಯ ವೇಳೆ ಲಾಠಿ/ ಶಸ್ತ್ರಾಸ್ತ್ರ ಮತ್ತು ಸಂಪರ್ಕ ಉಪಕರಣಗಳನ್ನು ಉಪಯೋಗಿಸುವುದಕ್ಕೆ ಅನ್ವಯವಾಗುವುದಿಲ್ಲ ಎಂದು ನಿಷೇಧ್ಞಾಜೆಯ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X