ಮುರುಡೇಶ್ವರ: ಚಿನ್ನದ ಸರ ಸುಲಿಗೆ ಮಾಡಿದ ನಾಲ್ವರು ಮಂಗಳಮುಖಿಯರ ಬಂಧನ

Date:

ಮುರುಡೇಶ್ವರ: ಸ್ಕೂಟಿಗೆ ಪೆಟ್ರೋಲ್ ತುಂಬಿಸಿಕೊಂಡು ಮನೆಗೆ ಮರಳುತ್ತಿದ್ದ ಕಾಲೇಜು ಸಿಬ್ಬಂದಿಯೊಬ್ಬರನ್ನು ಅಡ್ಡಗಟ್ಟಿದ ನಾಲ್ವರು ಮಂಗಳಮುಖಿಯರ ಗುಂಪೊಂದು, ಅವರ ಮೈಮೇಲೆ ಕೈಹಾಕಿ ಅಸಭ್ಯವಾಗಿ ವರ್ತಿಸಿ, ಕುತ್ತಿಗೆಯಲ್ಲಿದ್ದ ಅಂದಾಜು 1 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾದ ಘಟನೆ ಭಾನುವಾರ ರಾತ್ರಿ ಮುರ್ಡೇಶ್ವರದ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.

- Advertisement -

ಮಾವಳ್ಳಿ ನಿವಾಸಿ, ಆರ್.ಎನ್.ಎಸ್. ಡಿಪ್ಲೋಮಾ ಕಾಲೇಜಿನಲ್ಲಿ ಲ್ಯಾಬ್ ಇನ್‌ಚಾರ್ಜ್ ಆಗಿ ಕೆಲಸ ಮಾಡುತ್ತಿರುವ ಅರುಣ ಕುಮಾರ ಭಾಸ್ಕರ ನಾಯ್ಕ (32) ದೂರು ನೀಡಿದವರಾಗಿದ್ದಾರೆ. ರವಿವಾರರಂದು ರಾತ್ರಿ ಸುಮಾರು 10:30 ಗಂಟೆಯ ಸಮಯದಲ್ಲಿ ಅರುಣ್ ಕುಮಾರ್ ಅವರು ತಮ್ಮ ಸ್ಕೂಟಿಗೆ ಪೆಟ್ರೋಲ್ ಖಾಲಿಯಾಗಿದ್ದರಿಂದ, ಪೆಟ್ರೋಲ್ ತುಂಬಿಸಿಕೊಂಡು ರಾಷ್ಟ್ರೀಯ ಹೆದ್ದಾರಿ-66ರ ಸರ್ವೀಸ್ ರಸ್ತೆಯಲ್ಲಿ ಮುರ್ಡೇಶ್ವರ ರೈಲ್ವೇ ನಿಲ್ದಾಣದ ಬಳಿ ಬರುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಈ ವೇಳೆ ಇಬ್ಬರು ಮಂಗಳಮುಖಿಯರು ಕೈ ಮಾಡಿ ಅವರ ಗಾಡಿಯನ್ನು ನಿಲ್ಲಿಸಿದ್ದಾರೆ. ಅರುಣ್ ಅವರು ಸ್ಕೂಟಿ ನಿಲ್ಲಿಸುತ್ತಿದ್ದಂತೆ, ಅಸಭ್ಯ ಪ್ರಶ್ನೆ ಕೇಳಿದ್ದಾರೆ. ಅಷ್ಟರಲ್ಲಿ ರೈಲ್ವೇ ನಿಲ್ದಾಣದ ಕಡೆಯಿಂದ ಬಂದ ಮತ್ತೆ ಇಬ್ಬರು ಮಂಗಳಮುಖಿಯರು ಸೇರಿಕೊಂಡು, ಏಕಾಏಕಿ ಅರುಣ್ ಅವರ ಮೈಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದಾರೆ. ಅರುಣ್ ಅವರು “ಈ ರೀತಿ ಮಾಡಬೇಡಿ” ಎಂದು ತಡೆದಾಗ, ಅವರಲ್ಲೊಬ್ಬಳು “ನಿನ್ನ ಹತ್ತಿರ ಎಷ್ಟು ದುಡ್ಡಿದೆ?” ಎಂದು ಕೇಳಿದ್ದಾಳೆ. ಅದಕ್ಕೆ ಅರುಣ್ “ನನ್ನ ಬಳಿ ದುಡ್ಡು ಇಲ್ಲ” ಎಂದು ಉತ್ತರಿಸಿದ್ದಾರೆ. ಆಗ ನಾಲ್ವರೂ ಸೇರಿ ಅರುಣ್ ಅವರ ಕೈ ಹಿಡಿದು ಎಳೆದಾಡಿ, ಮೈಮೇಲೆ ಬಿದ್ದು ಅಸಭ್ಯವಾಗಿ ವರ್ತಿಸಿದ್ದಾರೆ. ಈ ಗದ್ದಲದ ನಡುವೆಯೇ, ಮಂಗಳಮುಖಿಯೊಬ್ಬಳು ಅರುಣ್ ಅವರ ಕುತ್ತಿಗೆಗೆ ಕೈಹಾಕಿ, ಅವರ ಕುತ್ತಿಗೆಯಲ್ಲಿದ್ದ ಸುಮಾರು 15 ಗ್ರಾಂ ತೂಕದ, 1 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಬಲವಂತವಾಗಿ ಕಿತ್ತುಕೊಂಡು ಮಂಕಿ ಕಡೆಯ ರಸ್ತೆಗೆ ಓಡಿ ಹೋಗಿ ಪರಾರಿಯಾಗಿದ್ದಾರೆ.

1000281383

ಈ ಸುದ್ದಿ ಓದಿದ್ದೀರಾ? ಶಿರಸಿ | ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ – ಏಜೆಂಟ್ ಹಾಗೂ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ತಕ್ಷಣವೇ ಅರುಣ್ ಕುಮಾರ್ ಅವರು ಕೂಗಿಕೊಂಡಾಗ, ಅಕ್ಕಪಕ್ಕದ ಜನರು ಸ್ಥಳಕ್ಕೆ ದೌಡಾಯಿಸಿದ್ದಾರೆ, ಅವರಿಗೆ ನಡೆದ ವಿಷಯವನ್ನು ತಿಳಿಸಿ. ಘಟನೆಯ ನಂತರ ಅರುಣ್ ಕುಮಾರ್ ಠಾಣೆಗೆ ತೆರಳಿ ದೂರು ನೀಡಿದ್ದು, ಪ್ರಕರಣ ದಾಖಲಾದ ಬಳಿಕ ಪೊಲೀಸರು ತಕ್ಷಣ ಶೋಧ ಕಾರ್ಯ ಆರಂಭಿಸಿದ್ದಾರೆ. ತನಿಖೆ ಮುಂದುವರೆಸಿದ ಮುರ್ಡೇಶ್ವರ ಠಾಣೆ ಪೊಲೀಸರು, ಆರೋಪಿಗಳನನ್ನು ಖಚಿತ ಮಾಹಿತಿ ಆಧಾರದಲ್ಲಿ ಸೋಮವಾರ ರಾತ್ರಿ ನಾಲ್ವರು ಮಂಗಳಮುಖಿಯರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರನ್ನು ವಿಚಾರಣೆಗಾಗಿ ಠಾಣೆಗೆ ಕರೆತರಲಾಗಿದೆ. ಮುರ್ಡೇಶ್ವರ ಠಾಣೆ ಪೊಲೀಸರು ಆರೋಪಿಗಳ ವಿರುದ್ಧ ಮುಂದಿನ ತನಿಖೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...